Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಮೇಲೆ ಭಾರತೀಯ ಗಣಿತ ಶಾಸ್ತ್ರವು ಅಪಾರ ಪ್ರಭಾವ ಬೀರಿದೆ; ಡಾ.ಆರ್ ರಂಗರಾಜನ್


ಮೈಸೂರು; ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಮೇಲೆ ಭಾರತೀಯ ಗಣಿತ ಶಾಸ್ತ್ರವು ಅಪಾರ ಪ್ರಭಾವ ಬೀರಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಗಣಿತಶಾಸ್ತ್ರ ವಿಭಾಗದ ವಿಶ್ರಾಂತ ಮುಖ್ಯಸ್ಥ ಡಾ. ಆರ್ ರಂಗರಾಜನ್ ಹೇಳಿದರು.
ಮೈಸೂರು ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಗಣಿತಶಾಸ್ತ್ರ ವಿಭಾಗದ ವತಿಯಿಂದ “ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತೀಯ ಗಣಿತಶಾಸ್ತ್ರ” ಎಂಬ ವಿಷಯ ಕುರಿತ ಒಂದು ದಿನದ ರಾಜ್ಯಮಟ್ಟದ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸ್ವಯಂ ಕಲಿಕೆಯನ್ನು ಪ್ರೇರೇಪಿಸಬೇಕು ಎಂದರು. ವಿದ್ಯಾರ್ಥಿಗಳು ಕೇವಲ ಕಂಠಪಾಠ ಮಾಡುವುದರ ಬದಲಾಗಿ, ಸೈದ್ಧಾಂತಿಕ ಪರಿಕಲ್ಪನೆಗಳನ್ನು ಅರ್ಥಮಾಡಿಕೊಳ್ಳುವತ್ತ ಗಮನಹರಿಸಬೇಕು ಎಂದು ತಿಳಿಸಿದರು. ಭಾರತದ ಶ್ರೀಮಂತ ಗಣಿತ ಪರಂಪರೆಯನ್ನು ಸ್ಮರಿಸಿದ ಅವರು, ಆರ್ಯಭಟ, ಬ್ರಹ್ಮಗುಪ್ತ, ಭಾಸ್ಕರಾಚಾರ್ಯ ಮತ್ತು ಶ್ರೀನಿವಾಸ ರಾಮಾನುಜನ್ ಅವರಂತಹ ಮಹಾನ್ ಭಾರತೀಯ ಗಣಿತಜ್ಞರು ಗಣಿತಶಾಸ್ತ್ರದ ಮೂಲ ಪರಿಕಲ್ಪನೆಗಳು ಹಾಗೂ ಅನ್ವಯಿಕೆಗಳನ್ನು ಜಗತ್ತಿಗೆ ಕೊಡುಗೆಯಾಗಿ ನೀಡಿದ್ದಾರೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮೈಸೂರಿನ ಯುವರಾಜ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಡಾ. ಎಂ. ರೂಬಿ ಸಾಲೆಸ್ಟಿನಾ ಮಾತನಾಡಿ, ಗಣಿತಶಾಸ್ತ್ರದ ಅನಿವಾರ್ಯತೆ ಮತ್ತು ಮಹತ್ವವನ್ನು ಕುರಿತು ತಿಳಿಸಿದರು. ಗಣಿತವೇ ಜೀವನ ವಿಧಾನ. ಸಂಖ್ಯಾಶಾಸ್ತ್ರದ ಜ್ಞಾನವಿಲ್ಲದೆ ಆಧುನಿಕ ಜೀವನ ಅಸಾಧ್ಯ. ವಿದ್ಯಾರ್ಥಿಗಳು ಕೇವಲ ಬಾಹ್ಯ ಅನ್ವಯಿಕೆಗಳ ಬೆನ್ನು ಬೀಳದೆ, ಮೂಲ ತಾರ್ಕಿಕ ಚಿಂತನೆ ಮತ್ತು ತಾರ್ಕಿಕ ಆಧಾರಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ರೇಚಣ್ಣ ವಹಿಸಿದ್ದರು. ಗಣಿತಶಾಸ್ತ್ರವಿಭಾಗದ ಮುಖ್ಯಸ್ಥೆ ಪ್ರತಿಭಾ ಅರಸ್ ಎಲ್, ಧಾತ್ರಿ, ದೀಕ್ಷಾ ಸಿ. ಎಸ್, ಸೌಜನ್ಯ ಕೆ.ಕೆ, ಮಾನಸ ಬಿ. ಎಸ್. ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಉದ್ಘಾಟನಾ ಕಾರ್ಯಕ್ರಮದ ನಂತರ ಮೂರು ತಾಂತ್ರಿಕ ಗೋಷ್ಠಿಗಳು ನಡೆಯಿತು.
ಮೊದಲನೇ ಗೋಷ್ಠಿ ಮೈಸೂರಿನ ಯುವರಾಜ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಎಂ ರೂಬಿ ಸಾಲೆಸ್ಟಿನಾ ಅವರು “ಕೃತಕ ಬುದ್ಧಿಮತ್ತೆ ಮತ್ತು ಗಣಿತಶಾಸ್ತ್ರ” ವಿಷಯ ಕುರಿತು ಉಪನ್ಯಾಸ ನೀಡಿದರು.
ಎರಡನೇ ಗೋಷ್ಠಿ: “ಡಿಜಿಟಲ್ ಯುಗದಲ್ಲಿ ಶೂನ್ಯ ಮತ್ತು ಅನಂತತೆಯ ತತ್ವಶಾಸ್ತ್ರ” ವಿಷಯ ಕುರಿತು ತುಮಕೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಗಣಿತಶಾಸ್ತ್ರ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕ ಡಾ. ಎಚ್. ಎಸ್. ಬೋರೇಗೌಡ ಮಾತನಾಡಿದರು.
ಮೂರನೇ ಗೋಷ್ಠಿ: “ಕ್ರಿಪ್ಟೋಗ್ರಫಿಯಲ್ಲಿ ಫೈನೈಟ್ ಗ್ರೂಪ್ಸ್” ವಿಷಯ ಕುರಿತು– ಡಾ. ಶಿವರಾಜ್ ಕುಮಾರ್, ಉಪನ್ಯಾಸ ನೀಡಿದರು.