Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವೀರಶೈವ ಸಹಕಾರ ಸಂಘವು ಆರ್ಥಿಕ ಸ್ವಾವಲಂಬನೆಯ ಸಂಕೇತ : ಎನ್.ಸಿ ಬಸವಣ್ಣ.

  ನಂಜನಗೂಡು;ವೀರಶೈವ ಸಹಕಾರ ಸಂಘವು ನಮ್ಮ ಸಮಾಜದ ಆರ್ಥಿಕ ಸ್ವಾವಲಂಬನೆಯ ಸಂಕೇತವಾಗಿದ್ದು ನಿಮ್ಮೆಲ್ಲರ ನಂಬಿಕೆ ಮತ್ತು ಸಹಕಾರದಿಂದಾಗಿ ಪ್ರತಿ ವರ್ಷ ಲಾಭದತ್ತ ಮುನ್ನಡೆಯುತ್ತಿದೆ ಎಂದು ವೀರಶೈವ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎನ್‌.ಸಿ.ಬಸವಣ್ಣ ಹೇಳಿದರು. ಅವರು ನಗರದ ಕಮಲಮ್ಮ ಗುರುಮಲ್ಲಪ್ಪ ಕಲ್ಯಾಣ ಮಂಟಪದಲ್ಲಿ ಜರುಗಿದ ಸಂಘದ 20ನೇ ವರ್ಷದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ವೀರಶೈವ ಕೋ ಆಪರೇಟಿವ್ ಸೊಸೈಟಿಯು ಕಳೆದ ಹತ್ತು ವರ್ಷಗಳಿಂದ ಲಾಭದಲ್ಲಿ ಮುನ್ನಡೆಯುತ್ತಿದೆ ಎಂದು ಹೇಳಲು ನಾನು ಹೆಮ್ಮೆ ಪಡುತ್ತೇನೆ,…

Read More

ಅರಮನೆಗೆ ಆಗಮಿಸಿದ ದಸರಾ ಗಜಪಡೆಯ ಎರಡನೇ ತಂಡ

ಮೈಸೂರು; ವಿಶ್ವ ಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಸಾಗುತ್ತಿವೆ. ಭಾನುವಾರ ದಸರಾ ಗಜಪಡೆಯ ಎರಡನೇ ಆನೆಗಳ ತಂಡ ಕಾಡಿನಿಂದ ಅರಮನೆ ನಗರಿ ಮೈಸೂರಿಗೆ ಆಗಮಿಸಿದವು. ಕಾಡಿನ ವಿವಿಧ ಶಿಬಿರಗಳಿಂದ ಲಾರಿಗಳಲ್ಲಿ ಮೈಸೂರಿನ ಅಂಬಾವಿಲಾಸ ಅರಮನೆಗೆ ಆಗಮಿಸಿದ ಎರಡನೇ ತಂಡ ಸುಗ್ರೀವ, ಚೈತ್ರ, ರೂಪ ಹಾಗೂ ಮತ್ತೆರಡು ಆನೆಗಳನ್ನು ಸಾಲಾಗಿ ನಿಲ್ಲಿಸಿ, ಸಾಂಪ್ರದಾಯಿಕ ಪೂಜೆಯನ್ನು ಸಲ್ಲಿಸುವ ಮೂಲಕ ಬರಮಾಡಿಕೊಳ್ಳಲಾಯಿತು. ಬಳಿಕ ಮಾವುತರು, ಕಾವಾಡಿಗಳು ತಮ್ಮ ಆನೆಗಳೊಂದಿಗೆ ಈಗಾಗಲೇ ಬಿಡಾರ ಹೂಡಿರುವ ಆನೆಗಳ ಶೆಡ್‌ಗೆ ತೆರಳಿ…

Read More

ಇನ್ಸ್ಪೆಕ್ಟರ್ ಧನ0ಜಯ್ ಸಸ್ಪೆಂಡ್ ಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿಪಕ್ಷ ನಾಯಕ ಆರ್.ಅಶೋಕ, ಸಂಸದ ಯದುವೀರ್, ಪ್ರತಾಪ್‌ಸಿಂಹ, ಟಿ.ಎಸ್.ಶ್ರೀವತ್ಸ ಸೇರಿದಂತೆ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಮೈಸೂರು: ಜಿಲ್ಲೆಯ ತಿ. ನರಸೀಪುರದಲ್ಲಿ ಗಣೇಶೋತ್ಸವದ ಹಿನ್ನಲೆಯಲ್ಲಿ ಹಿಂದು ಕಾರ್ಯಕರ್ತರಿಗೆ ಧಮ್ಕಿ ಹಾಕಿರುವ ಇನ್ಸ್ಪೆಕ್ಟರ್ ಧನಚಿಜಯ್‌ರನ್ನು ಕೂಡಲೇ ಸ್ಪಸೆಂಡ್ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಇನ್ಸ್ಪೆಕ್ಟರ್ ಧನಂಜಯ್ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ಬಿಜೆಪಿ ನಾಯಕರು ಟಿ. ನರಸೀಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ಪೊಲೀಸ್ ಠಾಣೆಯತ್ತ ನುಗ್ಗಲು ಮುಂದಾದಾಗ ವಿಪಕ್ಷ ನಾಯಕ ಆರ್. ಅಶೋಕ್, ಸಂಸದ ಯದುವೀರ್ ಒಡೆಯರ್, ಮಾಜಿ ಸಂಸದ…

