
- ದಸರಾ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಯನ್ನು ನಿಲ್ಲಿಸಲು ಸೆಸ್ಕ್ ಅಧ್ಯಕ್ಷರ ಸೂಚನೆ
- ರಸ್ತೆ, ಪಾದಚಾರಿ ಮಾರ್ಗಗಳಲ್ಲಿರುವ ಸೆಸ್ಕ್ ಸಲಕರಣೆಗಳನ್ನು ತೆರವುಗೊಳಿಸಲು ಕ್ರಮವಹಿಸಿ
ಮೈಸೂರು: ನಗರದಲ್ಲಿ ಚಾಲ್ತಿಯಲ್ಲಿರುವ ಭೂಗತ ವಿದ್ಯುತ್ ಕೇಬಲ್ (ಯುಜಿ ಕೇಬಲ್) ಅಳವಡಿಕೆ ಕಾಮಗಾರಿಯನ್ನು ಅ.5ರೊಳಗೆ ಪೂರ್ಣಗೊಳಿಸುವಂತೆ ಶಾಸಕರೂ ಆಗಿರುವ ಸೆಸ್ಕ್ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಅವರು ಸಂಬAಧಪಟ್ಟ ಏಜೆನ್ಸಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿಜಡಿu.
ಮಂಗಳವಾರ ನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಕಚೇರಿಯಲ್ಲಿ ಯುಜಿ ಕೇಬಲ್ ಕಾಮಗಾರಿಯ ಪ್ರಗತಿ ಕುರಿತು ಸಂಬAಧಪಟ್ಟ ಏಜೆನ್ಸಿಗಳು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ನಗರದಲ್ಲಿ ನಡೆಯುತ್ತಿರುವ ಯುಜಿ ಕೇಬಲ್ ಕಾಮಗಾರಿಗಳನ್ನು ನಿಗದಿತ ಗಡುವಿನೊಳಗೆ ಪೂರ್ಣಗೊಳಿಸುವ ಜತೆಗೆ, ಕಾಮಗಾರಿ ನಡೆದಿರುವ ಸ್ಥಳಗಳ ಪುನಶ್ಚೇತನ ಕಾರ್ಯವನ್ನು ಶೇ.100ರಷ್ಟು ಪೂರ್ಣಗೊಳಿಸಬೇಕು. ಅಕ್ಟೋಬರ್ 5ರೊಳಗೆ ಪುನಶ್ಚೇತನ ಕಾಮಗಾರಿಗಳನ್ನು ಮುಗಿಸಬೇಕು. ದಸರಾ ಹಿನ್ನೆಲೆಯಲ್ಲಿ ಹೊಸದಾಗಿ ಕೈಗೊಳ್ಳಬೇಕಾಗಿರುವ ಕಾಮಗಾರಿಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಸೂಚಿಸಿದರು. ಕಾಮಗಾರಿ ಮುಗಿಸುವ ವಿಚಾರದಲ್ಲಿ ರಾಜಿಗೆ ಅವಕಾಶವಿಲ್ಲ. ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ಸಂಬAಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು,” ಎಂದು ಎಚ್ಚರಿಕೆ ನೀಡಿದರು.
