Skip to main content

3Kaala News

ಸುಭಾಷಿತ 

ನಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಶ್ರದ್ಧೆ ಮತ್ತು ಭಕ್ತಿ ಇದ್ದಾಗ ಮಾತ್ರ ಯಶಸ್ಸು ಒಲಿಯುತ್ತದೆ. ಅರ್ಧಮನಸ್ಸಿನಿಂದ ಮಾಡುವ ಕೆಲಸ ಎಂದಿಗೂ ಪರಿಪೂರ್ಣ ಫಲ ನೀಡಲಾರದು.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಗರ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚು ಒತ್ತು ನೀಡಬೇಕು : ಸಚಿವ ಹೆಚ್.ಸಿ.ಬಾಲಕೃಷ್ಣ

ಮೈಸೂರು: ರಾಜ್ಯದ ಜನಸಂಖ್ಯೆಯಲ್ಲಿ ಅಂದಾಜು ಶೇ ೪೦ ರಷ್ಟು ಜನ ನಗರ ಪ್ರದೇಶದಲ್ಲಿ ವಾಸವಾಗಿದ್ದು, ನಗರ ಪ್ರದೇಶಗಳ ಅಭಿವೃದ್ಧಿಗೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಶೇ ೩೦ ರಷ್ಟು ಅನುದಾನ ದೊರಕುತ್ತದೆ, ಉಳಿದ ಹಣವನ್ನು ಕ್ರೋಢೀಕರಿಸಬೇಕಿರುತ್ತದೆ. ಈ ಹಿನ್ನಲೆಯಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹೆಚ್ಚು ಒತ್ತು ನೀಡಬೇಕು ಎಂದು ಪೌರಾಡಳಿತ ಸಚಿವ ಹೆಚ್.ಸಿ ಬಾಲಕೃಷ್ಣ ತಿಳಿಸಿದರು.ಮಂಗಳವಾರ ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಮೈಸೂರು ವಿಭಾಗ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಹಾಸನ ಹಾಗೂ ಮಂಡ್ಯ…

Read More

ಪಿಒಪಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿ ಬಳಕೆ ನಿಷೇಧ: ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ

ಮೈಸೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪಿ.ಒಪಿ ಹಾಗೂ ರಾಸಾಯನಿಕ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸದೇ, ನೈಸರ್ಗಿಕ ಬಣ್ಣ ಬಳಸಿ ತಯಾರಿಸಿರುವ ಮಣ್ಣಿನ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದರು.ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಅಪರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗೌರಿ ಗಣೇಶ ಹಬ್ಬ ಆಚರಿಸುವ ಸಂಬAಧ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಸರ ಮಾಲಿನ್ಯ ತಡೆಯಲು ಮೈಸೂರು ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ…

Read More