Read More

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು : ಡಾ. ಚಂದ್ರಶೇಖರ್ 

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ. ಪಿರಿಯಾಪಟ್ಟಣ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಗುರಿ, ಸಾಧನೆ ಕಡೆಗೆ ಗಮನ ಹರಿಸಬೇಕು ಎಂದು ಮೈಸೂರು ಮಾನಸಗಂಗೋತ್ರಿ ಅಭಿವೃದ್ಧಿ ಅಧ್ಯಯನ ಸಂಸ್ಥೆ ನಿರ್ದೇಶಕರಾದ ಡಾ. ಚಂದ್ರಶೇಖರ್ ತಿಳಿಸಿದರು. ಪಟ್ಟಣದ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಶಾಲಾ-ಕಾಲೇಜಿನಲ್ಲಿ ಕೇವಲ ಅಂಕಗಳಿಸುವುದೇ ಅವರ ಗುರಿಯಾಗಬಾರದು…

Read More

ಅಂಚೆ ಇಲಾಖೆ ವತಿಯಿಂದ ಆಧಾರ್ ಕ್ಯಾಂಪ್ಮೈಸೂರು; ಅಂಚೆ ಇಲಾಖೆ ವತಿಯಿಂದ ಸಂಘ-ಸAಸ್ಥೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಉಚಿತವಾಗಿ ಆಧಾರ್ ಕ್ಯಾಂಪ್ ಗಳನ್ನು ಅವರ ಸ್ಥಳದಲ್ಲಿಯೇ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ಮೈಸೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಜಿ. ಹರೀಶ್ ತಿಳಿಸಿದ್ದಾರೆ.ಈ ಕ್ಯಾಂಪ್ ಗಳಲ್ಲಿ ಆಧಾರ್ ಗೆ ಸಂಬAಧಿಸಿದ ಎಲ್ಲಾ ರೀತಿಯ ತಿದ್ದುಪಡಿಗಳನ್ನು ಮಾಡಲಾಗುವುದಲ್ಲದೆ, ಹೊಸ ಆಧಾರ್ ಕಾರ್ಡ್ ಗಳನ್ನೂ ಕೂಡ ಮಾಡಿಕೊಡಲಾಗುವುದು. ಕ್ಯಾಂಪ್ ಗಳನ್ನು ಉಚಿತವಾಗಿ ನಡೆಸಿಕೊಡಲಾಗುತ್ತದೆ. ಆದರೆ ತಿದ್ದುಪಡಿ ಅಥವಾ ಹೊಸ ಆಧಾರ್ ಕಾರ್ಡ್…

Read More

ಟಿ. ನರಸೀಪುರ ಠಾಣಾಧಿಕಾರಿ ಧನಂಜಯ್ ಹಿಂದೂ ಸಮಾಜದ ಕ್ಷಮೆಯಾಚಿಸಬೇಕು: ಸಂತೋಷ್ ಕುಮಾರ್.ಬಿ.ಎಂ ಆಗ್ರಹ

ಮೈಸೂರು; ಗಣೇಶೋತ್ಸವದ ಸಂದರ್ಭದಲ್ಲಿ ಗಣಪತಿ ಪ್ರತಿಷ್ಠಾಪನೆ ಹಾಗೂ ಮೆರವಣಿಗೆಗೆ ಸಂಬAಧಿಸಿದAತೆ ಆಯೋಜಕರಿಗೆ ನಿರ್ಬಂಧಗಳನ್ನು ವಿಧಿಸುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲೆಯ ಟಿ. ನರಸೀಪುರ ಠಾಣಾಧಿಕಾರಿ ಧನಂಜಯ್ ಹಿಂದೂ ಸಮಾಜದ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಮೈಸೂರು ನಗರ ಮಾಧ್ಯಮ ಸಹ ಸಂಚಾಲಕ ಸಂತೋಷ್ ಕುಮಾರ್ ಬಿ. ಎಂ. ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಗಣೇಶೋತ್ಸವವು ಹಿಂದೂ ಸಮಾಜದ ಪ್ರಮುಖ ಧಾರ್ಮಿಕ ಆಚರಣೆಗಳಲ್ಲಿ ಒಂದಾಗಿದೆ….

