ವಿಷ್ಣು ವೈಭವ ಸಂಗೀತೋತ್ಸವ”
ಮೈಸೂರು; ಚಿತ್ರ ನಟ ಡಾ. ವಿಷ್ಣುವರ್ಧನ್ ರವರ ಹುಟ್ಟು ಹಬ್ಬದ ಪ್ರಯುಕ್ತವಾಗಿ ಅರುಣರಾಗ ಕ್ರಿಯೇಷನ್ಸ್ ವತಿಯಿಂದ “ವಿಷ್ಣು ವೈಭವ ಸಂಗೀತೋತ್ಸವ” ಎಂಬ ಸಂಗೀತ ಕಾರ್ಯಕ್ರಮವನ್ನು ಮೈಸೂರಿನ ಉದ್ದೂರ್ ಗೇಟ್‌ನಲ್ಲಿರುವ ಡಾ. ವಿಷ್ಣುವರ್ಧನ್ ಸ್ಮಾರಕದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕ್ರಿಯೇಷನ್ಸ್ ನ ಗುರುರಾಜ್ ತಿಳಿಸಿದರು.ಬುಧವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ. ವಿಷ್ಣುವರ್ಧನ್‌ರವರ ಚಲನಚಿತ್ರ ಗೀತೆಗಳನ್ನು ಹಾಡಿ ಹುಟ್ಟುಹಬ್ಬವನ್ನು ಆಚರಿಸಲಾಗುತ್ತದೆ. ಮುಖ್ಯ ಅತಿಥಿಗಳಾಗಿ ಡಾ. ಭಾರತಿ ವಿಷ್ಣುವರ್ಧನ್ ಆಗಮಿಸಲಿದ್ದಾರೆ. ವಿಶೇಷ ಆಕರ್ಷಣೆಯಾಗಿ ಜೂನಿಯರ್ ವಿಷ್ಣುವರ್ಧನ್,…