Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಿದ್ದರಾಮಯ್ಯ ವಿರುದ್ಧ ನಡೆದಿರುವ ಸ್ಟಿಂಗ್ ಆಪರೇಷನ್‌ನ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕು; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿರುವ ಸ್ಟಿಂಗ್ ಆಪರೇಷನ್‌ನ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕು. ಅವರನ್ನು ಕೂಡ ಪೊಲೀಸರು ಬಂಧಿಸಬೇಕು ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆ ಸಿದ್ದರಾಮಯ್ಯನವರ ವಿರುದ್ಧ ನಡೆದಿರುವ ಸ್ಟಿಂಗ್ ಆಪರೇಷನ್‌ನ ವಿಚಾರ ಕುರಿತು ನಾವು ಪೊಲೀಸರಲ್ಲಿ ದೂರು ದಾಖಲಿಸಿದ್ದೇವೆ. ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸುವಂತೆ ಮನವಿ ಮಾಡಿದ್ದೇವೆ. ತನಿಖೆ ನಡೆಸುವ ಜವಾಬ್ದಾರಿ ಪೊಲೀಸರ ಮೇಲಿದೆ….

Read More

ಮನುಕುಲದ ಮಹಾಜ್ಞಾನ ರತ್ನ ಆದಿಕವಿ ವಾಲ್ಮೀಕಿ.

ಮೈಸೂರು; ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾವಿಲಾಸ ಪದವಿಪೂರ್ವ ಕಾಲೇಜಿನಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿಯವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಕಾಲೇಜಿನ ಪ್ರಾಂಶುಪಾಲ ಸಿ.ಕೆ.ಅಶೋಕ್‌ಕುಮಾರ್ ಮಾತನಾಡಿ, ಮನುಕುಲದ ಮಹಾಜ್ಞಾನರತ್ನ ಆದಿಕವಿ ವಾಲ್ಮೀಕಿ. ರಾಮಾಯಣದಲ್ಲಿ 24 ಸಾವಿರ ಶ್ಲೋಕಗಳನ್ನು ಬರೆದು, ಜಗತ್ತಿಗೆ ಬೆಳಕಾಗಿ ನಿಂತ ಮಹಾಜ್ಞಾನಿ ಎಂದು ತಿಳಿಸಿದರು.ರಾಮಾಯಣ ಕೇವಲ ರಾಮಚರಿತ್ರೆಯಲ್ಲ, ಅದು ಧರ್ಮ, ತ್ಯಾಗ, ಪ್ರೀತಿ, ಕರ್ತವ್ಯ, ಕುಟುಂಬದ ಮೌಲ್ಯಗಳನ್ನು ಸಾರುವ ಅಮರ ಕಾವ್ಯ ಎಂದು ತಿಳಿಸಿದರು. ರಾಮಾಯಣ ಎಂಬ ಮಹಾನ್‌ಗ್ರಂಥವನ್ನು ರಚಿಸಿ, ಭಾರತೀಯರ…

Read More

ಮೂರ್ನಾಲ್ಕು ತಿಂಗಳಲ್ಲಿ ವಾಲ್ಮೀಕಿ ಭವನ ಉದ್ಘಾಟನೆ; ಶಾಸಕ ಅನಿಲ್ ಚಿಕ್ಕಮಾದು 

ಎಚ್ ಡಿ ಕೋಟೆ :  ಪಟ್ಟಣದಲ್ಲಿ 8 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ  ವಾಲ್ಮೀಕಿ ಭವನ ಕಾಮಗಾರಿ ಶೇ 90ರಷ್ಟು ಪೂರ್ಣಗೊಂಡಿದ್ದು, ಉಳಿದ ಕಾಮಗಾರಿ ಇನ್ನು ಮೂರ್ನಾಲ್ಕು ತಿಂಗಳಲ್ಲಿ ಪೂರ್ಣಗೊಂಡು , ಉದ್ಘಾಟನೆಯಾಗಲಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.  ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪುರಸಭೆಯ ಸಹಯೋಗದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನವೆಂಬರ್ ೨ ರಂದು ಸರಗೂರಿನಲ್ಲಿ ಅದ್ದೂರಿಯಾಗಿ, ಅರ್ಥಪೂರ್ಣವಾಗಿ…