Read More

ದಸರಾದಲ್ಲಿ ಚಲನಚಿತ್ರೋತ್ಸವ ರದ್ದುಪಡಿಸುವುದನ್ನು ವಿರೋಧಿಸಿ ಪ್ರತಿಭಟನೆ

ಮೈಸೂರು ; ಈ ಬಾರಿ ನಡೆಯಲಿರುವ ನಾಡ ಹಬ್ಬ ಮೈಸೂರು ದಸರಾದಲ್ಲಿ ಚಲನಚಿತ್ರೋತ್ಸವವನ್ನು ರದ್ದು ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಇಂದು ಕರ್ನಾಟಕ ಸೇನಾ ಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ನಗರದ ಹಳೆ ಜಿಲ್ಲಾಧಿಕಾರಿಗಳ ಕಛೇರಿ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ನಾನಾ ಘೋಷಣೆಗಳನ್ನು ಕೂಗಿದರು.ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಬಾರಿ ಮೈಸೂರು ದಸರಾವನ್ನು ಬಹಳ ಅದ್ದೂರಿಯಾಗಿ ಹಾಗೂ ವಿನೂತನವಾಗಿ ಮಾಡುತ್ತೇವೆ ಎಂದು ಹೇಳಿ ಈಗ ದಸರಾ ಚಲನಚಿತ್ರೋತ್ಸವವನ್ನು ರದ್ದು ಮಾಡಲು ಹೊರಟಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ…

Read More

ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂಬೇಡ್ಕರ್ ಓದು ಕಾರ್ಯಕ್ರಮ

ಮೈಸೂರು; ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಮೈಸೂರು ಜಿಲ್ಲೆ ಮೈಸೂರು, ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೈರಾಪುರ, ಟಿ ನರಸೀಪುರ ತಾಲ್ಲೂಕು ಇವರ ಸಂಯುಕ್ತಾಶ್ರಯದಲ್ಲಿ ಇಂದು ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತ ರತ್ನ ಡಾ. ಬಿ. ಆರ್ ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನೇತ್ರಾವತಿ, ಉಪನ್ಯಾಸಕಿ ಗೀತಾ ಎಂ. ಐ ಕ್ಯೂ ಎಸ್ ಸಿ ಸಂಚಾಲಕ ದಮ್ಮರಪ್ಪ ಕೆ ಹಾಗೂ ಇನ್ನಿತರರು ಭಾಗವಹಿಸಿದರು.ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿನಿಯರಿಗೆ ಭಾರತರತ್ನ…

Read More

ಎಚ್.ವಿ.ರಾಜೀವ್ ಜನ್ಮ ದಿನ ಪ್ರಯುಕ್ತ ಸೆ.16ರಿಂದ 19ರವರೆಗೆ ವಿವಿಧ ಸೇವಾ ಕಾರ್ಯ

ಮೈಸೂರು: ಕೆಪಿಸಿಸಿ ಸದಸ್ಯ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಅವರ ಹುಟ್ಟಹಬ್ಬದ ಹಿನ್ನೆಲೆಯಲ್ಲಿ ಸೆ.16ರಿಂದ 19ರವರೆಗೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಸೇವಾ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ನಗರಪಾಲಿಕೆಯ ಮಾಜಿ ಮೇಯರ್ ಬಿ.ಎಲ್.ಭೈರಪ್ಪ ತಿಳಿಸಿದರು.ಶನಿವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸೆ.16ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ವಿದ್ಯಾರಣ್ಯಪುರಂ ಭೂತಾಳೆ ಮೈದಾನದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿದೆ. ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ…

Read More

ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣಾ ಸಮಾವೇಶ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ

ಮೈಸೂರು: ಬ್ರಾಹ್ಮಣ ವಿವಿಧ ಸಂಘಟನೆಗಳು ಮೈಸೂರು, ಮಂಗಳಸೂತ್ರ ಫೌಂಡೇಶನ್,ಸಪ್ತಪದಿ ಫೌಂಡೇಶನ್ ಟ್ರಸ್ಟ್, ಹಾಗೂ ಶ್ರೀರಾಮ ಮಂದಿರ ಸಹಕಾರದೊಂದಿಗೆ ರಾಜ್ಯ ಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣಾ ಸಮಾವೇಶವನ್ನು ಸೆ. 19 ಹಾಗೂ 20 ರಂದು ಭಾನುವಾರ ಎರಡು ದಿನಗಳು ಹಮ್ಮಿಕೊಳ್ಳಲಾಗಿದೆ ಎಂದು ಸಂಚಾಲಕ ಶ್ರೀನಿವಾಸ್.ಎಸ್ ತಿಳಿಸಿದರು.ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಕೃಷ್ಣಮೂರ್ತಿಪುರಂ ನ್ಯೂ ಕಾಂತರಾಜ ರಸ್ತೆ ಇಲ್ಲಿರುವ ಶ್ರೀರಾಮ ಮಂದಿರದಲ್ಲಿ ಬೆಳಗ್ಗೆ 9 ರಿಂದ ಸಂಜೆ 5:ರವರೆಗೆ ಸಮಾವೇಶ ಹಾಗೂ ಕಲ್ಯಾಣ ಪ್ರಾಪ್ತಿಗಾಗಿ…

Read More