Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿಜಯ ವಿಠಲ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪರ್ಧೆಗಳಲ್ಲಿ ಬಹುಮಾನ


ಮೈಸೂರು; ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮೈಸೂರು ಜಿಲ್ಲೆ ಇವರು ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ವಿಜಯ ವಿಠಲ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
75 ಕೆ.ಜಿ. ಒಳಗಿನ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಎಸ್. ಧೀರಜ್ ಪಟೇಲ್ ಚಿನ್ನದ ಪದಕ, 66 ಕೆ.ಜಿ ಒಳಗಿನ ಬಾಲಕರ ಕರಾಟೆ (ಕುಮಿಟೆ) ಸ್ಪರ್ಧೆಯಲ್ಲಿ ಅಶ್ವಿನ್ ಗೌಡ ಚಿನ್ನದ ಪದಕ, 50 ಕೆ.ಜಿ. ಒಳಗಿನ ಬಾಲಕರ ಕರಾಟೆ ಸ್ಪರ್ಧೆಯಲ್ಲಿ ದೈವಿಕ್.ಎಸ್. ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ.
ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.