Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗೃಹಿಣಿ ಆತ್ಮಹತ್ಯೆ ಪ್ರಕರಣ ಆರೋಪಿ ವಿಕಾಸ್ ಬಂಧನ

ಹುಣಸೂರು; ತಾಲೂಕಿನ ಲಕ್ಕವಲ್ಲಿಕೊಪ್ಪಲು ಗ್ರಾಮದಲ್ಲಿ ಕ್ರಿಮಿನಾಶಕ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬAಧಿಸಿದAತೆ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ವಿಕಾಸ್ ಎಂಬಾತನನ್ನು ಬಿಳಿಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.ಲಕ್ಕವಲ್ಲಿಕೊಪ್ಪಲು ಗ್ರಾಮದ ಕಾಂತ ಎಂಬುವರ ಪತ್ನಿ ಸಿಂಧು (26) ಆತ್ಮಹತ್ಯೆ ಮಾಡಿಕೊಂಡವಳು.ಸಿಂಧು ಹಾಗೂ ವಿಕಾಸ್ ನಡುವೆ ಅಕ್ರಮ ಸಂಬAಧವಿತ್ತು ಎಂದು ಆರೋಪಿಸಲಾಗಿದೆ. ವಿಕಾಸ್‌ನಿಂದ ಬ್ಲಾ÷್ಯಕ್ ಮೇಲ್‌ಗೆ ಒಳಗಾಗಿದ್ದ ಸಿಂಧು, ಮಾನಸಿಕವಾಗಿ ನೊಂದಿದ್ದು, ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು.ಈ ಸಂಬAಧ ಮೃತ ಸಿಂಧು ಪತಿ ಕಾಂತ ಅವರು ಬಿಳಿಕೆರೆ…

Read More

ವಿದ್ಯಾರ್ಥಿಗಳಿಗೆ ಸೈಬರ್‌ಕ್ಲಾಶ್ ಕುರಿತು 12 ಗಂಟೆಗಳ ಹ್ಯಾಕಥಾನ್

ಮೈಸೂರು; ನಗರದ ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕಂಪ್ಯೂಟರ್ ಅಪ್ಲಿಕೇಷನ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಸೈಬರ್‌ಕ್ಲಾಶ್–2026. 12 ಗಂಟೆಗಳ ಹ್ಯಾಕಥಾನ್ ಅನ್ನು ಆಯೋಜಿಸಲಾಗಿತ್ತು.ಹ್ಯಾಕಥಾನ್‌ನಲ್ಲಿ ಒಟ್ಟು 63 ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಕೌಶಲ್ಯ, ಸೃಜನಶೀಲತೆ, ಸಮಸ್ಯೆ ಪರಿಹಾರ ಸಾಮರ್ಥ್ಯ ಹಾಗೂ ತಂಡದ ಕಾರ್ಯಕ್ಷಮತೆಯನ್ನು ಪ್ರದರ್ಶಿಸಲು ಈ ಕಾರ್ಯಕ್ರಮವು ಉತ್ತಮ ವೇದಿಕೆಯಾಗಿತ್ತು. ಹ್ಯಾಕಥಾನ್‌ನಲ್ಲಿ ಸೈಬರ್ ಗಾರ್ಡಿಯನ್, ಸೈಬರ್ ಡೆವಲಪರ್ ಮತ್ತು ಸೈಬರ್ ಸೆಂಟಿನೆಲ್ ಎಂಬ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. ನಿಗಧಿತ ಸಮಯದೊಳಗೆ…

