
ಮೈಸೂರು; ವಿಶ್ವವಿಖ್ಯಾತ ಮೈಸೂರು ದಸರಾ ೨೦೨೬ ಆಹ್ವಾನ ಪತ್ರಿಕೆಯನ್ನು ಸ್ವಾಗತ ಸಮಿತಿಯವರು ಸಿದ್ಧಪಡಿಸಿದ್ದಾರೆ.
ಜಿಲ್ಲಾಡಳಿತ ಸೋಮವಾರ ನಗರದ ಚಾಮುಂಡಿ ಬೆಟ್ಟದಲ್ಲಿ ಈ ಬಾರಿ ನಾಡ ಹಬ್ಬ ಮೈಸೂರು ದಸರಾ ಕಾರ್ಯಕ್ರಮಗಳು ಉತ್ತಮವಾಗಿ ಮೂಡಿಬರಲಿ ಎಂದು ಆಹ್ವಾನ ಪತ್ರಿಕೆಯೊಂದಿಗೆ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು.
ಇದೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ ಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್, ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು