ಆಧುನಿಕ ತಂತ್ರಜ್ಞಾನವನ್ನ ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಅಭಿವೃದ್ಧಿಯ ಪಥದತ್ತ ಸಾಗಬಹುದು: ನರಸಿಂಹಮೂರ್ತಿ
ಪಿರಿಯಾಪಟ್ಟಣ : ಆಧುನಿಕ ತಂತ್ರಜ್ಞಾನದ ಬಳಕೆಯನ್ನು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಅಭಿವೃದ್ಧಿಯ ಪಥದತ್ತ ಸಾಗಬಹುದು ಎಂದು ನಿವೃತ್ತ ಶಿಕ್ಷಕ ನರಸಿಂಹಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು. ತಾಲೂಕಿನ ಬೆಟ್ಟದಪುರ ಸಮೀಪದ ಅನಿಕೇತನ ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ಪಿರಿಯಾಪಟ್ಟಣ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಏರ್ಪಡಿಸಿದ್ದ ದೇಶದ ಅಭಿವೃದ್ಧಿಗೆ ‘ ಎ ಐ ತಂತ್ರಜ್ಞಾ ಮಾರಕವೇ ಅಥವಾ ಪೂರಕವೇ ಎಂಬ ವಿಷಯದ ಚರ್ಚಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾನವನು ಆಧುನಿಕತೆಯಿಂದ ಸಾಕಷ್ಟು ಬೌದ್ಧಿಕತೆಯನ್ನು ಬೆಳೆಸಿಕೊಂಡಿದ್ದಾನೆ. ಇಂದು ಆಧುನಿಕತೆ…