Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಾಲ್ಮೀಕಿ ಜಯಂತಿಯನ್ನು ಶ್ರದ್ಧಾ ಭಕ್ತಿ ಪೂರ್ವಕವಾಗಿ ಅದ್ದೂರಿಯಾಗಿ ಆಚರಣೆ

 ನಂಜನಗೂಡು; ಅ. 26ರಂದು ಜರಗುವ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾ ಮತ್ತು ಭಕ್ತಿ ಪೂರ್ವಕವಾಗಿ ಅದ್ದೂರಿಯಾಗಿ ಆಚರಣೆ ನಡೆಸಲು ತೀರ್ಮಾನಿಸಲಾಗಿದೆ, ಸಮುದಾಯದ ಎಲ್ಲಾ ಗ್ರಾಮಸ್ಥರು ಒಗ್ಗಟ್ಟಿನಿಂದ ಭಾಗವಹಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಂಬರಹಳ್ಳಿ ಸುಬ್ಬಣ್ಣ ಹೇಳಿದರು.   ಅವರು ನಗರದ ಗೌರಿಘಟ್ಟದ ಬೀದಿಯಲ್ಲಿರುವ ನಾಯಕ ಸಮುದಾಯ ಭವನದಲ್ಲಿ ತಾಲೂಕು ನಾಯಕ ಸಮುದಾಯದ ವತಿಯಿಂದ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.    ಸಾವಿರಾರು ವರ್ಷಗಳು ಕಳೆದರೂ ಸಹ ವಾಲ್ಮೀಕಿ ಅವರ ರಾಮಾಯಣ ಸಂದೇಶವು ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತಿದೆ, ಆದ್ದರಿಂದ ಅವರ…

Read More

ಪ್ರಜಾ ಸೇವಾ ಆಂದೋಲನದಲ್ಲಿ ದೂರುಗಳ ಸುರಿಮಳೆ

ಎಚ್ .ಡಿ .ಕೋಟೆ: ಜಮೀನಿಗೆ ತಿರುಗಾಡಲು ರಸ್ತೆ ಇಲ್ಲ, ವಾಸಿಸಲು ಮನೆ ಇಲ್ಲ, ಚರಂಡಿ ವ್ಯವಸ್ಥೆ ಸರಿ ಇಲ್ಲ, ಹಕ್ಕುಪತ್ರ ಕೊಟ್ಟಿಲ್ಲ. ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದೆ, ಕೆಲ ಗ್ರಾಮಗಳಲ್ಲಿ ಸಾರಿಗೆ ಸೌಲಭ್ಯ ಇಲ್ಲ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಕೆಲವು ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಇದು ತಹಶೀಲ್ದಾರ್ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಕೇಳಿ ಬಂದ ದೂರುಗಳು. ಹಂಪಾಪುರ ಹೋಬಳಿಯ ಚಿಕ್ಕಕೆರೆಯೂರು ಗ್ರಾಮ ಪಂಚಾಯಿತಿಯ ಚಿಕ್ಕಕೆರೆಯೂರು ಗ್ರಾಮದ ಮಾರಮ್ಮ ದೇವಸ್ಥಾನದ ಬಳಿ ಪ್ರಜಾ…

Read More

ಮಹಾರಾಣಿ ಕಾಲೇಜು ಕ್ರೀಡಾಪಟುಗಳ ಸಾಧನೆ

ಮೈಸೂರು: ನಗರದ ಮೈಸೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಸ್ಪೋರ್ಟ್್ಸ ಫೆವಿಲಿಯನ್ ಒಳಾಂಗಣದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ನಗರದ ಮಹಾರಾಣಿ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.ಜಿಮ್ನಾಸ್ಟಿಕ್, ವೇಟ್ ಲಿಫ್ಟಿಂಗ್, ಕುಸ್ತಿ, ಸ್ಫೋರ್ಟ್್ಸ ಪೆವಿಲಿಯನ್ ನಲ್ಲಿ, ಕಿಕ್ ಬಾಕ್ಸಿಂಗ್, ಕರಾಟೆ ಸ್ಪರ್ಧೆಗಳು ಯುವರಾಜ ಕಾಲೇಜಿನ ಒಳಾಂಗಣದಲ್ಲಿ ನಡೆದ ವಿಶ್ವವಿದ್ಯಾನಿಲಯ ಅಂತರ ಕಾಲೇಜುಗಳ ಸ್ಪರ್ಧೆ ಹಾಗೂ ವಿಶ್ವವಿದ್ಯಾನಿಲಯ ತಂಡಗಳ ಆಯ್ಕೆ ಪ್ರಕ್ರಿಯೆಯಲ್ಲಿ ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆ…