Read More

ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ಮೈಸೂರು ನೈಋತ್ಯ ರೈಲ್ವೆ ವಿಭಾಗದಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ

ಮೈಸೂರು; ಮೈಸೂರು ನೈಋತ್ಯ ರೈಲ್ವೆ ವಿಭಾಗದಿಂದ ಅಕ್ಟೋಬರ್ 26ರಿಂದ ನವೆಂಬರ್ 1ರವರೆಗೆ ಜಾಗೃತಿ ಅರಿವು ಸಪ್ತಾಹವನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ, ಸಾರ್ವಜನಿಕ ಸೇವೆಯಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಉತ್ತೇಜಿಸುವ ಹಾಗೂ ಭ್ರಷ್ಟಾಚಾರ ತಡೆಗಟ್ಟುವ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮೈಸೂರು ವಿಭಾಗೀಯ ಕಚೇರಿಯಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಮೈಸೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್ ಅವರು ವಿಭಾಗೀಯ ಕಚೇರಿಯ ತೆರೆದ ಸಭಾಂಗಣದಲ್ಲಿ ನೆರೆದಿದ್ದ ಅಧಿಕಾರಿಗಳು, ರೈಲ್ವೆ ಸಿಬ್ಬಂದಿ, ಸ್ಕೌಟ್ಸ್ ಮತ್ತು…

Read More

ಮಹರ್ಷಿ ವಾಲ್ಮೀಕಿಯವರು ಜ್ಞಾನದ ಸಂಕೇತವಾಗಿದ್ದಾರೆ;ಶಾಸಕ ದರ್ಶನ್ ಧ್ರುವನಾರಾಯಣ

ನಂಜನಗೂಡು;  ಮಹರ್ಷಿ ವಾಲ್ಮೀಕಿಯವರು ಜ್ಞಾನದ ಸಂಕೇತವಾಗಿದ್ದಾರೆ, ಅವರ ರಾಮಾಯಣದ ಸಂದೇಶಗಳು ಮನುಕುಲದ ಜೀವನಕ್ಕೆ ದಾರಿ ದೀಪವಾಗಿವೆ, ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅರ್ಥಪೂರ್ಣ ಬದುಕು ಸಾಗಿಸಲು ಸಾಧ್ಯ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.  ಅವರು ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.   ಮಹರ್ಷಿ ವಾಲ್ಮೀಕಿಯವರು   ರಾಮಾಯಣ ಮುಖೇನ ಆದರ್ಶಮಯ ಬದುಕು ಸಾಗಿಸುವಂತಹ ಸಾಮಾಜಿಕ ಸಂದೇಶವನ್ನು ಇಡೀ ವಿಶ್ವಕ್ಕೆ…