Read More

ವಿಜಯ ವಿಠಲ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪರ್ಧೆಗಳಲ್ಲಿ ಬಹುಮಾನ

ಮೈಸೂರು; ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮೈಸೂರು ಜಿಲ್ಲೆ ಇವರು ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ವಿಜಯ ವಿಠಲ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.75 ಕೆ.ಜಿ. ಒಳಗಿನ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಎಸ್. ಧೀರಜ್ ಪಟೇಲ್ ಚಿನ್ನದ ಪದಕ, 66 ಕೆ.ಜಿ ಒಳಗಿನ ಬಾಲಕರ ಕರಾಟೆ (ಕುಮಿಟೆ) ಸ್ಪರ್ಧೆಯಲ್ಲಿ ಅಶ್ವಿನ್ ಗೌಡ ಚಿನ್ನದ ಪದಕ, 50 ಕೆ.ಜಿ. ಒಳಗಿನ ಬಾಲಕರ ಕರಾಟೆ ಸ್ಪರ್ಧೆಯಲ್ಲಿ ದೈವಿಕ್.ಎಸ್. ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ.ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ…

Read More

ಕಾವೇರಿ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿರುವ ಶ್ರೀ ಕಾವೇರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಸಂಸ್ಥೆ, ರಾಷ್ಟಿçÃಯ ಸೇವಾ ಯೋಜನೆ (ಎನ್‌ಎಸ್‌ಎಸ್) ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಕಾಲೇಜಿನ ಪ್ರಾಂಶುಪಾಲರಾದ ಪದ್ಮಾವತಿ ಕೆ.ಎಂ. ಮಾತನಾಡಿ, ರಕ್ತದಾನವು ಮಾನವೀಯ ಸೇವೆಯ ಅತ್ಯುನ್ನತ ಕಾರ್ಯವಾಗಿದ್ದು, ಯುವಜನರು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಜೀವ ಉಳಿಸುವ ಮಹತ್ತರ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.ಶಿಬಿರದಲ್ಲಿ 80ಕ್ಕೂ ಹೆಚ್ಚು ಕಾಲೇಜಿನ ವಿದ್ಯಾರ್ಥಿಗಳು…

Read More

ಗ್ರಾಮೀಣರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವದ್ದು: ಹೆಚ್.ಜಿ.ಶಿವಶಂಕರ್

ಪಿರಿಯಾಪಟ್ಟಣ: ಸಹಕಾರ ಸಂಘಗಳು ಗ್ರಾಮೀಣ ಪ್ರದೇಶದಲ್ಲಿ ಗರಿಷ್ಠ ಪ್ರಮಾಣದಲ್ಲಿ ನೋಂದಣಿಯಾಗಿ, ಗ್ರಾಮೀಣರ ಆರ್ಥಿಕ ಸಬಲೀಕರಣಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ನೆಲಜಲ ಗ್ರಾಮೀಣ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ಹೆಚ್.ಜಿ.ಶಿವಶಂಕರ್ ತಿಳಿಸಿದರು. ಪಟ್ಟಣದ ಡಿ.ದೇವರಾಜು ಅರಸು ಕಲಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನೆಲಜಲ ಗ್ರಾಮೀಣ ಅಭಿವೃದ್ಧಿ ಸಹಕಾರ ಸಂಘದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು ಯಾವುದೇ ಸಹಕಾರ ಸಂಘವು ಅಭಿವೃದ್ಧಿಯಾಗಿ ಅದರ ಪ್ರತಿಫಲ ಸಮಾಜಕ್ಕೆ ಸಿಗಬೇಕಾದರೆ ಸಂಘದ ಸದಸ್ಯರ ಸಹಕಾರ ಅಗತ್ಯ. ಸಹಕಾರಿ ತತ್ವದ…

