Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷಾ ಅಭ್ಯರ್ಥಿಗಳ ಉಪಯೋಗಕ್ಕಾಗಿ ಎರಡನೇ ಉಚಿತ ಅಣುಕು ಪರೀಕ್ಷೆ

ಮೈಸೂರು; ನಗರ ಕೇಂದ್ರ ಗ್ರಂಥಾಲಯದ ಮೈಸೂರು ಹಾಗೂ ಬೆಂಗಳೂರಿನ ಜ್ಞಾನ ಗಂಗೋತ್ರಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಸಂಯುಕ್ತಾಶ್ರಯದಲ್ಲಿ ಗುರುವಾರ ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷಾ ಅಭ್ಯರ್ಥಿಗಳ ಉಪಯೋಗಕ್ಕಾಗಿ ಎರಡನೇ ಉಚಿತ ಅಣುಕು ಪರೀಕ್ಷೆಯನ್ನು ಮೈಸೂರಿನ ಪೀಪಲ್ಸ್ ಪಾರ್ಕ್ ಗ್ರಂಥಾಲಯದ ಕಿರು ಸಭಾಂಗಣದಲ್ಲಿ ನಡೆಸಲಾಯಿತು. ಪರೀಕ್ಷೆಗೆ ೫೦ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಬೆಳಿಗ್ಗೆ ೧೦:೩೦ ರಿಂದ ೧೨:೩೦ ರವರೆಗೆ ಸಾಮಾನ್ಯ ಜ್ಞಾನ ಪತ್ರಿಕೆಯನ್ನು ಮಧ್ಯಾಹ್ನ ೨ ರಿಂದ ೪ ಗಂಟೆವರೆಗೆ, ಭಾಷಾಜ್ಞಾನ ಹಾಗೂ ಕಂಪ್ಯೂಟರ್ ಜ್ಞಾನ ಪತ್ರಿಕೆಗೆ ಸಂಬAಧಿಸಿದ ಪರೀಕ್ಷೆಗಳನ್ನು ನಡೆಸಲಾಯಿತು.
ಮುಖ್ಯ ಸಭಾಂಗಣದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಮ್ಮಿಕೊಂಡಿದ್ದ “ಸಾರ್ವಜನಿಕರಲ್ಲಿ ಓದುವ ಹವ್ಯಾಸವನ್ನು ಬೆಳೆಸುವಲ್ಲಿ ಪತ್ರಿಕೋದ್ಯಮದ ಪಾತ್ರ ಒಂದು ಸಂವಾದ” ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸಿದ್ದ ಶಾಸಕ ಜಿ.ಟಿ. ದೇವೇಗೌಡ, ಸದರಿ ಅಣುಕು ಪರೀಕ್ಷೆ ನಡೆಯುತ್ತಿದ್ದ ಕಿರು ಸಭಾಂಗಣಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳು ಅಣುಕು ಪರೀಕ್ಷೆಯನ್ನು ಗಂಭೀರವಾಗಿ ಬರೆಯುವುದರಲ್ಲಿ ಮಗ್ನರಾಗಿರುವುದನ್ನು ವೀಕ್ಷಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೈಸೂರು ಗಾಂಧಿಭವನದ ವಿಶ್ರಾಂತ ನಿರ್ದೇಶಕ ಡಾ. ಎಸ್ ಶಿವರಾಜಪ್ಪ ಮಾತನಾಡಿ , ಮೈಸೂರು ವಿಶ್ವವಿದ್ಯಾನಿಲಯ ರವರು ಮಾತನಾಡಿ ಹಿಂದಿನ ಯುವ ಜನಾಂಗದವರಿಗೆ ಎಲ್ಲಾ ರೀತಿಯ ಅನುಕೂಲಗಳು ಲಭ್ಯವಿದ್ದು ಅದನ್ನು ಸರಿಯಾಗಿ ಬಳಸಿಕೊಳ್ಳದಿರುವುದು ವಿಪರ್ಯಾಸ ಎಂದರು. ಯಾವುದೇ ಸವಾಲನ್ನು ಧೈರ್ಯವಾಗಿ ಎದುರಿಸುವ ಮನೋಭಾವವನ್ನು ಯುವ ಜನಾಂಗ ಬೆಳಸಿಕೊಳ್ಳಬೇಕು. ಅನೇಕ ವೇಳೆ ಅಂಜಿಕೆ ಹಾಗೂ ಕೀಳರಿಮೆ ಒಬ್ಬ ವ್ಯಕ್ತಿಯ ನಿಜವಾದ ಪ್ರತಿಭೆಯನ್ನು ಹೊರಹೊಮ್ಮಲು ಬಿಡುವುದಿಲ್ಲ. ಹಾಗಾಗಿ ಧೈರ್ಯವಾಗಿ ಮುನ್ನುಗುವ ಮನೋವೃತ್ತಿಯನ್ನು ಬೆಳೆಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಮಂಜುನಾಥ್ ಬಿ. ಮಾತನಾಡಿ, ಈ ಹಿಂದೆ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅಣುಕು ಪರೀಕ್ಷೆಗಳನ್ನು ನಡೆಸಲಾಗಿ, ಅದರ ಉಪಯೋಗ ಪಡೆದುಕೊಂಡ ಅನೇಕ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪ್ರಸ್ತುತ ದೈಹಿಕ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂದರು. ಸಭೆಯಲ್ಲಿ ಹಾಜರಿದ್ದ ಅಂತಹ ತೇರ್ಗಡೆಯಾದ ಕೆಲ ಅಭ್ಯರ್ಥಿಗಳಿಗೆ ಪುಸ್ತಕಗಳನ್ನು ನೀಡಿ ಗೌರವಿಸಿದರು. ನವೆಂಬರ್ ಮಾಹೆಯಲ್ಲಿ ನಡೆಯಲಿರುವ ಕೆಎಎಸ್ ಪೂರ್ವಭಾವಿ ಪರೀಕ್ಷೆಗೆ ಇದೇ ಸೋಮವಾರ ಅಕ್ಟೋಬರ್ ೫ ನೇ ತಾರೀಖಿನಂದು ಅಣಕು ಪರೀಕ್ಷೆಗಳನ್ನು ವಿವಿಧ ಹಂತಗಳಲ್ಲಿ ನಡೆಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಸಿ.ಕೆ.ಮಹೇಂದ್ರ, ಮೈಸೂರು ನಗರ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ರಮೇಶ್ ನರಸಯ್ಯ, ಪೀಪಲ್ಸ್ ಪಾರ್ಕ್ ನಗರ ಕೇಂದ್ರ ಗ್ರಂಥಾಲಯದ ಸಹಾಯಕ ಗ್ರಂಥಪಾಲಕಿ ಸೌಮ್ಯ ಎಸ್. ಮತ್ತು ಸಿಬ್ಬಂದಿಗಳು ಹಾಜರಿದ್ದರು.