Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅರಮನೆ ಆವರಣದಲ್ಲಿ ಪೊಲೀಸರಿಂದ ಕುಶಲತೋಪು ಸಿಡಿಸುವ ಫಿರಂಗಿಗಳಿಗೆ ಪೂಜೆ


ಮೈಸೂರು; ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ವಿಜಯದಶಮಿ ಜಂಬೂಸವಾರಿಯ ಪ್ರಮುಖ ಸಂಪ್ರದಾಯಗಳಲ್ಲಿ ಒಂದಾದ ಕುಶಾಲತೋಪು ಸಿಡಿಸುವ ಫಿರಂಗಿ ಗಾಡಿಗಳಿಗೆ ಶುಕ್ರವಾರ ನಗರದ ವಿಶ್ವ ಪ್ರಸಿದ್ಧ ಅಂಬಾ ವಿಲಾಸ ಅರಮನೆಯ ಆವರಣದಲ್ಲಿ ಪೊಲೀಸರಿಂದ ವಿಶೇಷ ಪೂಜೆ ನೆರವೇರಿಸಲಾಯಿತು.
ಅರಮನೆಯ ಆನೆ ಬಾಗಿಲಿನ ಬಳಿ ಇರುವ 11 ಫಿರಂಗಿ ಗಾಡಿಗಳಿಗೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಸಂಪ್ರದಾಯಬದ್ಧವಾಗಿ ಪೂಜೆ ಸಲ್ಲಿಸಲಾಯಿತು. ಅರಮನೆಯ ಅರ್ಚಕ ಪ್ರಹ್ಲಾದ್ ರಾವ್ ಅವರು ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಫಿರಂಗಿ ಗಾಡಿಗಳಿಗೆ ಪೂಜೆ ನೆರವೇರಿಸಿದರು.
ವಿಜಯದಶಮಿ ದಿನ ನಡೆಯಲಿರುವ ಜಂಬೂಸವಾರಿ ಮೆರವಣಿಗೆಯಲ್ಲಿ 21 ಬಾರಿ ಕುಶಾಲತೋಪು ಸಿಡಿಸುವ ಮೂಲಕ ದಸರಾ ವೈಭವಕ್ಕೆ ಮತ್ತಷ್ಟು ಮೆರುಗು ನೀಡಲಾಗುತ್ತದೆ.
ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಗೆ ಮುಖ್ಯಮಂತ್ರಿ ಸೇರಿದಂತೆ ಗಣ್ಯರು ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ. ಈ ವೇಳೆ ರಾಷ್ಟçಗೀತೆ ನುಡಿಸಲಾಗುತ್ತದೆ.
ರಾಷ್ಟçಗೀತೆ ಮೊಳಗುತ್ತಿರುವ ಸಂದರ್ಭದಲ್ಲಿ 21 ಬಾರಿ ಕುಶಾಲತೋಪು ಸಿಡಿಸುವ ಮೂಲಕ ಪೊಲೀಸರು ಗೌರವ ವಂದನೆ ಸಲ್ಲಿಸಿವುದು ಪ್ರಮುಖ ಸಾಂಪ್ರದಾಯಿಕ ಕಾರ್ಯಕ್ರಮವಾಗಿದೆ. ರಾಷ್ಟçಗೀತೆ ಪೂರ್ಣಗೊಳ್ಳುವಷ್ಟರಲ್ಲಿ 21 ಕುಶಾಲತೋಪುಗಳ ಸಿಡಿತ ಪೂರ್ಣಗೊಳ್ಳುವಂತೆ ತಾಲೀಮು ನಡೆಸಲಾಗುತ್ತದೆ.
ಕುಶಾಲತೋಪು ಸಿಡಿಸುವ ಕಾರ್ಯಕ್ಕೆ ಸಂಬAಧಿಸಿದAತೆ ಮೈಸೂರು ನಗರ ಸಶಸ್ತç ಮೀಸಲು ಪಡೆ ಪೊಲೀಸರು ಪೂರ್ವಾಭ್ಯಾಸ ನಡೆಸುತ್ತಿದ್ದಾರೆ. ಜಂಬೂಸವಾರಿ ದಿನ ಯಾವುದೇ ಲೋಪವಾಗದಂತೆ ಸಮಯ, ಸಮನ್ವಯ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಸಿಬ್ಬಂದಿಗೆ ತಾಲೀಮು ನೀಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಫಿರಂಗಿ ಗಾಡಿಗಳಿಗೆ ಇಂದು ವಿಶೇಷ ಪೂಜೆ ಸಲ್ಲಿಸುವ ಮೂಲಕ ದಸರಾ ಸಂಪ್ರದಾಯಕ್ಕೆ ಚಾಲನೆ ನೀಡಲಾಯಿತು.
ಪೂಜಾ ಕಾರ್ಯಕ್ರಮದಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿಗಳಾದ ಸುಂದರರಾಜ್, ಹರ್ಷ ಪ್ರಿಯಂವಧಾ, ಸಿಎಆರ್ ಡಿಸಿಪಿ ಸಿದ್ದನಗೌಡ ವೈ. ಪಾಟೀಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
ಎಸಿಪಿ ಸೋಮಶೇಖರ್ ನೇತೃತ್ವದಲ್ಲಿ ನಗರದ ದೊಡ್ಡಕೆರೆ ಮೈದಾನದಲ್ಲಿ ಸಿಎಆರ್‌ನ 35 ಮಂದಿ ಪೊಲೀಸರು 7 ಫಿರಂಗಿಗಳೊAದಿಗೆ 3 ದಿನಗಳ ಕಾಲ 21 ಬಾರಿ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಿದ್ದಾರೆ. ಬಳಿಕ ಬನ್ನಿಮಂಟಪದಲ್ಲೂ ತಾಲೀಮು ನಡೆಯಲಿದೆ.