
ಮೈಸೂರು; ಸತತ ಪ್ರಯತ್ನದಿಂದ ಗುರಿ ತಲುಪಲು ಸಾಧ್ಯ ಎಂದು ಮಂಡ್ಯ ವಿಶ್ವವಿದ್ಯಾಲಯದ ಕುಲಸಚಿವರಾದ ಕಲ್ಪಶ್ರೀ ಸಿ.ಆರ್ ಹೇಳಿದರು.
ಮೈಸೂರಿನ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನ(ಸ್ವಾಯತ್ತ) ನವಜ್ಯೋತಿ ಸಭಾಂಗಣದಲ್ಲಿ ಶನಿವಾರ ನಡೆದ ಹಿರಿಯ ವಿದ್ಯಾರ್ಥಿನಿಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯ ವಿದ್ಯಾರ್ಥಿನಿಯರ ಈ ಕಾರ್ಯಕ್ರಮ ಭೂತಕಾಲ, ವರ್ತಮಾನ ಮತ್ತು ಭವಿಷ್ಯತ್ತಿನ ನಡುವೆ ಉತ್ತಮ ಸೇತುವೆಯಾಗಿದೆ ಎಂದರು.
ಕಾಲೇಜಿನ ಪ್ರಾಚಾರ್ಯರಾದ ಡಾ. ರೇಚಣ್ಣ ಮಾತನಾಡಿ, ಸುತ್ತೂರು ಶ್ರೀಗಳು ಸಮಾಜದ ಎಲ್ಲಾ ವರ್ಗದವರಿಗೆ ಅನ್ನ, ಅಕ್ಷರ, ಆರೋಗ್ಯ ನೀಡಿದ್ದನ್ನು ಸ್ಮರಿಸಿದರು. ಮಹಿಳಾ ಕಾಲೇಜಿನ ಶೈಕ್ಷಣಿಕ ಸಾಧನೆ, ಪ್ರವೇಶಾತಿ, ವಿವಿಧ ಕೋರ್ಸ್ ಗಳ ಗುಣಮಟ್ಟ, ಭಾರತೀಯ ಸಂಸ್ಕöÈತಿ ಬೋಧನೆ, ಕಾಲೇಜಿನ ಶೈಕ್ಷಣಿಕ ಬೆಳವಣಿಗೆಯ ವಿವರಗಳೆಲ್ಲವನ್ನೂ ಸವಿವರವಾಗಿ ತಿಳಿಸಿದರು.
ಮುಖ್ಯ ಅತಿಥಿಗಳಾದ ಮೈಸೂರಿನ ಆಂದೋಲನ ದಿನಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ರಶ್ಮಿ ಕೋಟಿ ಮಾತನಾಡಿ, ಜೆಎಸ್ಎಸ್ ವಿದ್ಯಾಸಂಸ್ಥೆ ಜ್ಞಾನದ ಜೊತೆಗೆ ಸಂಸ್ಕಾರವನ್ನು ಕಲಿಸುತ್ತದೆ. ಜೀವನದಲ್ಲಿ ಸೋಲು ಗೆಲುವು ಸಹಜ, ದೃಢವಾದ ಆತ್ಮವಿಶ್ವಾಸವನ್ನು ಹೊಂದಿರಿ ಎಂದರು. ಇಂದು ಮಹಿಳೆಗೆ ಹೆಚ್ಚಿನ ಉದ್ಯೋಗವಕಾಶಗಳು ಎಲ್ಲಾ ಕ್ಷೇತ್ರದಲ್ಲಿ ದೊರೆಯುತ್ತಿವೆ. ತಾವೆಲ್ಲರೂ ಸಾಮಾಜಿಕ ಜಾಲತಾಣವನ್ನು ಬಳಸುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.
ಚಿತ್ರ ನಟಿ ಅಕ್ಷತಾ ಪಾಂಡವಪುರ ಮಾತನಾಡಿ, ಕಲಾ ಜಗತ್ತಿಗೆ ಪ್ರವೇಶಿಸಬೇಕಾದರೆ, ಸಾಹಿತ್ಯದ ಜ್ಞಾನ ಅವಶ್ಯಕ .ರಂಗಭೂಮಿಯ ಪ್ರಪಂಚ ಜೀವನದ ಪಾಠವನ್ನು ಕಲಿಸುತ್ತದೆ ಎಂದರು.
ಹಿರಿಯ ವಿದ್ಯಾರ್ಥಿನಿಯರು ತಾವು ಜೀವನದಲ್ಲಿ ಗುರಿ ಸಾಧಿಸಲು, ನೈತಿಕ ಮೌಲ್ಯಗಳನ್ನು ಬೆಳೆಸಿಕೊಂಡು ಸಂಸ್ಕಾರ ಹೊಂದಲು ಕಾಲೇಜು ನೆರವಾದ ಬಗ್ಗೆ ಗುರುತಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಪರಮಪೂಜ್ಯರು ಮಹಿಳಾ ಕಾಲೇಜನ್ನು ತೆರೆದು ಮಹಿಳೆಯರ ಬದುಕಿಗೆ ದಾರಿದೀಪವಾದರೂ ಎಂದರು. ಸುತ್ತೂರು ವಿದ್ಯಾಸಂಸ್ಥೆ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಯನ್ನು ಸ್ಮರಿಸಿದರು. ಕಾಲೇಜು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತದೆ. ತಾವೆಲ್ಲರೂ ವಿದ್ಯಾವಂತರಾಗಿ,ಸAಸ್ಕಾರವAತರಾಗಿ, ಅಲ್ಲದೆ ಗುರು ಹಿರಿಯರಿಗೆ ಗೌರವ ತರಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ದೀಕ್ಷಾ, ಅರ್ಥಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸರಿತಾ, ಭೌತಶಾಸ್ತç ವಿಭಾಗದ ಮುಖ್ಯಸ್ಥರಾದ ಸೌಮ್ಯ ಬಿ, ಭೂಗೋಳಶಾಸ್ತç ವಿಭಾಗದ ಮುಖ್ಯಸ್ಥರಾz ನಾಗಲಾಂಬಿಕೆ ಎನ್, ಅಧ್ಯಾಪಕರು ಹಾಗೂ ಅಧ್ಯಾಪಕೇತರ ವರ್ಗದವರು ಪಾಲ್ಗೊಂಡಿದ್ದರು.