Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗಾಂಧಿ ಹತ್ಯೆಯ ಸತ್ಯ ನಾಟಕ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ


ಮೈಸೂರು: ಮೈಸೂರಿನ ಕಿರುರಂಗಮ0ದಿರದಲ್ಲಿ ಪ್ರದರ್ಶನಕ್ಕೆ ಆಯೋಜಿಸಿರುವ ಗಾಂಧಿ ಹತ್ಯೆಯ ಸತ್ಯ'' ನಾಟಕವನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿ ಮಾಜಿ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು. ರಂಗಭೂಮಿ ಟ್ರಸ್ಟ್ ಕೊಡಗು ವತಿಯಿಂದ ಅಡ್ಡಂಡ ಕಾರ್ಯಪ್ಪ ಅವರ ರಚನೆ ಮತ್ತು ನಿರ್ದೇಶನದಲ್ಲಿ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ನಾಟಕದಲ್ಲಿ ಮಹಾತ್ಮ ಗಾಂಧೀಜಿ ಅವರ ಕುರಿತು ಅವಹೇಳನಕಾರಿ ಹಾಗೂ ಆಧಾರರಹಿತ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸ್ವಾತಂತ್ರ÷್ಯ ಹೋರಾಟದಲ್ಲಿ ಮಹಾತ್ಮ ಗಾಂಧೀಜಿ ಅವರ ಕೊಡುಗೆಯನ್ನು ಅವಮಾನಿಸುವ ರೀತಿಯಲ್ಲಿ ನಾಟಕದ ಮೂಲಕ ವಿಚಾರಗಳನ್ನು ಬಿಂಬಿಸಲಾಗುತ್ತಿದೆ. ಬ್ರಿಟೀಷರ ಗುಲಾಮ”, ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ'', ಗಾಂಧೀಜಿಯವರಿAದ ನಮಗೆ ಯಾವುದೇ ಸ್ವಾತಂತ್ರ÷್ಯ ದೊರಕಿಲ್ಲ” ಹಾಗೂ ನಕಲಿ ಗಾಂಧಿ'' ಸೇರಿದಂತೆ ಹಲವು ಹೇಳಿಕೆಗಳನ್ನು ನಾಟಕದಲ್ಲಿ ಬಳಸಲಾಗಿದೆ ಎಂದು ದೂರಿದರು. ಅಭಿವ್ಯಕ್ತಿ ಸ್ವಾತಂತ್ರ÷್ಯದ ಹೆಸರಿನಲ್ಲಿ ಇಂತಹ ಪ್ರದರ್ಶನಗಳ ಮೂಲಕ ಸಮಾಜದ ಸ್ವಾಸ್ಥ÷್ಯ ಹಾಗೂ ಸಾಮರಸ್ಯಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ರಾಷ್ಟçದ ಸ್ವಾತಂತ್ರ÷್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧೀಜಿ ಅವರ ಗೌರವಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನು ಖಂಡಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದರು. ಗಾಂಧಿ ಜಯಂತಿಯ ಸಂದರ್ಭದಲ್ಲಿ ಇಂತಹ ನಾಟಕವನ್ನು ಪ್ರದರ್ಶಿಸುವುದು ಸೂಕ್ತವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ಲೋಕೇಶ್ ಪಿಯಾ , ಗಾಂಧಿ ಹತ್ಯೆಯ ಸತ್ಯ” ನಾಟಕದ ಪ್ರದರ್ಶನವನ್ನು ತಕ್ಷಣ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ನಾಟಕದ ರಚನೆ ಮತ್ತು ನಿರ್ದೇಶನ ಮಾಡಿರುವ ಅಡ್ಡಂಡ ಕಾರ್ಯಪ್ಪ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ರಾಷ್ಟçದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು ಮತ್ತು ಅಡ್ಡಾಂಡ ಕಾರ್ಯಪ್ಪ ಅವರ ಪೊಸ್ಟರ್ ಅನ್ನು ಸುಟ್ಟುಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.