Read More

ಅರಮನೆ ಆವರಣದಲ್ಲಿ ಪೊಲೀಸರಿಂದ ಕುಶಲತೋಪು ಸಿಡಿಸುವ ಫಿರಂಗಿಗಳಿಗೆ ಪೂಜೆ

ಮೈಸೂರು; ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ವಿಜಯದಶಮಿ ಜಂಬೂಸವಾರಿಯ ಪ್ರಮುಖ ಸಂಪ್ರದಾಯಗಳಲ್ಲಿ ಒಂದಾದ ಕುಶಾಲತೋಪು ಸಿಡಿಸುವ ಫಿರಂಗಿ ಗಾಡಿಗಳಿಗೆ ಶುಕ್ರವಾರ ನಗರದ ವಿಶ್ವ ಪ್ರಸಿದ್ಧ ಅಂಬಾ ವಿಲಾಸ ಅರಮನೆಯ ಆವರಣದಲ್ಲಿ ಪೊಲೀಸರಿಂದ ವಿಶೇಷ ಪೂಜೆ ನೆರವೇರಿಸಲಾಯಿತು.ಅರಮನೆಯ ಆನೆ ಬಾಗಿಲಿನ ಬಳಿ ಇರುವ 11 ಫಿರಂಗಿ ಗಾಡಿಗಳಿಗೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಸಂಪ್ರದಾಯಬದ್ಧವಾಗಿ ಪೂಜೆ ಸಲ್ಲಿಸಲಾಯಿತು. ಅರಮನೆಯ ಅರ್ಚಕ ಪ್ರಹ್ಲಾದ್ ರಾವ್ ಅವರು ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಫಿರಂಗಿ ಗಾಡಿಗಳಿಗೆ ಪೂಜೆ…

Read More

ಮೈಸೂರು ದಸರಾ ಕವಿಗೋಷ್ಠಿ ಉದ್ಘಾಟಿಸಲಿರುವ ಹಿರಿಯ ಲೇಖಕಿ ವೈದೇಹಿ ಅವರಿಗೆ ಸಮಿತಿಯಿಂದ ಅಧಿಕೃತ ಆಹ್ವಾನ

ಮೈಸೂರು; ಈ ಬಾರಿ ನಡೆಯಲಿರುವ ವಿಶ್ವ ಪ್ರಸಿದ್ಧ ನಾಡ ಹಬ್ಬ ಮೈಸೂರಿನ ದಸರಾ ಮಹೋತ್ಸವದ ಅಂಗವಾಗಿ ನಡೆಯುವ ದಸರಾ ಕವಿಗೋಷ್ಠಿ ಉದ್ಘಾಟಿಸಲಿರುವ ಹಿರಿಯ ಲೇಖಕಿ ವೈದೇಹಿ ಅವರನ್ನು ಉಡುಪಿ ಜಿಲ್ಲೆಯ ಮಣಿಪಾಲದ ಅವರ ನಿವಾಸದಲ್ಲಿ ಶುಕ್ರವಾರ ಸನ್ಮಾನಿಸುವ ಮೂಲಕ ಆಹ್ವಾನಿಸಲಾಯಿತು.ವಿಜಯನಗರ ಸಾಮ್ರಾಜ್ಯ ಕಾಲದಿಂದ ದಸರಾ ಮಹೋತ್ಸವದ ರಥ ಸಾಗುತ್ತಿದೆ. ಅದು ಕನ್ನಡದ ರಥವಾಗಿದ್ದು, ಮುಂದೆಯೂ ಸಾಂಗವಾಗಿ ಸಾಗಲಿ ಎಂದು ಹಿರಿಯ ಲೇಖಕಿ ವೈದೇಹಿ ಅಭಿಪ್ರಾಯಪಟ್ಟರು.ಮೈಸೂರಿನಿಂದ ದಸರಾ ಕವಿಗೋಷ್ಠಿ ಉಪಸಮಿತಿಯ ಆಹ್ವಾನ ಸ್ವೀಕರಿಸಿ ಮಾತನಾಡಿದ ಅವರು,ಐದು ಕವಿಗೋಷ್ಠಿಗಳಿಗೆ ಜನರು…

Read More

ಶಿಕ್ಷಣದಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ ; ಕುಲಪತಿ ಪ್ರೊ ಎಂ.ಆರ್ ಗಂಗಾಧರ್

