ಮಹಿಳಾ ಮುಖ್ಯ ಪೇದೆ ಗಿರಿಜಾಂಬ ನಿಧನ
ಮೈಸೂರು: ಮೈಸೂರು ನಗರ ಪೊಲೀಸ್ ಘಟಕದಲ್ಲಿ ಮಹಿಳಾ ಮುಖ್ಯ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದ ಗಿರಿಜಾಂಬ (೫೫) ಅವರು ಭಾನುವಾರ ನಿಧನರಾದರು.ನಗರದ ಹೆಬ್ಬಾಳು ಬಡಾವಣೆಯಲ್ಲಿರುವ ಪೊಲೀಸ್ ವಸತಿಗೃಹದಲ್ಲಿ ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಅವರು, ಮನೆಯಲ್ಲಿಯೇ ಕೊನೆಯುಸಿರೆಳೆದರು. ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚೇತರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.ಗಿರಿಜಾಂಬ ಅವರು ಸುಮಾರು ೩೦ ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಕರ್ತವ್ಯನಿಷ್ಠೆ ಹಾಗೂ ಸುದೀರ್ಘ ಸೇವೆಯ ಮೂಲಕ ಇಲಾಖೆಯಲ್ಲಿ ಗುರುತಿಸಿಕೊಂಡಿದ್ದರು.ಅವರ ಅಂತ್ಯಕ್ರಿಯೆಯನ್ನು ಭಾನುವಾರ ಸ್ವಗ್ರಾಮ…