Read More

ಮಹರ್ಷಿ ವಾಲ್ಮೀಕಿ ವಿಶ್ವಮಾನ್ಯ ದಾರ್ಶನಿಕರಾಗಿದ್ದಾರೆ : ಚಲುವರಾಯ 

ಪಿರಿಯಾಪಟ್ಟಣ: ಭಾರತದ ಭವ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ರಾಮಾಯಣದಂತಹ ಮೇರುಕೃತಿಯನ್ನು ರಚಿಸಿದ ಮಹರ್ಷಿ ವಾಲ್ಮೀಕಿ ವಿಶ್ವಮಾನ್ಯ ದಾರ್ಶನಿಕರಾಗಿದ್ದಾರೆ ಎಂದು ಎಪಿಎಂಸಿ ಸಹಾಯಕ ಕಾರ್ಯದರ್ಶಿ ಚಲುವರಾಯ ತಿಳಿಸಿದರು. ಪಟ್ಟಣದ ಅರಸು ಭವನದಲ್ಲಿ ತಾಲ್ಲೂಕು ಆಡಳಿತ, ಪರಿಶಿಷ್ಟ ಪಂಗಡ ಇಲಾಖೆ ವತಿಯಿಂದ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಅವರು ರಾಮಾಯಣದ ಮೂಲಕ ರಾಜಧರ್ಮ, ನೀತಿಶಾಸ್ತ್ರವನ್ನು ಜಗತ್ತಿಗೆ ಬೋಧಿಸಿದ ವಾಲ್ಮೀಕಿ ಮಹರ್ಷಿಯು ಪ್ರಾತಃ ಸ್ಮರಣೀಯರಾಗಿದ್ದಾರೆ. ಸ್ತ್ರೀ -ಪುರುಷ ಸರಿಸಮಾನತೆ ಯೊಂದಿಗೆ ಕಲ್ಯಾಣ ರಾಜ್ಯದ ಆಶಯ ಹೊಂದಿದ್ದ ವಾಲ್ಮೀಕಿಯು…

Read More

ಹೆಚ್ಚುವರಿ 12 ಸಾರಿಗೆ ಬಸ್ ಗಳ ಸಂಚಾರಕ್ಕೆ ಶಾಸಕ ಅನಿಲ್ ಚಿಕ್ಕಮಾದು ಹಸಿರು ನಿಶಾನೆ 

ಕೋಟೆ – ಮೈಸೂರು ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಹಿನ್ನೆಲೆ  ಎಚ್ ಡಿ ಕೋಟೆ : ಸರಗೂರು ಮತ್ತು ಹೆಚ್ ಡಿ ಕೋಟೆ ಸಾರಿಗೆ ಬಸ್ ನಿಲ್ದಾಣದಿಂದ ಮೈಸೂರಿಗೆ ಹೋಗುವವರ ಮತ್ತು ಬರುವವರ ಸಂಖ್ಯೆ ಹೆಚ್ಚಳವಾಗಿರುವ ಹಿನ್ನೆಲೆ ಎಚ್ ಡಿ ಕೋಟೆ ಸಾರಿಗೆ ಡಿಪೋಗೆ ಮತ್ತೆ 12 ಸಾರಿಗೆ ಬಸ್ ನೀಡಲಾಗಿದ್ದು, ಸೋಮವಾರ ಸಾಂಕೇತಿಕವಾಗಿ  ಎರಡು ಬಸ್ ಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಹಸಿರು ನಿಶಾನೆ ತೋರಿದರು. ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಶಾಸಕ ಅನಿಲ್…

Read More

ನಗರದ ವಿವಿಧೆಡೆ ಸಂಭ್ರಮದಿ0ದ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ

ಮೈಸೂರು; ನಗರದ ವಿವಿಧೆಡೆ, ವಿವಿಧ ಸಂಸ್ಥೆಗಳಿAದ ಮಹರ್ಷಿ ವಾಲ್ಮೀಕಿಯವರ ಜಯಂತಿಯನ್ನು ಸಡಗರ, ಸಂಭ್ರಮದಿAದ ಆಚರಿಸಲಾಯಿತು.ನಗರದ ಚಾಮರಾಜಪ್ಮರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ,ಮೈಸೂರು : ಸಮಾಜದ ಸುಧಾರಣೆಗೆ ಕೊಡುಗೆ ನೀಡಿದ ಮಹನೀಯರ ಜಯಂತಿಗಳನ್ನು ಎಲ್ಲರೂ ಸೇರಿ ಆಚರಿಸಬೇಕು. ಅವರು ಸಾರಿದ ಮಾನವೀಯ ಸಂದೇಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ವಾಲ್ಮೀಕಿ ಅವರು ರಚಿಸಿದ ಮೂಲ ರಾಮಾಯಣದ ನಂತರ, ಭಾರತೀಯ ಸಾಹಿತ್ಯ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಹಲವು ಸ್ವತಂತ್ರ…

