ಸಹಕಾರ ಸಂಘಗಳು ರೈತರ ಜೀವನಾಡಿ: ಆವರ್ತಿ ಸೋಮಶೇಖರ್
ಪಿರಿಯಾಪಟ್ಟಣ:ಭಾರತ ದೇಶ ಕೃಷಿ ಪ್ರಧಾನ ದೇಶವಾಗಿದ್ದು, ಇಲ್ಲಿನ ಸಹಕಾರ ಸಂಘಗಳು ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡುತ್ತಿವೆ ಎಂದು ಸಹಕಾರ ಸಂಘದ ಅಧ್ಯಕ್ಷ ಆವರ್ತಿ ಸೋಮಶೇಖರ್ ತಿಳಿಸಿದರು. ತಾಲೂಕಿನ ಕೊಪ್ಪ ರೈತರ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಆಯಾ ವ್ಯಾಪ್ತಿಯಲ್ಲಿನ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಮೂಲಕ ರೈತರ ಜೀವನಾಡಿಯಾಗಿವೆ. ನಮ್ಮ ಸಂಘದಲ್ಲಿ…