Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಟಿಎಪಿಸಿಎಂಎಸ್ ಸಹಕಾರ ಸಂಘಕ್ಕೆ 61 ಲಕ್ಷ ನಿವ್ವಳ ಲಾಭ:ಕಾರ್ಯದರ್ಶಿ ಬಿ.ವಿ.ಕಲಾವತಿ

ಟಿಎಪಿಸಿಎಂಎಸ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ  ಪಿರಿಯಾಪಟ್ಟಣ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಮತ್ತು ಸಹಕಾರ ಸಂಘ ಷೇರುದಾರರು ಮತ್ತು ಹಿರಿಯ ಮಾರ್ಗದರ್ಶನದಲ್ಲಿ ನಡೆದು 2025-26 ಸಾಲಿನಲ್ಲಿ 61.46 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಟಿಎಪಿಸಿಎಂಎಸ್ ನ ಕಾರ್ಯದರ್ಶಿ ಬಿ.ವಿ.ಕಲಾವತಿ ತಿಳಿಸಿದರು.  ಪಟ್ಟಣದ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು  ಪಿರಿಯಾಪಟ್ಟಣ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘವು 1949ರಲ್ಲಿ ಸ್ಥಾಪನೆಯಾಗಿ ಅಲ್ಲಿಂದ ಇಲ್ಲಿಯವರೆಗೂ…

Read More

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ನಿಧಿ ಅರಿವು ಕಾರ್ಯಕ್ರಮ

ತಿ.ನರಸೀಪುರ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮೈಸೂರು ಹಾಗೂ ಟಿ. ನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಯುವ ನಿಧಿ ಯೋಜನೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಟಿ. ನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಮಾತನಾಡಿ,ಯುವ ನಿಧಿ ಯೋಜನೆಯ ಉದ್ದೇಶ, ಅರ್ಹತೆ ಹಾಗೂ ಯುವಜನರಿಗೆ ದೊರೆಯುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಯೋಜನೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು..ಈ…

Read More

ಯುವಜನರಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ: ಎಎಸ್ಪಿ ಎಲ್ ನಾಗೇಶ್

ಮೈಸೂರು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಯುವ ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಅಪರ ಪೊಲೀಸ್ ಅಧೀಕ್ಷಕ ಎಲ್ ನಾಗೇಶ್ ತಿಳಿಸಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎನ್ ಕಾಡ್9 (ಓಅಔಖಆ) ಸಭೆ ನಡೆಸಿ ಮಾತನಾಡಿದ ಅವರು, ಸಮಾಜ ಕಲ್ಯಾಣ, ಪದವಿ ಪೂರ್ವ ಶಿಕ್ಷಣ ಇಲಾಖೆಗಳು, ಕಾಲೇಜು ಶಿಕ್ಷಣ ಇಲಾಖೆಯಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆ ಮಾಡುತ್ತಿದ್ದಲ್ಲಿ ಪತ್ತೆ ಹಚ್ಚಿ ಅವರನ್ನು ಮಾದಕ ವಸ್ತುಗಳಿಂದ ದೂರವಿಡಲು ಯೋಜನೆ ರೂಪಿಸಿ ಎಂದರು.ಕೃಷಿ ಭೂಮಿಯಲ್ಲಿ…

Read More

ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ ನಿಧನ

ಮೈಸೂರು: ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ (77) ಅವರು ಗುರುವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾದರು. ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ನಗರದ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಅವರು ಪತ್ನಿ ಡಾ.ಅನಸೂಯಾ ಗೋಪಾಲ್, ಪುತ್ರಿ ಮಾಲಾ, ಅಳಿಯ ಭವಾನಿಶಂಕರ್, ಮೊಮ್ಮಗಳು ಆದ್ಯಾ ಸ್ಭೆರಿದಂತೆ ಅಪಾರ ಬಂಧು, ಬಳಗ, ಸ್ನೇಹಿತರನ್ನು ಅಗಲಿದ್ದಾರೆ.ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನವರಾದ ಮಡ್ಡಿಕೆರೆಯ ಗೋಪಾಲ್ ಅವರು, ಬಿ.ಎ., ಎಲ್‌ಎಲ್‌ಬಿ…