 ಚಾಮರಾಜನಗರ ;  ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಹಲವಾರು ಜನಪರ ಯೋಜನೆಯನ್ನು ಜಾರಿ ಮಾಡಿದ್ದಾರೆ ಇದನ್ನು ಬಳಸಿಕೊಂಡು ಮುಖ್ಯ ವಾಹಿನಿಗೆ ಬರಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾಲಯ ಕುಲಪತಿ ಪ್ರೊಫೆಸರ್  ಎಂ ಆರ್ ಗಂಗಾಧರ್ ತಿಳಿಸಿದರು  ನಗರದ ಜೋಡಿ ರಸ್ತೆಯಲ್ಲಿರುವ ಜೆಎಸ್ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಭಾರತ ಸರ್ಕಾರದ ಮೈ ಭಾರತ್ ಕೇಂದ್ರ. ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯ. ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಸಂಯುಕ್ತ ಆಶ್ರಯದಲ್ಲಿ ನಡೆದ ಪಂಡಿತ್ ದೀನಾ ದಯಳ್ ಉಪಾಧ್ಯಾಯ ಜನ್ಮದಿನಾಚರಣೆ…

Read More

ಸುಣ್ಣ-ಬೆಣ್ಣೆ ಹಿಡಿದುಕೊಂಡು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ

ಮೈಸೂರು; ಮುಂದಿನ 15 ದಿನಗಳ ಕಾಲ ಪ್ರತಿನಿತ್ಯ ತಮಿಳುನಾಡಿಗೆ 4 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಡೆಯನ್ನು ಖಂಡಿಸಿ ಶುಕ್ರವಾರ ನಗರದಲ್ಲಿ ಕರ್ನಾಟಕ ಸೇನಾ ಪಡೆ ವತಿಯಿಂದ ಕೈಯಲ್ಲಿ ಬೆಣ್ಣೆ ಹಾಗೂ ಸುಣ್ಣವನ್ನು ಹಿಡಿದು ಪ್ರತಿಭಟನೆ ನಡೆಸಲಾಯಿತು.ನಗರದ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಕಾವೇರಿ ನೀರು ನಿರ್ವಹಣ ಪ್ರಾಧಿಕಾರ ನಮಗೆ ಸುಣ್ಣ ಹಾಗೂ ತಮಿಳುನಾಡಿಗೆ ಬೆಣ್ಣೆಯನ್ನು ಕೊಡುತ್ತಿದೆ ಎಂದು ಅಣುಕು ಪ್ರತಿಭಟನೆ ನಡೆಸಿ, ಘೋಷಣೆಗಳನ್ನು ಕೂಗಿ ಆಕ್ರೋಶ…

Read More

ದಸರಾ ದೀಪಾಲಂಕಾರ ಹೊಸತನದಿಂದ ಕೂಡಿರಲಿ : ಇಂಧನ ಸಚಿವ ಕೆ.ಜೆ.ಜಾರ್ಜ್

ಮೈಸೂರು: ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಮಾಡಲಾಗುವ ದೀಪಾಲಂಕಾರ ಕಳೆದ ಬಾರಿಗಿಂತಲೂ ಹೆಚ್ಚು ಆಕರ್ಷಕ ಹಾಗೂ ಹೊಸತನದಿಂದ ಕೂಡಿರಬೇಕು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಶುಕ್ರವಾರ ಮೈಸೂರಿನ ಕಡಕೊಳದಲ್ಲಿರುವ ಕರ್ನಾಟಕ ಇಂಜಿನಿಯರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ನಡೆದ 2026ನೇ ಸಾಲಿನ ದಸರಾ ಆಚರಣೆಯ ವಿವಿಧ ಕಾರ್ಯಕ್ರಮಗಳ ಪೂರ್ವಸಿದ್ಧತಾ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,“ಕಳೆದ ಬಾರಿ ದಸರಾ ಸಂದರ್ಭದಲ್ಲಿ ಉತ್ತಮ ರೀತಿಯಲ್ಲಿ ದೀಪಾಲಂಕಾರ ಮಾಡಲಾಗಿತ್ತು. ಈ ಬಾರಿ ಅದಕ್ಕಿಂತಲೂ ವಿಭಿನ್ನವಾಗಿ ಹಾಗೂ ಆಕರ್ಷಕವಾಗಿ ದೀಪಾಲಂಕಾರ ರೂಪಿಸಬೇಕು. ದಸರಾಕ್ಕೆ…

Read More