Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶೀಘ್ರದಲ್ಲೇ ಮುಡಾದಿಂದ ಅಕ್ರಮವಾಗಿ ಹಂಚಿಕೆಯಾಗಿರುವ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ


ಮೈಸೂರು: ಈ ಹಿಂದಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ೫೦:೫೦ ಅನುಪಾದ ಸೈಟ್ ಹಂಚಿಕೆಯಲ್ಲಿ ನಡೆದಿರುವ ಅಕ್ರಮ ಸೈಟ್‌ಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ ಎಂದು ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ತಿಳಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಕೆ.ಆರ್. ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು ಮುಡಾದಿಂದ ಅಕ್ರಮವಾಗಿ ಹಂಚಿಕೆಯಾಗಿರುವ ನಿವೇಶನಗಳ ಪಟ್ಟಿಯನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಮನವಿ ನೀಡಿದ್ದಾರೆ. ಅದರ ಆಧಾರದ ಮೇಲೆ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದು, ಶೀಘ್ರವೇ ಪ್ರಕಟಿಸಲಾಗುವುದು ಎಂದು ಹೇಳಿದರು.
ನ್ಯಾಯಮೂರ್ತಿ ದೇಸಾಯಿ ಆಯೋಗದ ವರದಿಯಂತೆಯೇ ಮುಡಾದಿಂದ ಶೇ ೫೦ರ ಅನುಪಾದಲ್ಲಿ ಹಂಚಿಕೆಯಾಗಿದ್ದ ಎಲ್ಲಾ ಅಕ್ರಮ ಸೈಟ್‌ಗಳನ್ನು ರದ್ದು ಮಾಡಲಾಗಿದೆ. ಕಾನೂನುಬದ್ಧವಾಗಿ ಸೈಟ್ ಪಡೆದವರನ್ನು ಆಯೋಗದ ವರದಿಯಲ್ಲಿ ಪಟ್ಟಿಯಿಂದ ಹೊರಗಿಡಲಾಗಿದೆ.
ಪ್ರತಿ ಸೈಟ್‌ನ್ನೂ ತನಿಖೆ ಮಾಡಿ, ಆಯೋಗ ವರದಿ ನೀಡಿರುವುದರಿಂದ, ಮತ್ತೆ ಪರಿಶೀಲನೆ ಮಾಡುವ ಅಗತ್ಯವಿಲ್ಲ. ಆಯೋಗ ನೀಡಿರುವ ಅಕ್ರಮ ಸೈಟ್‌ಗಳ ಪಟ್ಟಿಯನ್ನೇ ಪ್ರಕಟಿಸುತ್ತೇವೆ ಎಂದು ತಿಳಿಸಿದರು.
ಅಕ್ರಮವಾಗಿ ಪಡೆದ ಸೈಟ್‌ಗಳನ್ನು ಬೇರೆಯವರಿಗೆ ಮಾರಾಟ ಮಾಡಿದ್ದರೆ, ಖರೀದಿದಾರರಿಗೆ ಸಮಸ್ಯೆಯಾಗದಂತೆ ತಪ್ಪಿಸಬಹುದೇ ಎಂಬ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದರು.
ಗ್ಯಾರAಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ; ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ ಸುಮಾರು ೫೨,೦೦೦ ಕೋಟಿ ವೆಚ್ಚವಾಗುತ್ತಿದ್ದು,
ಆರ್ಥಿಕ ಹೊರೆಯಾದರೂ ನಾವು ಮ್ಯಾನೇಜ್ ಮಾಡುತ್ತೇವೆ ಎಂದು ಹೇಳಿದರು. ಸರ್ಕಾರಕ್ಕೆ ಗ್ಯಾರಂಟಿಗಳು ಆರ್ಥಿಕ ಹೊರೆ ಎಂಬುದು ಸತ್ಯ. ಆದರೆ ಹೊರೆ ಎಂಬ ಕಾರಣಕ್ಕೆ ನಾವು ನುಣುಚಿಕೊಳ್ಳಲು ಆಗಲ್ಲ. ನಾವು ಜನರಿಗೆ ಮಾತು ಕೊಟ್ಟಿದ್ದೇವೆ, ಅದರಂತೆ ನಿರ್ವಹಿಸುತ್ತೇವೆ. ಆರ್ಥಿಕ ಹೊರೆಯಾದರೂ ನಾವು ಮ್ಯಾನೇಜ್ ಮಾಡುತ್ತೇವೆ. ಗ್ಯಾರಂಟಿಗಳು ಹೊರೆಯಾದರೂ, ಅದನ್ನು ನಿರ್ವಹಿಸುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.