ಗುಂಡಿ ತೆಗೆದು ಹಾಗೇ ಬಿಡಬೇಡಿ :
“ಯುಜಿ ಕೇಬಲ್ ಅಳವಡಿಕೆ ಕಾಮಗಾರಿಗಾಗಿ ರಸ್ತೆ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಗುಂಡಿಗಳನ್ನು ತೆಗೆದು ಹಾಗೆಯೇ ಬಿಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರಮೇಶ್ ಬಂಡಿಸಿದ್ದೇಗೌಡ ಅವರು, ಈಗಾಗಲೇ ಗುಂಡಿ ತೆಗೆದು ಮುಚ್ಚದೆ ಬಿಟ್ಟಿರುವ ಎಲ್ಲ ಸ್ಥಳಗಳನ್ನು ಗುರುತಿಸಿ ತಕ್ಷಣ ಸಮರ್ಪಕವಾಗಿ ಮುಚ್ಚಬೇಕು. ಗುಂಡಿಗಳನ್ನು ಮುಚ್ಚಿದ ಬಳಿಕ ಕಾಮಗಾರಿಯಿಂದ ಉಂಟಾಗಿರುವ ಡೆಬ್ರಿಸ್ಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಕಡ್ಡಾಯವಾಗಿ ಬ್ಯಾರಿಕೇಡ್ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಮನ್ವಯದಿಂದ ಕಾಮಗಾರಿ ನಡೆಸಿ :
ನಗರದಲ್ಲಿ ವೈಟ್ ಟ್ಯಾಪಿಂಗ್, ಯುಜಿಡಿ ಹಾಗೂ ಯುಜಿ ಕೇಬಲ್ ಅಳವಡಿಕೆ ಕಾಮಗಾರಿಗಳು ನಡೆಯುತ್ತಿವೆ. ಈ ಕಾಮಗಾರಿಗಳ ನಡುವೆ ಸಮನ್ವಯದ ಕೊರತೆಯಾದರೆ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಆದ್ದರಿಂದ ಸಂಬAಧಪಟ್ಟ ಅಧಿಕಾರಿಗಳು ಹಾಗೂ ಏಜೆನ್ಸಿಗಳು ಪರಸ್ಪರ ಸಮನ್ವಯದಿಂದ ಕಾಮಗಾರಿ ನಡೆಸಬೇಕು” ಎಂದು ಹೇಳಿದರು.
ಮೆಟೀರಿಯಲ್ಸ್ ತೆರವುಗೊಳಿಸಿ :
ದಸರಾ ಸಂದರ್ಭದಲ್ಲಿ ನಗರದ ಪಾದಚಾರಿ ಮಾರ್ಗಗಳು ಸೇರಿದಂತೆ ವಿವಿಧೆಡೆ ಇರಿಸಿರುವ ಯುಜಿ ಕೇಬಲ್ ಹಾಗೂ ಸೆಸ್ಕ್ಗೆ ಸಂಬAಧಿಸಿದ ಎಲ್ಲ ಮೆಟೀರಿಯಲ್ಗಳನ್ನು ಕೂಡಲೇ ತೆರವುಗೊಳಿಸಬೇಕು. ನಗರದ ಸೌಂದರ್ಯ ಹಾಗೂ ಸಾರ್ವಜನಿಕರ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆಯಾಗದAತೆ ಕ್ರಮವಹಿಸಬೇಕು” ಎಂದರು.
ಯುಜಿ ಕೇಬಲ್ ಕಾಮಗಾರಿಗೆ ಸಂಬAಧಿಸಿದAತೆ ಅ.6ರಂದು ಮತ್ತೊಮ್ಮೆ ಸಭೆ ನಡೆಸಿ, ಪ್ರಗತಿ ಪರಿಶೀಲನೆ ನಡೆಸಲಾಗುತ್ತದೆ. ಈ ಸಭೆಗೆ ಪ್ರತಿಯೊಂದು ಏಜೆನ್ಸಿಗಳ ಮುಖ್ಯಸ್ಥರು ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಿದ ಅಧ್ಯಕ್ಷರು, ಸದರಿ ಸಭೆಯ ವೇಳೆಗೆ ಕಾಮಗಾರಿಗಳು ಮುಗಿಯದಿದ್ದರೆ ಮುಂದಿನ ಕ್ರಮವಹಿಸುವುದಾಗಿ ಎಚ್ಚರಿಸಿದರು.
ಸಭೆಯಲ್ಲಿ ಸೆಸ್ಕ್ ತಾಂತ್ರಿಕ ನಿರ್ದೇಶಕ ಎಲ್. ಲೋಕೇಶ್, ಮೈಸೂರು ವೃತ್ತದ ಅಧೀಕ್ಷಕ ಇಂಜಿನಿಯರ್ ಸುನೀಲ್ ಕುಮಾರ್ ಸೇರಿದಂತೆ ಸೆಸ್ಕ್ ಹಾಗೂ ವಿವಿಧ ಏಜೆನ್ಸಿಗಳ ಅಧಿಕಾರಿಗಳು ಇದ್ದರು.