Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ದಸರಾ ಕವಿಗೋಷ್ಠಿ ಉದ್ಘಾಟನೆಗೆ ವೈದೇಹಿಗೆ ಆಹ್ವಾನ


ಮೈಸೂರು: ಈ ಬಾರಿ ನಡೆಯಲಿರುವ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಅಕ್ಟೋಬರ್ 13ರಿಂದ 17ರ ವರೆಗೆ ನಡೆಯುವ ಕವಿಗೋಷ್ಠಿಯನ್ನು ಕನ್ನಡದ ಮಹತ್ವದ ಕವಯಿತ್ರಿ ವೈದೇಹಿ ಉದ್ಘಾಟಿಸಲಿದ್ದಾರೆ. ಈ ಸಂಬAಧ ಮಣಿಪಾಲದಲ್ಲಿರುವ ಅವರ ನಿವಾಸಕ್ಕೆ ತೆರಳಿ ಸೆಪ್ಟೆಂಬರ್ 25ರಂದು ಬೆಳಿಗ್ಗೆ 11 ಗಂಟೆಗೆ ದಸರಾ ಕವಿಗೋಷ್ಠಿ ಸಮಿತಿ ಅಧಿಕೃತವಾಗಿ ಆಹ್ವಾನಿಸಲಿದೆ.
ಈ ಸಂದರ್ಭದಲ್ಲಿ ಕವಿಗೋಷ್ಠಿ ಸಮಿತಿ ಕಾರ್ಯಾಧ್ಯಕ್ಷರೂ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕರೂ ಆದ ಪ್ರೊ.ನಂಜಯ್ಯ ಹೊಂಗನೂರು, ಕವಿಗೋಷ್ಠಿ ಆಯ್ಕೆ ಸಮಿತಿ ಸದಸ್ಯರಾದ ಡಾ.ತ್ರಿವೇಣಿ ಹಾಗೂ ಡಾ.ಉಮೇಶ್ ಬೇವಿನಹಳ್ಳಿ ಹಾಜರಿರುವರು ಎಂದು ಪ್ರಕಟಣೆ ತಿಳಿಸಿದೆ.