Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪ್ರಜಾ ಸೇವಾ ಆಂದೋಲನದಲ್ಲಿ ದೂರುಗಳ ಸುರಿಮಳೆ

ಎಚ್ .ಡಿ .ಕೋಟೆ: ಜಮೀನಿಗೆ ತಿರುಗಾಡಲು ರಸ್ತೆ ಇಲ್ಲ, ವಾಸಿಸಲು ಮನೆ ಇಲ್ಲ, ಚರಂಡಿ ವ್ಯವಸ್ಥೆ ಸರಿ ಇಲ್ಲ, ಹಕ್ಕುಪತ್ರ ಕೊಟ್ಟಿಲ್ಲ. ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದೆ, ಕೆಲ ಗ್ರಾಮಗಳಲ್ಲಿ ಸಾರಿಗೆ ಸೌಲಭ್ಯ ಇಲ್ಲ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಕೆಲವು ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಇದು ತಹಶೀಲ್ದಾರ್ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಕೇಳಿ ಬಂದ ದೂರುಗಳು.

ಹಂಪಾಪುರ ಹೋಬಳಿಯ ಚಿಕ್ಕಕೆರೆಯೂರು ಗ್ರಾಮ ಪಂಚಾಯಿತಿಯ ಚಿಕ್ಕಕೆರೆಯೂರು ಗ್ರಾಮದ ಮಾರಮ್ಮ ದೇವಸ್ಥಾನದ ಬಳಿ ಪ್ರಜಾ ಸೇವಾ ಇಲಾಖೆ, ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಯ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಪ್ರಜಾ ಸೇವಾ ಆಂದೋಲನ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತಹಶೀಲ್ದಾರ್ ಶ್ರೀನಿವಾಸ್, ಈ ಕಾರ್ಯಕ್ರಮವು ಸಾರ್ವಜನಿಕರಿಗೆ ಸ್ಥಳದಲ್ಲಿಯೇ ಕೆಲಸ ಮಾಡಿಕೊಡುವುದು. ಯಾವ ಕೆಲಸ ಸ್ಥಳದಲ್ಲಿ ಆಗುವುದಿಲ್ಲವೋ ಅದನ್ನು ಅಧಿಕಾರಿಗಳ ಮೂಲಕ ಮಾಡಿಸಿಕೊಡುವುದು ಇದರ ಉದ್ದೇಶವಾಗಿದೆ. ಸರ್ಕಾರದ ಈ ಯೋಜನೆಯನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಅಕ್ರಮ ಸಕ್ರಮ ಸಮಿತಿಯ ಸದಸ್ಯ ಕೆಂಡಗಣ್ಣೇಗೌಡ ಮಾತನಾಡಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೊಸದಾಗಿ ಉದ್ಘಾಟಿಸಿರುವ ಪ್ರಜಾ ಸೇವಾ ಇಲಾಖೆ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಯೋಜನೆಯಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳು ಮನೆ ಬಾಗಿಲಿಗೆ ಬಂದಿದ್ದಾರೆ ಸಾರ್ವಜನಿಕರ ಅಹವಾಲುಗಳಿದ್ದರೆ ಅದನ್ನು ಸಾರ್ವಜನಿಕರು ಬಗೆಹರಿಸಿಕೊಳ್ಳುವ ಕೆಲಸ ಮಾಡಬೇಕು. ಅಧಿಕಾರಿಗಳು ಕಾಟಾಚಾರಕ್ಕೆ ಕೆಲಸ ಮಾಡದೆ ಸಾರ್ವಜನಿಕರಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಡಾ ಬಾಬು ಜಗಜೀವನ್ ರಾಂ ವಿಚಾರ ವೇದಿಕೆ ಮಾಜಿ ಅಧ್ಯಕ್ಷ ಪಿ. ನಾಗರಾಜು ಮಾತನಾಡಿ, ಮೂಲಭೂತ ಸಮಸ್ಯೆಗಳಾದ ಕುಡಿಯುವ ನೀರು, ರಸ್ತೆ ಸರಿಪಡಿಸಬೇಕು  ಸರ್ಕಾರದ ವಿಧವಾ ವೇತನ ಅಂಗವಿಕಲ ವೇತನ ಸಂಧ್ಯಾ ಸುರಕ್ಷಾ ಯೋಜನೆಗಳು ನಿಂತುಹೋಗಿ ಸಾರ್ವಜನಿಕರು ಪರದಾಡುವಂತಾಗಿದೆ ಈಗಾಗಲೇ ಸರ್ಕಾರ ಆದಾಯವನ್ನು 75,000 ಸಾವಿರದಿಂದ 1,20,000 ಕ್ಕೆ ಹೆಚ್ಚಳ ಮಾಡಿದ್ದು ಅಧಿಕಾರಿಗಳು ಅವರನ್ನು ಪದೇ ಪದೇ ಸುತ್ತಿಸದೆ ಸರಿಯಾದ ರೀತಿಯಲ್ಲಿ ಕೆಲಸ ಮಾಡಿಕೊಡಬೇಕು ಎಂದು ತಿಳಿಸಿದರು.

ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಪರಿಶಿಷ್ಟ ಪಂಗಡದ ಅಧಿಕಾರಿ ನಾಗರಾಜು, ಮುಖಂಡರಾದ ಸಣ್ಣಸ್ವಾಮಿ, ರಾಜ ನಾಯಕ ಸೇರಿದಂತೆ ಕಂದಾಯ ಇಲಾಖೆ, ಪೋಲಿಸ್ ಇಲಾಖೆ  ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು,  ಅಕ್ಕಪಕ್ಕದ ಗ್ರಾಮಸ್ಥರು,  ಮುಖಂಡರು ಹಾಜರಿದ್ದರು.