Read More

ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ; ಕುಲಪತಿ ಪ್ರೊ ಎಂಆರ್ ಗಂಗಾಧರ್

ಚಾಮರಾಜನಗರ ;  ವಿದ್ಯಾರ್ಥಿಗಳ ಪ್ರತಿಭೆ ಹೊರತರಲು ಚಾಮರಾಜನಗರ ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗದ ನುರಿತ ದೈಹಿಕ ನಿರ್ದೇಶಕರ ಮಾರ್ಗದರ್ಶನದಿಂದ ಚಾ,ವಿ.ವಿ ವಿದ್ಯಾರ್ಥಿಗಳು ರಾಜ್ಯ ಅಂತ ರಾಜ್ಯ ರಾಷ್ಟ್ರಮಟ್ಟದಲ್ಲಿ(ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯ ಹಾಗೂ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ) ಭಾಗವಹಿಸಿ ಹಲವಾರು ಬಹುಮಾನಗಳಿಸಿದ್ದಾರೆ ಎಂದು ಚಾಮರಾಜನಗರ ವಿಶ್ವವಿದ್ಯಾಲಯ ಕುಲಪತಿ ಪ್ರೊ ಎಂ ಗಂಗಾಧರ್ ತಿಳಿಸಿದರು. ಚಾಮರಾಜನಗರ ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗ ಸುವರ್ಣ ಗಂಗೋತ್ರಿ ಸಭಾಂಗಣದಲ್ಲಿ 2026, 27ನೇ ಸಾಲಿನ ಶೈಕ್ಷಣಿಕ ಸಾಲಿನ ಕ್ರೀಡಾ ಸಲಹೆ…

Read More

ವಂಚನೆಗಳ ಮೂಲಕ ಜನರನ್ನು ಕಳ್ಳಸಾಗಣೆಗೆ ಗುರಿಪಡಿಸುವ ಹೊಸ ಜಾಲಗಳ ವಿರುದ್ಧ ಜಾಗೃತಿ ಮೂಡಿಸಬೇಕು: ಉಷಾರಾಣಿ

ಮೈಸೂರು: ಮಾನವ ಅಕ್ರಮ ಸಾಗಣೆಯು ವ್ಯಕ್ತಿಯ ಘನತೆ, ದೈಹಿಕ ಸ್ವಾಸ್ಥ÷್ಯ ಹಾಗೂ ವೈಯಕ್ತಿಕ ಸ್ವಾತಂತ್ರ÷್ಯದ ಮೇಲಿನ ಗಂಭೀರ ಆಕ್ರಮಣವಾಗಿದೆ ಎಂದು ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಉಷಾರಾಣಿ ಹೇಳಿದರು.ಗುರುವಾರ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಹಾಗೂ…

Read More

ಸಿಹಿ, ಬಾಳೆ ಹಣ್ಣು ಹಂಚುವ ಮೂಲಕ ಚಿತ್ರ ನಟ ಸುದೀಪ್ ಹುಟ್ಟು ಹಬ್ಬ ಆಚರಣೆ

ಮೈಸೂರು; ಅಭಿನಯ ಚಕ್ರವರ್ತಿ ಕಿಚ್ಚ ಚಿತ್ರ ನಟ ಸುದೀಪ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಬುಧವಾರ ಮೈಸೂರಿನ ಕೆ ಆರ್ ವೃತ್ತದಲ್ಲಿ ಸುದೀಪ್ ಅಭಿಮಾನಿಗಳ ವತಿಯಿಂದ ಹುಟ್ಟುಹಬ್ಬವನ್ನು ಮಾಜಿ ನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಸಿಹಿ ಹಾಗೂ ಬಾಳೆ ಹಣ್ಣು ವಿತರಿಸುವ ಮೂಲಕ ಆಚರಿಸಲಾಯಿತು.ಈ ವೇಳೆ ಸುದೀಪ್ ಅಭಿಮಾನಿಗಳಾದ ಕೃಷ್ಣ,ವಸಂತ,ಶೇಖರ್,ಕುಮಾರ ರಂಗಸ್ವಾಮಿ, ಸೇರಿದಂತೆ ಮತ್ತಿತರರು ಹಾಜರಿದ್ದರು.

Read More