
ಮೈಸೂರು: ಜಿಲ್ಲೆಯ ಟಿ. ನರಸೀಪುರದಲ್ಲಿ ಇತ್ತೀಚೆಗೆ ನಡೆದ ಗಣೇಶೋತ್ಸವದ ಮೆರವಣಿಗೆಗೆ ಸಂಬAಧಿಸಿದAತೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಾಖಲಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಪ್ರಕರಣವನ್ನು ಸರ್ಕಾರವು ಮರುಪರಿಶೀಲಿಸಬೇಕು ಎಂದು ಬಿಜೆಪಿ ಮೈಸೂರು ನಗರ ಮಾಧ್ಯಮ ಸಹ ಸಂಚಾಲಕ ಸಂತೋಷ್ ಕುಮಾರ್ ಬಿ. ಎಂ. ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಡಾ. ಬಿ. ಆರ್. ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು ಮತ್ತು ಸ್ವಾತಂತ್ರ÷್ಯವನ್ನು ನೀಡುವ ಸಂವಿಧಾನವನ್ನು ರೂಪಿಸಿದ್ದಾರೆ. ಸಂವಿಧಾನದ ಆಶಯದಂತೆ ಪ್ರತಿಯೊಬ್ಬರ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರ ಹಾಗೂ ಆಡಳಿತ ವ್ಯವಸ್ಥೆಯ ಕರ್ತವ್ಯವಾಗಿದೆ. ಯಾವುದೇ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸುವಾಗ ರಾಜಕೀಯ ಅಥವಾ ಇತರೆ ಒತ್ತಡಗಳಿಗೆ ಒಳಗಾಗದೆ, ವಾಸ್ತವಾಂಶ ಮತ್ತು ಕಾನೂನುಬದ್ಧ ಸಾಕ್ಷ÷್ಯಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಟಿ. ನರಸೀಪುರದಲ್ಲಿ ಗಣೇಶೋತ್ಸವದ ಮೆರವಣಿಗೆಯ ಮಾರ್ಗದ ವಿಚಾರವಾಗಿ ಪೊಲೀಸ್ ಇಲಾಖೆ ಮತ್ತು ಆಯೋಜಕರ ನಡುವೆ ಉಂಟಾದ ವಿವಾದವೇ ಇಡೀ ಬೆಳವಣಿಗೆಗೆ ಕಾರಣವಾಗಿದೆ. ಪೊಲೀಸ್ ಅಧಿಕಾರಿಗಳು ಧಾರ್ಮಿಕ ಆಚರಣೆಗಳು ಮತ್ತು ಸಾರ್ವಜನಿಕರ ಭಾವನೆಗಳಿಗೆ ಗೌರವ ನೀಡುವುದರ ಜೊತೆಗೆ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿಯನ್ನು ಸಮತೋಲನದಿಂದ ನಿರ್ವಹಿಸಬೇಕಾಗಿದೆ. ಈ ವಿಚಾರಕ್ಕೆ ಸಂಬAಧಿಸಿದAತೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪೊಲೀಸ್ ಅಧಿಕಾರಿಯ ಕಾರ್ಯವೈಖರಿಯನ್ನು ಪ್ರಶ್ನಿಸಿ ಸಾರ್ವಜನಿಕವಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಗಳಲ್ಲಿ ಎಲ್ಲಿ ತಪ್ಪಿದೆ
ದುರುದ್ದೇಶ ರಾಜಕೀಯ ಒತ್ತಡದಿಂದ ಮಾಡಿದ ಅಟ್ರಾಸಿಟಿ ಕೇಸ್ ಹಿಂಪಡೆಯಬೇಕು ಇಲ್ಲವಾದಲ್ಲಿ ಇದರ ವಿರುದ್ಧ ಜನಾಂದೊಲನ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.