Read More

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯಕ್ಕೆ ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಮೈಸೂರು; ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಬೈರಮಂಗಲ -ಕಂಚುಗಾರನಹಳ್ಳಿ ಭೂ ಹಿತರಕ್ಷಣಾ ಸಂಘ ಜಂಟಿಯಾಗಿ ನಡೆಸಿದ ವಿಧಾನ ಸೌಧ ಚಲೋ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ನೀಡಿದ್ದ ಭರವಸೆಗಳನ್ನು ಜಾರಿ ಮಾಡುವಂತೆ ಆಗ್ರಹಿಸಿ, ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಅಮಾನುಷ ದೌರ್ಜನ್ಯ ನಡೆಸಿ ನೂರಕ್ಕೂ ಹೆಚ್ಚು ರೈತರನ್ನು ಪೊಲೀಸ್ ವಶಕ್ಕೆ ತೆಗೆದುಕೊಂಡಿರುವುದನ್ನು ಸಂಯುಕ್ತ ಹೋರಾಟ ಕರ್ನಾಟಕ ತೀವ್ರವಾಗಿ ಖಂಡಿಸುತ್ತದೆ ಎಂದು…

Read More

ಮಠಗಳಿಂದ ಹಿಂದೂ ಧರ್ಮ ಬಲಿಷ್ಠ; ಶಾಸಕ ಟಿ.ಎಸ್.ಶ್ರೀವತ್ಸ

ಶ್ರೀ ವಿದ್ಯಾಬಲಪೂರ್ಣತೀರ್ಥ ಸ್ವಾಮೀಜಿ ಅವರ 35ನೇ ಚಾತುರ್ಮಾಸ್ಯ ವ್ರತ ಸಮಾರೋಪಮೈಸೂರು: ಮಠ-ಮಾನ್ಯಗಳಿಂದ ಹಿಂದೂ ಧರ್ಮ ನಿಜಕ್ಕೂ ದಿನೇ ದಿನೇ ಗಟ್ಟಿಯಾಗುತ್ತಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.ನಗರದ ಸರಸ್ವತಿಪುರಂನ ಶ್ರೀಕೃಷ್ಣಧಾಮದಲ್ಲಿ ಶ್ರೀಕೃಷ್ಣ ಟ್ರಸ್ಟ್, ಶ್ರೀಕೃಷ್ಣ ಮಿತ್ರಮಂಡಳಿ ಹಾಗೂ ಚಾತುರ್ಮಾಸ್ಯ ಸಮಿತಿ ವತಿಯಿಂದ ಆಯೋಜಿಸಿದ್ದ ಶ್ರೀವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರ 35ನೇ ಚಾತುರ್ಮಾಸ್ಯ ವ್ರತ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಮೈಸೂರಿನ ಸುತ್ತೂರು ಶ್ರೀ ಮಠ, ಗಣಪತಿ ಸಚ್ಚಿದಾನಂದ ಆಶ್ರಮ ಸೇರಿದಂತೆ ವಿವಿಧ ಧಾರ್ಮಿಕ ಸಂಸ್ಥೆಗಳಲ್ಲಿ ದೂರದ ಊರುಗಳಿಂದ ಆಗಮಿಸಿದ ವಿದ್ಯಾರ್ಥಿಗಳು…

Read More

ಸಾಮಾಜಿಕ ಸಮಾನತೆ ಮತ್ತು ಸೌಹಾರ್ದತೆಗೆ ನಾರಾಯಣ ಗುರುಗಳ ಚಿಂತನೆಗಳೇ ದಾರಿದೀಪ: ಸಚಿವ ಮಧು ಬಂಗಾರಪ್ಪ

ಮೈಸೂರು: ಸಮಾಜದಲ್ಲಿ ಎಲ್ಲರ ನಡುವೆ ಸಾಮಾಜಿಕ ಸಮಾನತೆ ಮತ್ತು ಸೌಹಾರ್ದತೆಗೆ ನಾರಾಯಣ ಗುರುಗಳ ಚಿಂತನೆಗಳೇ ದಾರಿದೀಪವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಚಿವ ಮಧು ಬಂಗಾರಪ್ಪ ಹೇಳಿದರು.ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಬ್ರಹ್ಮ ಶ್ರೀ ನಾರಾಯಣಗುರು ಜಯಂತೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಬ್ರಹ್ಮ ಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಶಿಕ್ಷಣ ಕ್ರಾಂತಿಯ ಮೂಲಕ ಸಮಾಜದ ಕತ್ತಲೆ ಹೋಗಲಾಡಿಸಿದ ಯುಗಪುರುಷ ನಾರಾಯಣ ಗುರು…