Read More

15 ದಿನಗಳ ಕಾಲ ನಡೆದ ದಸರಾ ಆಹಾರ ಮೇಳದಲ್ಲಿ 216 ಮೆಟ್ರಿಕ್ ಟನ್ ತ್ಯಾಜ್ಯ ಸಂಗ್ರಹ

ಮೈಸೂರು; ಈ ಬಾರಿ ನಡೆದ ವಿಶ್ವ ಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಮಹಾರಾಜ ಕಾಲ್ಭೆಜ್ ಮೈದಾನದಲ್ಲಿ 15 ದಿನಗಳ ಆಯೋಜಿಸಲಾಗಿದ್ದ ದಸರಾ ಆಹಾರ ಮೇಳದಲ್ಲಿ ಬರೋ ಬರೀ 216 ಮೆಟ್ರಿಕ್ ತ್ಯಾಜ್ಯ ಉತ್ಪತ್ತಿಯಾಗಿದ್ದು, ಅದನ್ನು ಮೈಸೂರು ಮಹಾನಗರಪಾಲಿಕೆ ವಿಲೇವಾರಿ ಮಾಡಿದೆ ಎಂದು ಆಯುಕ್ತೆ ಎಂ.ಕೆ.ಸವಿತಾ ತಿಳಿಸಿದ್ದಾರೆ.ದಸರಾ-2026 ರ ಅಂಗವಾಗಿ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಅ.11 ರಿಂದ 25 ರವರೆಗೆ ಒಟ್ಟಾರೆ ಹದಿನೈದು ದಿನಗಳ ಕಾಲ ಆಹಾರ ಮೇಳವನ್ನು ಆಯೋಜಿಸಲಾಗಿದ್ದು, ರಾಜ್ಯದ…

Read More

ಪ್ರಮೋದಾದೇವಿ ಅವರು ಹೇಳಿರುವ ಎಲ್ಲಾ ಸಲಹೆಗಳನ್ನು ಕೇಳಲು ಸರ್ಕಾರಕ್ಕೆ ಸಾಧ್ಯವಿಲ್ಲ; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

*ಏನೇ ಸಮಸ್ಯೆಗಳಿದ್ದರೂ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಸರ್ಕಾರ ಸಿದ್ಧವಿದೆ.ಮೈಸೂರು: ವಿಶ್ವ ಪ್ರಸಿದ್ದ ಮೈಸೂರಿನ ಅಂಬಾವಿಲಾಸ ಅರಮನೆ ಬೋರ್ಡ್ ರಾಜ್ಯ ಸರ್ಕಾರದ್ದು, ಅರಮನೆಯ ಬಹುಪಾಲು ಜಾಗವೂ ಸರ್ಕಾರದ್ದು. ಆದರೆ ರಾಜಮನೆತನದವರ ವಾಸಕ್ಕೆಂದು ಒಂದಿಷ್ಟು ಜಾಗ ಕೊಟ್ಟಿದ್ದೇವೆ. ರಾಜಮಾತೆ ಪ್ರಮೋದಾದೇವಿ ಅವರು ಹೇಳುವ ಎಲ್ಲಾ ಸಲಹೆಗಳನ್ನು ಕೇಳಲು ಸರ್ಕಾರಕ್ಕೆ ಸಾಧ್ಯವಿಲ್ಲ” ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತೀಕ್ಷ÷್ಣವಾಗಿ ಹೇಳಿದರು.ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರು ಬಿಡುಗಡೆ ಮಾಡಿರುವ ನಾಲ್ಕು ಪ್ಮಟಗಳ ಪತ್ರಿಕಾ ಹೇಳಿಕೆಗೆ…

Read More