Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮಾಜಿ ಸಂಸದ ಪ್ರತಾಪ್‌ಸಿಂಹಗೆ ಮಧ್ಯಂತರ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಣೆ


ಮೈಸೂರು; ಜಿಲ್ಲೆಯ ಟಿ.ನರಸೀಪುರದಲ್ಲಿ ಗಣೇಶ ವಿಸರ್ಜನೆ ವೇಳೆ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ದಾಖಲಾಗಿರುವ ಜಾತಿ ನಿಂದನೆ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಮಧ್ಯಂತರ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಟಿ.ನರಸೀಪುರದಲ್ಲಿ ಸೆ.18ರಂದು ನಡೆದ ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ದಲಿತ ಸಂಘಟನೆಗಳ ಹೋರಾಟಗಾರರನ್ನು ಅವಮಾನ ಮಾಡಿ ಮತ್ತು ದಲಿತ ಸಮುದಾಯದ ಸಾಂಸ್ಕತಿಕ ಅಸ್ಮಿತೆಯಾದ ನೀಲಿ ಶಾಲಿನ ಬಗ್ಗೆ ಅವಹೇಳನ ಮಾಡಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಪ್ರತಾಪ್ ಸಿಂಹ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಪೀಠ, ಮಧ್ಯಂತರ ತಡೆ ನೀಡಲು ನಿರಾಕರಿಸಿತು. ಅಲ್ಲದೆ, ನಂತರ ಅರ್ಜಿ ಸಂಬAಧ ಆಕ್ಷೇಪಣೆ ಸಲ್ಲಿಸುವಂತೆ ಪೊಲೀಸರಿಗೆ (ಸರ್ಕಾರಕ್ಕೆ) ಸೂಚಿಸಿ, ವಿಚಾರಣೆಯನ್ನು ಸೆ.28ಕ್ಕೆ ಮುಂದೂಡಿತು. ಹಾಗೆಯೇ, ಪ್ರಕರಣ ಸಂಬAಧ ಮಂಗಳವಾರದವರೆಗೆ ಆರೋಪ ಪಟ್ಟಿ ಸಲ್ಲಿಸದಂತೆ ಪೊಲೀಸರಿಗೆ ನಿರ್ದೇಶಿಸಿತು.
ವಿಚಾರಣೆ ವೇಳೆ, ಪ್ರತಾಪ್ ಸಿಂಹ ಪರ ವಕೀಲ ವೆಂಕಟೇಶ ದಳವಾಯಿ, ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಪೊಲೀಸರಿಗೆ ನಿರ್ದೇಶಿಸಿ ಮಧ್ಯಂತರ ಆದೇಶ ಮಾಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಒಪ್ಪದ ನ್ಯಾಯಪೀಠ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ (ಎಸ್ಸಿ/ಎಸ್ಟಿ) ಪ್ರಕರಣದಲ್ಲಿ ಈ ರೀತಿಯ ನಿರ್ದೇಶನ ನೀಡಬಾರದು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಹಾಗಾಗಿ, ನಿಮ್ಮ ಮನವಿ ಸಂಬAಧ ಏನೂ ಮಾಡಲಾಗದು ಎಂದು ಹೇಳಿತು.