Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪ್ರೀತಿಸಲು ನಿರಾಕರಿಸಿದ ಯುವತಿ ತಬ್ಬಿಕೊಂಡು ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿಕೊಂಡ ಪಾಗಲ್ ಪ್ರೇಮಿ


ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯನ್ನು ತಬ್ಬಿ ಹಿಡಿದುಕೊಂಡ ಫಾಗಲ್ ಪ್ರೇಮಿ ಮೈಮೇಲೆ ಪೆಟ್ರೋಲ್ ಸುರಿದು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡ ಭೀಕರ ಘಟನೆ ಮೈಸೂರಿನ ವಿಜಯನಗರದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಚಂದನ್ (೨೭) ಕೃತ್ಯ ಎಸಗಿದವ. ಈತ ಅದೇ ಗ್ರಾಮದ ಡಿಪ್ಲೊಮಾ ಎಂಜಿನಿಯರಿAಗ್ ವಿದ್ಯಾರ್ಥಿನಿಯನ್ನು ಚಂದನ್ ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ.
ವಿಜಯನಗರದಲ್ಲಿರುವ ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಹಾಸ್ಟೆಲ್ ನಿಂದ ಅನತಿ ದೂರದಲ್ಲಿ ಚಂದನ್ ತಡೆದಿದ್ದಾನೆ. ಬಳಿಕ ಪ್ರೀತಿಸುವಂತೆ ಒತ್ತಾಯಿಸಿ, ಏಕಾಏಕಿ ಆಕೆಯ ಮೇಲೆ ಪೆಟ್ರೋಲ್ ಸುರಿದು, ತಾನೂ ಪೆಟ್ರೋಲ್ ಸುರಿದುಕೊಂಡು ಆಕೆಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.
ಘಟನೆಯಿಂದ ಬೆಚ್ಚಿಬಿದ್ದ ಯುವತಿ ಚಂದನ್‌ನಿAದ ತಪ್ಪಿಸಿಕೊಂಡಿದ್ದು, ಶೇ.೨೦ರಷ್ಟು ಸುಟ್ಟ ಗಾಯಗಳಾಗಿವೆ. ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇತ್ತ ಚಂದನ್ ಗೆ ಶೇ.೮೦ರಷ್ಟು ಸುಟ್ಟ ಗಾಯಗಳಾಗಿದ್ದು, ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಸ್ಥಿತಿ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಘಟನೆ ಸಂಬAಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.