
ಮೈಸೂರು; ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಕೋರಿ ಮೈಸೂರು ದಸರಾ ಮಹೋತ್ಸವ ಸಮಿತಿಯಿಂದ ಗುರುವಾರ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು, ವಿವಿಧ ಇಲಾಕೆಗಳ ಸಚಿವರು, ಶಾಸಕರುಗಳು, ನಿಗಮ ಮಂಡಳಿಗಳ ಅಧ್ಯಕ್ಷರುಗಳು ಹಾಗೂ U್ಪಣ್ಯರಿಗೆ ಅಧಿಕೃತ ಆಹ್ವಾನವನ್ನು ನೀಡಲಾಯಿತು.
ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ಸಮಿತಿಯ ಸದಸ್ಯರು, ಬೆಂಗಳೂರಿನ ರಾಜಭವನದಲ್ಲಿ ಮೈಸೂರಿನಲ್ಲಿ ನಡೆಯುವ ದಸರಾ ನಾಡಹಬ್ಬಕ್ಕೆ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಅವರನ್ನು ಆಹ್ವಾನಿಸಿದರು.
ಬಳಿಕ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ, ದಸರಾ ಮಹೋತ್ಸವದ ಉದ್ಘಾಟನೆಗೆ ಆಗಮಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅಧಿಕೃತವಾಗಿ ಆಹ್ವಾನಿಸಿದರು.
ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು, ವಿವಿಧ ಕಾರ್ಯಕ್ರಮಗಳ ಆಯೋಜನೆ ಹಾಗೂ ಪೂರ್ವಭಾವಿ ಕ್ರಮಗಳ ಕುರಿತು ಸೌಹಾರ್ದಯುತವಾಗಿ ಚರ್ಚಿಸಿದರು.
ದಸರಾ ಮಹೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವೈಭವದಿಂದ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆಗಳ ಕುರಿತು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಲಾಯಿತು.
ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ, ದಸರಾಗೆ ಆಹ್ವಾನವನ್ನು ನೀಡಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್, ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.