Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆರೋಗ್ಯಯುತ ಜೀವನಕ್ಕೆ ಆಯುರ್ವೇದ ಅಗತ್ಯ; ಡಾ. ಚಂದ್ರಶೇಖರ್


ಮೈಸೂರು: ‘ಒತ್ತಡದ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ, ಧ್ಯಾನ, ಆಯುರ್ವೇದ ಆಹಾರ ಕ್ರಮಗಳು ಪ್ರಸ್ತುತ ದಿನಗಳಲ್ಲಿ ಅಗತ್ಯವಾಗಿವೆ’ ಎಂದು ಆಯುರ್ವೇದ ಹಿರಿಯ ವೈದ್ಯ ಡಾ. ಚಂದ್ರಶೇಖರ್ ಹೇಳಿದರು.
ನಗರದ ಚಾಮುಂಡಿಪುರAನಲ್ಲಿ ಸ್ನೇಹ ಬಳಗದ ವತಿಯಿಂದ ರಾಷ್ಟಿçÃಯ ಆಯುರ್ವೇದ ದಿನಾಚರಣೆ ಅಂಗವಾಗಿ
ಸಾರ್ವಜನಿಕರಿಗೆ ಆಯುರ್ವೇದ ಗಿಡಗಳನ್ನು ವಿತರಿಸುವ ಮೂಲಕ ಆಯುರ್ವೇದದಿಂದ ಆಗುವ ಉಪಯೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,
ಆಯುರ್ವೇದ ವೈದ್ಯ ಪದ್ಧತಿ ಕಾಯಿಲೆ ಗುಣಪಡಿಸುವ ಜತೆಗೆ ಆರೋಗ್ಯಯುತ ಜೀವನ ನಡೆಸುವ ಕ್ರಮವನ್ನು ಕಲಿಸುತ್ತದೆ. ಹಾಗಾಗಿ
‘ಆಯುರ್ವೇದದ ಬಗ್ಗೆ ಜನರಿಗೆ ತಿಳಿವಳಿಕೆ ಬರಲು ಹೆಚ್ಚಿನ ಪ್ರಚಾರದ ಅಗತ್ಯ ಇದೆ’ ಎಂದರು.
ನAತರ ನಗರಪಾಲಿಕೆಯ ಮಾಜಿ ಮೇಯರ್ ಸಂದೇಶ ಸ್ವಾಮಿ ಮಾತನಾಡಿ, ಆರೋಗ್ಯಕ್ಕಾಗಿ ಆಸ್ಪತ್ರೆಗಳನ್ನು ಅವಲಂಬಿಸಬಾರದು. ಅಡುಗೆ ಮನೆಯ ಸಾಂಬಾರ ಬಟ್ಟಲಿನಲ್ಲಿ ಆರೋಗ್ಯ ಕಾಯುವ ಪದಾರ್ಥಗಳಿರುತ್ತವೆ. ಅವುಗಳ ಸರಿಯಾದ ಸೇವನೆಯ ಮಹತ್ವ ಅರಿಯಬೇಕು’ ಎಂದರು.
ಆಯುರ್ವೇದ ಸಸ್ಯಗಳ ಬಳಕೆ ಮೂಲಕ ದೀರ್ಘಾವಧಿ ಕಾಯಿಲೆಗಳಿಗೆ ತುತ್ತಾಗುವುದನ್ನು ತಡೆಯಬಹುದು. ಹೀಗಾಗಿ ಜನಸಾಮಾನ್ಯರಿಗೆ ದಿನ ನಿತ್ಯ ಉಪಯೋಗಕ್ಕೆ ಬರುವ ಗಿಡಮೂಲಿಕೆ ಗಳ ಬಗ್ಗೆ ಅರಿವು ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಕಾರ್ಯಕ್ರಮಗಳು ಅಗತ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿP್ಪರಿಗೆ ಆಯುರ್ವೇದ ಸಸ್ಯಗಳಾದ ಅಮೃತ ಬಳ್ಳಿ, ಕೃಷ್ಣ ತುಳಸಿ, ರಾಮ ತುಳಸಿ, ಬೆಟ್ಟದ ನೆಲ್ಲಿಕಾಯಿ, ದೊಡ್ಡಿಪತ್ರೆ, ಅಗಸೆ ಗಿಡ, ನೇರಳೆ ಗಿಡ, ಬೇವಿನ ಗಿಡ, ಅರಿಶಿನ ಗಿಡ ಸೇರಿದಂತೆ ಇನ್ನಿತರ ಗಿಡ ಗಳನ್ನು ವಿತರಣೆ ಮಾಡಲಾಯಿತು
ಇದೇ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪಾಯಿ , ವಿಪ್ರ ಪ್ರೊಫೆಷನಲ್ ಫೋರಂ ಅಧ್ಯಕ್ಷ ಮುರುಳಿ , ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಕೆ ಆರ್ ಸತ್ಯನಾರಾಯಣ್, ನಗರ ಪಾಲಿಕೆಯ ಮಾಜಿ ಸದಸ್ಯರಾದ ಜಗದೀಶ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಸುರೇಶ್, ಟಿ.ಎಸ್.ಅರುಣ್, ದೂರ ರಾಜಣ್ಣ, ಸುಚಿಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು