
ಪಿರಿಯಾಪಟ್ಟಣ : ಬೆಟ್ಟದಪುರ ಸರ್ಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ್ ರವರಿಗೆ ಜೀ ಕನ್ನಡ ವಾಹಿನಿಯು ಸಾಧಕರ ಪ್ರಶಸ್ತಿ ನೀಡಿ ಗೌರವಿಸಿದೆ.
ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಆರೋಗ್ಯ ಸೇವೆ, ಸಮಾಜ ಸೇವೆ, ಕೃಷಿ ಮತ್ತು ಪರಿಸರ ಸಂರಕ್ಷಣೆ, ಕ್ರೀಡೆ, ಉದ್ಯಮ ಹಾಗೂ ನವೋದ್ಯಮ, ಕಲೆ ಮತ್ತು ಸಂಸ್ಕೃತಿ, ಆಡಳಿತ ಮತ್ತು ಸಾರ್ವಜನಿಕ) ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಪ್ರತಿ ವರ್ಷವೂ ಗೌರವಿಸುತ್ತಾ ಬಂದಿರುವ ಜೀ ಕನ್ನಡ ವಾಹಿನಿಯ ಈ ಬಾರಿ ಕೂಡ ಅನೇಕ ಸಾಧಕರನ್ನು ಗುರುತಿಸಿ ಗೌರವಿಸಿದೆ
ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಬೆಟ್ಟದಪುರ ಸರ್ಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ್ ರವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಗಮನಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಮ. ನಿ. ಪ್ರ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಮುಖ್ಯ ಅತಿಥಿಗಳಾಗಿ ಸಚಿವರಾದ ರಾಮಲಿಂಗಾರೆಡ್ಡಿ, ಯು ಟಿ ಖಾದರ್, ಸಂತೋಷ್ ಲಾಡ್, ದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್
ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಟ, ಮಾಜಿ ಸಚಿವ ಬಿ ಸಿ ಪಾಟೀಲ್, ನಟಿ ಶುಭ ಪೂಂಜಾ, ಮ್ಯಾಕಿಸ್ ಗ್ರೂಪ್ ಆಫ್ ಕಂಪನೀಸ್ ಸಂಸ್ಥಾಪಕ ಅಧ್ಯಕ್ಷ ಮಾಧವ್ ಕಿರಣ್, ಬಂಡೆ ಮಹಾಕಾಳಿ ದೇವಸ್ಥಾನ ಟ್ರಸ್ಟಿ ಹಾಗೂ ನಿರ್ಮಾಪಕಿ ಜಿ ಎಸ್ ಲತಾ ಜಯಪ್ರಕಾಶ್ ಹಾಜರಿದ್ದರು,