ಬಿಜೆಪಿಯಿಂದ “ಕಾಂಗ್ರೆಸ್ ಸರ್ಕಾರದ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ
ಮೈಸೂರು: ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆಯಂದು ಆರೋಪಿಸಿ ಬಿಜೆಪಿನಗರ ಹಾಗೂ ಗ್ರಾಮಾಂತರ ಘಟಕದಿಂದ ಗುರುವಾರ ನಗರದಲ್ಲಿ “ಕಾಂಗ್ರೆಸ್ ಸರ್ಕಾರದ ಅಣಕು ಶವಯಾತ್ರೆ” ಪ್ರತಿಭಟನೆಯನ್ನು ನಡೆಸಿತು.ನಗರದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿನ ಸೂತಮುತ್ತಲಿನ ಪ್ರದೇಶಗಳಲ್ಲಿ ಕಾಂಗ್ರೆಸ್ ಸರ್ಕಾರದ ಅಣಕು ಶವಯಾತ್ರೆ ನಡೆಸಿ, ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿರುವುದನ್ನು ತೀವ್ರವಾಗಿ ಖಂಡಿಸಿದರು. ಕಾಂಗ್ರೆಸಿನ ನಾಯಕ ರಾಹುಲ್ ಗಾಂಧಿಯವರ ಪೋಟೋಗಳನ್ನು ಹರಿಯುವ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ಮಂಗಳೂರಿನಲ್ಲಿ ಸಚಿವ…