Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಯುವ ನಿಧಿ ಕಾರ್ಯಕ್ರಮದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ


ಹೆಚ್.ಡಿ.ಕೋಟೆ; ಯವನಿಧಿ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾಗಿದ್ದು, ನಿರುದ್ಯೋಗಿಗಳಿಗೆ ಆಶಾದೀಪವಾಗಿದ್ದು, ಕಾಲೇಜುಗಳಲ್ಲಿ ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್. ಅರುಣ್ ಕುಮಾರ್ ತಿಳಿಸಿದರು.
ಸೋಮವಾರ ಹೆಚ್.ಡಿ ಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದಲ್ಲಿ ಏರ್ಪಡಿಸಿದ್ದ ಯುವನಿಧಿ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪದವಿ, ಡಿಪ್ಲೋಮಾ ಪಡೆದ ನಂತರ ೧೮೦ ದಿನಗಳ ಕಾಲ ಕಳೆದರೂ ಉದ್ಯೋಗ ದೊರಕದಿದ್ದರೆ ಅನುಕ್ರಮವಾಗಿ ೩೦೦೦ ಹಾಗೂ ೧೫೦೦ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷರಾದ ಪ್ರೊ. ಶಿವಕುಮಾರ್ ಹಾಗೂ ಹುಣಸೂರು ಬಸವಣ್ಣ, ಪ್ರಾಧಿಕಾರದ ಸದಸ್ಯ ಸಾ.ಮಾ. ಯೋಗೇಶ್, ಎಚ್.ಡಿ.ಕೋಟೆ ತಾಲೂಕು ಗ್ಯಾರಂಟಿ ಯೋಜನಾ ಪ್ರಾಧಿಕಾರದ ಚಾಮರಾಜು, ಸರಗೂರು ಗ್ಯಾರಂಟಿ ಯೋಜನಾ ಅಧ್ಯಕ್ಷ ಚೆಲುವರಾಜು ಹಾಗೂ ಎಚ್.ಡಿ.ಕೋಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿ ಎಸ್. ರವಿಚಂದ್ರ, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು