Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬಿಜೆಪಿಯಿಂದ “ಕಾಂಗ್ರೆಸ್ ಸರ್ಕಾರದ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ


ಮೈಸೂರು: ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆಯಂದು ಆರೋಪಿಸಿ ಬಿಜೆಪಿನಗರ ಹಾಗೂ ಗ್ರಾಮಾಂತರ ಘಟಕದಿಂದ ಗುರುವಾರ ನಗರದಲ್ಲಿ “ಕಾಂಗ್ರೆಸ್ ಸರ್ಕಾರದ ಅಣಕು ಶವಯಾತ್ರೆ” ಪ್ರತಿಭಟನೆಯನ್ನು ನಡೆಸಿತು.
ನಗರದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿನ ಸೂತಮುತ್ತಲಿನ ಪ್ರದೇಶಗಳಲ್ಲಿ ಕಾಂಗ್ರೆಸ್ ಸರ್ಕಾರದ ಅಣಕು ಶವಯಾತ್ರೆ ನಡೆಸಿ, ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿರುವುದನ್ನು ತೀವ್ರವಾಗಿ ಖಂಡಿಸಿದರು. ಕಾಂಗ್ರೆಸಿನ ನಾಯಕ ರಾಹುಲ್ ಗಾಂಧಿಯವರ ಪೋಟೋಗಳನ್ನು ಹರಿಯುವ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಮಂಗಳೂರಿಗೆ 32 ಸಾವಿರ ಕೋಟಿ ವಿಶೇಷ ಅನುದಾನ ನೀಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಸರ್ಕಾರದ ಬಳಿ ಹಣ ಎಲ್ಲಿದೆ?” ಎಂದು ಪ್ರಶ್ನಿಸಿದರು.
“ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಪರಿಹಾರ ನೀಡಲು ಸರ್ಕಾರದ ಬಳಿ ಹಣವಿಲ್ಲ. ಆದರೆ ಕೇಂದ್ರ ಸರ್ಕಾರದತ್ತ ಕೈ ತೋರಿಸುತ್ತೀರಿ. ಇದೀಗ ಹಾಲಿನ ದರ ಏರಿಕೆ ಮಾಡಲು ಮುಂದಾಗಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆ ಇದೆಯೋ ಇಲ್ಲವೋ ಎಂಬ ಅನುಮಾನ ಮೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ರೌಡಿಗಳ ಹಾವಳಿ ಹೆಚ್ಚಾಗಿದೆ ಎಂದು ಅವರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ,ಬಿಜೆಪಿ ನಗರಾಧ್ಯಕ್ಷ ನಾಗೇಂದ್ರ, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಸುಬ್ಬಣ್ಣ, ನಗರ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಅರ್ಜುನ್ ಪಾರ್ಥ,ಮಂಡಲ ಅಧ್ಯಕ್ಷರುಗಳಾದ ದಿನೇಶ್ ಗೌಡ, ರಾಕೇಶ್ ಭಟ್, ಮಂಜುನಾಥ್ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು.