Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಾವೇರಿ ಕಾಲೇಜಿನಲ್ಲಿ ರಕ್ತದಾನ ಶಿಬಿರ


ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿರುವ ಶ್ರೀ ಕಾವೇರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಸಂಸ್ಥೆ, ರಾಷ್ಟಿçÃಯ ಸೇವಾ ಯೋಜನೆ (ಎನ್‌ಎಸ್‌ಎಸ್) ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಕಾಲೇಜಿನ ಪ್ರಾಂಶುಪಾಲರಾದ ಪದ್ಮಾವತಿ ಕೆ.ಎಂ. ಮಾತನಾಡಿ, ರಕ್ತದಾನವು ಮಾನವೀಯ ಸೇವೆಯ ಅತ್ಯುನ್ನತ ಕಾರ್ಯವಾಗಿದ್ದು, ಯುವಜನರು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಜೀವ ಉಳಿಸುವ ಮಹತ್ತರ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.
ಶಿಬಿರದಲ್ಲಿ 80ಕ್ಕೂ ಹೆಚ್ಚು ಕಾಲೇಜಿನ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಸ್ವಯಂ ಪ್ರೇರಿತ ರಕ್ತದಾನ ಮಾಡಿದರು. ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಶಿಕ್ಷಕರು ಸಹ ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಡಾ. ಸುಬ್ರಹ್ಮಣ್ಯ ಸಿ.ಇ. ಯೂತ್ ರೆಡ್ ಕ್ರಾಸ್‌ನ ಸಂತೋಷ್ ಆರಾಧ್ಯ, ಎನ್‌ಎಸ್‌ಎಸ್ ಅಧಿಕಾರಿ ಹರೀಶ್ ಕುಮಾರ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.