Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಾಮಾಜಿಕ ಸಮಾನತೆ ಮತ್ತು ಸೌಹಾರ್ದತೆಗೆ ನಾರಾಯಣ ಗುರುಗಳ ಚಿಂತನೆಗಳೇ ದಾರಿದೀಪ: ಸಚಿವ ಮಧು ಬಂಗಾರಪ್ಪ


ಮೈಸೂರು: ಸಮಾಜದಲ್ಲಿ ಎಲ್ಲರ ನಡುವೆ ಸಾಮಾಜಿಕ ಸಮಾನತೆ ಮತ್ತು ಸೌಹಾರ್ದತೆಗೆ ನಾರಾಯಣ ಗುರುಗಳ ಚಿಂತನೆಗಳೇ ದಾರಿದೀಪವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಚಿವ ಮಧು ಬಂಗಾರಪ್ಪ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಬ್ರಹ್ಮ ಶ್ರೀ ನಾರಾಯಣಗುರು ಜಯಂತೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಬ್ರಹ್ಮ ಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಶಿಕ್ಷಣ ಕ್ರಾಂತಿಯ ಮೂಲಕ ಸಮಾಜದ ಕತ್ತಲೆ ಹೋಗಲಾಡಿಸಿದ ಯುಗಪುರುಷ ನಾರಾಯಣ ಗುರು ಎಂದು ಬಣ್ಣಿಸಿದರು.
ಸಮಾಜದಲ್ಲಿ ನಾವು ಮನುಷ್ಯರಾಗಿ, ಗೌರವದಿಂದ ಬದುಕಲು ವಿದ್ಯೆಯು ಅತ್ಯಂತ ಅಗತ್ಯ ಎಂಬುದನ್ನು ಮನಗಂಡು ನಮಗೆ ಶಿಕ್ಷಣದ ಬಾಗಿಲು ತೆರೆದುಕೊಟ್ಟ ಮಹಾನ್ ಕ್ರಾಂತಿಕಾರಿ ಬ್ರಹ್ಮಶ್ರೀ ನಾರಾಯಣ ಗುರುಗಳು. ಕೇರಳದಲ್ಲಿ ಜನ್ಮತಾಳಿದ ಅವರು ಶಾಲೆಗಳನ್ನು ದೊಡ್ಡದು ಮಾಡಿ, ದೇವಸ್ಥಾನಗಳ ಆಡಂಬರವನ್ನು ಚಿಕ್ಕದು ಮಾಡಿ’ ಎಂಬ ಕ್ರಾಂತಿಕಾರಿ ಸಂದೇಶ ನೀಡಿದರು ಮೂಢನಂಬಿಕೆಗಳಿಗಿAತ ಅರಿವು ನೀಡುವ ಶಿಕ್ಷಣವೇ ಶ್ರೇಷ್ಠವೆಂಬುದನ್ನು ಜಗತ್ತಿಗೆ ಸಾರಿದರು ಎಂದು ಹೇಳಿದರು.
ಮಹಾನ್ ಮಾನವತಾವಾದಿ ನಾರಾಯಣ ಗುರುಗಳ ವಿಚಾರಧಾರೆ ಹಾಗೂ ತತ್ತ÷್ವಗಳನ್ನು ಆಳವಾಗಿ ಅಧ್ಯಯನ ಮಾಡಲು ಮಂಗಳೂರಿನಲ್ಲಿ ಅಧ್ಯಯನ ಪೀಠಗಳನ್ನು ಸ್ಥಾಪಿಸಿ ಸಂಶೋಧನೆಗೆ ಪ್ರೋತ್ಸಾಹ ನೀಡುವಂತೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಶಾಲಾ-ಕಾಲೇಜುಗಳ ಪಠ್ಯಪುಸ್ತಕಗಳಲ್ಲಿ ಶ್ರೀ ನಾರಾಯಣ ಗುರುಗಳ ಜೀವನ, ಅವರ ಸಾಹಿತ್ಯ ಮತ್ತು ಸಾಮಾಜಿಕ ಕೊಡುಗೆಗಳ ಬಗ್ಗೆ ಕಡ್ಡಾಯವಾಗಿ ಅಧ್ಯಯನ ಸಾಮಗ್ರಿಗಳನ್ನು ಅಳವಡಿಸಿ, ಯುವಜನರಲ್ಲಿ ಸೌಹಾರ್ದತೆ ಬೆಳೆಸಲಾಗುವುದು ಮತ್ತು ಮಾನವೀಯ ಮೌಲ್ಯಗಳನ್ನು ಬೋಧಿಸಿದ ಈ ಮಹಾನ್ ಚೇತನದ ಕೊಡುಗೆಯನ್ನು ಮುಂಬರುವ ಯುವ ಪೀಳಿಗೆಗೆ ತಲುಪಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಶಾಸಕ ಕೆ ಹರೀಶ್ ಗೌಡ ಮಾತನಾಡಿ, ನಾರಾಯಣ ಗುರುಗಳು ಸಮಾಜದಲ್ಲಿದ್ದ ತಾರತಮ್ಯ, ಅಸ್ಪöÈಶ್ಯತೆ ಹಾಗೂ ಕಂದಾಚಾರಗಳನ್ನು ತೊಡೆದು ಹಾಕಿ, ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂಬ ತತ್ತ÷್ವದ ಮೇಲೆ ಸಮಾನತೆಯ ಸಮಾಜವನ್ನು ಕಟ್ಟಲು ಶ್ರಮಿಸಿದವರು ಎಂದು ಹೇಳಿದರು.
ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಮಾತನಾಡಿ, 19ನೇ ಶತಮಾನದ ಉತ್ತರಾರ್ಧ ಮತ್ತು 20ನೇ ಶತಮಾನದ ಆರಂಭದಲ್ಲಿ, ಸಮಾಜದಲ್ಲಿದ್ದ ಜಾತೀಯತೆ, ಅಸ್ಪöÈಶ್ಯತೆ ಹಾಗೂ ಮೂಢನಂಬಿಕೆಗಳ ವಿರುದ್ಧ ಶಸ್ತç ಹಿಡಿಯದೆ, ಶಾಂತಿ ಮತ್ತು ಜ್ಞಾನದ ಮಾರ್ಗದಲ್ಲೇ ಮಹಾನ್ ಕ್ರಾಂತಿ ಮಾಡಿದವರು ನಾರಾಯಣ ಗುರುಗಳು ಎಂದು ಹೇಳಿದರು.

