ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆಯು ಸಹಕಾರಿಯಾಗಿದೆ : ನಿತಿನ್ ವೆಂಕಟೇಶ್
ಪಿರಿಯಾಪಟ್ಟಣ : ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆಯು ಸಹಕಾರಿಯಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ನಿತಿನ್ ವೆಂಕಟೇಶ್ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪತ್ರಕರ್ತರು ಮತ್ತು ಸರ್ಕಾರಿ ನೌಕರರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಯೊಬ್ಬ ವ್ಯಕ್ತಿಯು ತನ್ನ ಒತ್ತಡವನ್ನು ನಿವಾರಣೆ ಮಾಡಿಕೊಳ್ಳಲು ಇತರೆ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಪ್ರತಿನಿತ್ಯ…