
ನಂಜನಗೂಡು; ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಹೆಣ್ಣು ಚಿರತೆಯೊಂದು ಬಿದ್ದು ಸೆರೆಯಾದ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ನಡೆದಿದೆ.
ಚುಂಚನಹಳ್ಳಿ ಸುತ್ತಮುತ್ತ ಹಲವು ದಿನಗಳಿಂದ ಚಿರತೆಗಳ ಹಾವಳಿ ಹೆಚ್ಚಾಗಿತ್ತು. ಚಿರತೆಗಳ ಓಡಾಟದಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಚುಂಚನಹಳ್ಳಿ ಮಾತ್ರವಲ್ಲದೆ ಕೋಣನೂರು, ಹನುಮನಪುರ, ಪಿ.ಮರಹಳ್ಳಿ ಹಾಗೂ ದಾಸನೂರು ಗ್ರಾಮಗಳಲ್ಲೂ ಚಿರತೆಗಳ ಹಾವಳಿ ಕಂಡುಬAದಿತ್ತು.
ಇತ್ತೀಚೆಗೆ ಜಾನುವಾರುಗಳ ಮೇಲೆ ಚಿರತೆಗಳು ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ರೈತರಲ್ಲಿ ಭೀತಿ ಹೆಚ್ಚಾಗಿತ್ತು.
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಬೋನು ಇರಿಸಿ ಚಿರತೆಯ ಸೆರೆಗೆ ಕಾರ್ಯಾಚರಣೆ ನಡೆಸಿತ್ತು. ಇದೀಗ 2 ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದ್ದು, ವಿಷಯ ಕೇಳಿ ಗ್ರಾಮಸ್ಥರು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸೆರೆಯಾದ ಚಿರತೆಯನ್ನು ಅರಣ್ಯಾಧಿಕಾರಿಗಳು ಅಲ್ಲಿಂದ ಸ್ಥಳಾಂತರಿಸಿದ್ದಾರೆ