ಶೋಷಿತ ಹಾಗೂ ಕೆಳವರ್ಗದ ಜನರಿಗಾಗಿ ಅರವಿಪುö್ಪರಂ ಎಂಬಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸುವ ಮೂಲಕ ಗುರುಗಳು ಇಡೀ ದೇಶಕ್ಕೇ ಸವಾಲೆಸೆದು ನಾವು ಸ್ಥಾಪಿಸಿದ್ದು ಈಳವ ಮಾನವರ ಶಿವನನ್ನು ಎಂದು ಹೇಳಿ, ದೇವಸ್ಥಾನಗಳ ಬಾಗಿಲನ್ನು ಎಲ್ಲರಿಗೂ ತೆರೆದರು ಎಂದು ಹೇಳಿದರು.

ಅವರ ವಿಚಾರಗಳನ್ನು ಕೇವಲ ಭಾಷಣಕ್ಕೆ ಸೀಮಿತಗೊಳಿಸದೆ, ನಮ್ಮ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಂಡು, ಜಾತಿ-ಮತಗಳ ತಾರತಮ್ಯವಿಲ್ಲದ ಸಮಾನತೆಯ ಸಮಾಜ ಕಟ್ಟುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ನಾರಾಯಣ ಗುರು ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ರೇಣುಕಾ ನಂದ ಸ್ವಾಮೀಜಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ .ಎಂ, ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಸ್ ಲಿಮಿಟೆಡ್ ಅಧ್ಯಕ್ಷ ಎಚ್.ಡಿ ಗಣೇಶ್, ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮರಿಸ್ವಾಮಿ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ.ಡಿ ಸುದರ್ಶನ್ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಮತ್ತು ಕುಲಸಚಿವರಾದ ಡಾ. ಮೋಹನ ಚಂದ್ರಗುತ್ತಿ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನಾ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರದ ವೆರವಣಿಗೆ ಜಾನಪದ ಕಲಾತಂಡಗಳೊAದಿಗೆ ಅದ್ಧೂರಿಯಾಗಿ ನಡೆಯಿತು.