Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ


ಹುಣಸೂರು: ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಲಕ್ಕನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕಾಂತಾ ಎಂಬವರ ಪತ್ನಿ ಎಂ.ಆರ್. ಸಂಧ್ಯಾ ಆತ್ಮಹತ್ಯೆ ಮಾಡಿಕೊಂಡವಳು.
ಗ್ರಾಮದ ವಿಕಾಸ್ ಎಂಬಾತನೊAದಿಗೆ ಸಂಧ್ಯಾ ಅಕ್ರಮ ಸಂಬAಧ ಹೊಂದಿದ್ದರು ಎನ್ನಲಾಗಿದ್ದು, ಮೊಬೈಲ್ ನಲ್ಲಿದ್ದ ಮೆಸೇಜ್‌ಗಳು ಹಾಗೂ ವಿಡಿಯೋಗಳನ್ನು ಇಟ್ಟುಕೊಂಡು ಆಕೆಯನ್ನು ಬ್ಲಾ÷್ಯಕ್‌ಮೇಲ್ ಮಾಡಲಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಸಂಧ್ಯಾ ವಿಷದ ಗುಳಿಗೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ವಿಕಾಸ್, ಕುಮಾರ್ ಹಾಗೂ ವಸಂತ ಎಂಬವರ ವಿರುದ್ಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಘಟನೆ ಬಳಿಕ ವಿಕಾಸ್ ಪರಾರಿಯಾಗಿದ್ದು, ಆತನಿಗಾಗಿ ಬಿಳಿಕೆರೆ ಠಾಣೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಆರೋಪಿಯನ್ನು ಬಂಧಿಸುವ ಭರವಸೆ ನೀಡಿದ್ದರೂ, ಕುಟುಂಬಸ್ಥರು ಮತ್ತು ಗ್ರಾಮಸ್ಥರು ಶವದ ಪಂಚನಾಮೆ ಹಾಗೂ ಮರಣೋತ್ತರ ಪರೀಕ್ಷೆಗೆ ಸಹಕರಿಸಲು ನಿರಾಕರಿಸಿದ್ದಾರೆ.