Read More

ಜೋರು ಮಳೆಯ ಹಿನ್ನಲೆಯಲ್ಲಿ ಮಹೇಂದ್ರ ಆನೆಗೆ ಮರದ ಅಂಬಾರಿ ತಾಲೀಮು ಮೊಟಕುಮೈಸೂರು; ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಗಜಪಡೆಗೆ ಮೂರನೇ ಹಂತದ ತಾಲೀಮು ಶುರುವಾಗಿದ್ದು, ಶುಕ್ರವಾರ ಸುರಿದ ಜೋರು ಮಳೆಯಿಂದಾಗಿ ಮಹೇಂದ್ರ ಆನೆಯ ಮರದ ಅಂಬಾರಿ ತಾಲೀಮನ್ನು ಮೊಟಕುಗೊಳಿಸಲಾಯಿತು. .ಇಷ್ಟು ದಿನ ಕಾಲ ಭಾರ ಹೊರುವ ತಾಲೀಮು ನಡೆಸಿದ್ದ ಗಂಡಾನೆಗಳಿಗೆ ಮರದ ಅಂಬಾರಿ ಹೊರುವ ತಾಲೀಮಿನ ಮೊದಲ ದಿನಅರಮನೆ ಅಂಗಳದಲ್ಲಿನ ಕೋಡಿ ಸೋಮೇಶ್ವರ ದೇವಾಲಯದಲ್ಲಿ ಮಹೇಂದ್ರ ಬೆನ್ನಿಗೆ ಗಾದಿ ಮತ್ತು ನಮ್ಮಾ ಬಿಗಿದು. ಅರಮನೆಯ ಮರದ ಅಂಬಾರಿ…

Read More

ಮಾಜಿ ಸಿದ್ದರಾಮಯ್ಯ ನೇತೃತ್ವದ ಆರ್ಮಿ ಛಿದ್ರವಾಗಿಲ್ಲ, ಅವರ ಜೊತೆ ಆಪ್ತ ಆರ್ಮಿ ಇದೆ; ಸಚಿವ ಸತೀಶ್ ಜಾರಕಿಹೊಳಿ

ಮೈಸೂರು: ಮಾಜಿ ಸಿದ್ದರಾಮಯ್ಯ ನೇತೃತ್ವದ ಆರ್ಮಿ ಛಿದ್ರವಾಗಿಲ್ಲ, ಸಿದ್ದರಾಮಯ್ಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡುವೆ ಸಂಬAಧ ಉತ್ತಮವಾಗಿದೆ. ಸಿದ್ದರಾಮಯ್ಯ ಅರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್. ಈ ಬಗ್ಗೆ ಯಾರಿಗೂ ಅನುಮಾನ ಬೇಡ. ದೂರದ ಬೆಟ್ಟ ನುಣ್ಣಗೆ ಅಂತಾರೆ, ಹಾಗೆ ನಿಮಗೆ ನಾವು ಚೆನ್ನಾಗಿಲ್ಲ ಅನಿಸುತ್ತೆ. ಸಿದ್ದರಾಮಯ್ಯ ನಾನು ಚೆನ್ನಾಗಿಯೇ…

Read More

ಮಾಜಿ ಸಂಸದ ಪ್ರತಾಪ್‌ಸಿಂಹಗೆ ಮಧ್ಯಂತರ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಣೆ

ಮೈಸೂರು; ಜಿಲ್ಲೆಯ ಟಿ.ನರಸೀಪುರದಲ್ಲಿ ಗಣೇಶ ವಿಸರ್ಜನೆ ವೇಳೆ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ದಾಖಲಾಗಿರುವ ಜಾತಿ ನಿಂದನೆ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಮಧ್ಯಂತರ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದೆ.ಟಿ.ನರಸೀಪುರದಲ್ಲಿ ಸೆ.18ರಂದು ನಡೆದ ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ದಲಿತ ಸಂಘಟನೆಗಳ ಹೋರಾಟಗಾರರನ್ನು ಅವಮಾನ ಮಾಡಿ ಮತ್ತು ದಲಿತ ಸಮುದಾಯದ ಸಾಂಸ್ಕತಿಕ ಅಸ್ಮಿತೆಯಾದ ನೀಲಿ ಶಾಲಿನ ಬಗ್ಗೆ ಅವಹೇಳನ ಮಾಡಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಪ್ರತಾಪ್…

Read More