Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪಾರಂಪರಿಕ ತಾಣಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ : ಬಿ.ವಿ ಮಂಜುನಾಥ್

ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್  ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ 

ಪಿರಿಯಾಪಟ್ಟಣ : ಪಾರಂಪರಿಕ ತಾಣಗಳ ಸಂರಕ್ಷಣೆ ಹಾಗೂ ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಬೆಟ್ಟದಪುರದ ಎಸ್.ಎಂ.ಎಸ್ ವಿದ್ಯಾ ಸಂಸ್ಥೆಯ ಕಾರ್ಯಧ್ಯಕ್ಷರಾದ ಬಿ ವಿ ಮಂಜುನಾಥ್ ತಿಳಿಸಿದರು.

ತಾಲೂಕಿನ ಬೆಟ್ಟದಪುರದ ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಪುರಾಣ ಪ್ರಸಿದ್ಧ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ಮೇಲೆ ಶ್ರಮದಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ನಮ್ಮ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ನಮ್ಮ ಇತಿಹಾಸ ಪ್ರಸಿದ್ಧ ಸಿಡಿಲು ಮಲ್ಲಿಕಾರ್ಜುನ ಬೆಟ್ಟದ ಮೇಲೆ ಶ್ರಮದಾನ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ಸ್ವಯಂಸೇವಕರು ಸಿಡಿಲು ಮಲ್ಲಿಕಾರ್ಜುನ ದೇವಾಲಯ ಹಾಗೂ ವೀರಭದ್ರೇಶ್ವರ ದೇವಾಲಯದ ಆವರಣ ಸ್ವಚ್ಛಗೊಳಿಸಿದ್ದಾರೆ ಎಲ್ಲರೂ ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಪಾರಂಪರಿಕ ತಾಣಗಳ ಸಂರಕ್ಷಣೆ ಹಾಗೂ ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಸಂಸ್ಥೆಯ ಕಾರ್ಯದರ್ಶಿ ಎ ವಿ ಛಾಯಾ ಮಾತನಾಡಿ ನಮ್ಮ ದೇವಸ್ಥಾನಗಳು ನಮ್ಮ ಆಧ್ಯಾತ್ಮಿಕ ಕೇಂದ್ರಗಳಾಗಿವೆ ಭಕ್ತಾದಿಗಳು ದೇವಸ್ಥಾನಗಳಿಗೆ ಬಂದಂತ ಸಂದರ್ಭದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು ನಮ್ಮ ಸುತ್ತ ಮುತ್ತಲಿನ ಪರಿಸರ ಚೆನ್ನಾಗಿದ್ದರೆ ನಮ್ಮ ಆರೋಗ್ಯವು ಉತ್ತಮವಾಗಿರುತ್ತದೆ  ಈ ನಿಟ್ಟಿನಲ್ಲಿ ಜನರಿಗೆ ಎಲ್ಲಾ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.

ಸಿಡಿಲು ಮಲ್ಲಿಕಾರ್ಜುನ ದೇವಾಲಯ ಹಾಗೂ ವೀರಭದ್ರೇಶ್ವರ ದೇವಾಲಯದ ಆವರಣಗಳಲ್ಲಿದ್ದ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿ ಹಾಗೂ ಮೆಟ್ಟಿಲುಗಳ ಇಕ್ಕಲೆಗಳಲ್ಲಿದ್ದ ಅನುಪಯುಕ್ತ ಸಸ್ಯಗಳನ್ನು ತೆರವುಗೊಳಿಸಿದರು. ಹಾಗೆಯೇ ಬೆಟ್ಟದ ಆವರಣ ಹಾಗೂ ಮೆಟ್ಟಿಲುಗಳಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಕೆಳಗೆ ತಂದು ವಿಲೇವಾರಿ ಮಾಡಲಾಯಿತು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ರಾಜ ಎಸ್.ಕೆ ಕಾರ್ಯಕ್ರಮಾಧಿಕಾರಿಗಳಾದ ಯಶವಂತ ಕುಮಾರ್, ಸತೀಶ್ ಡಿ.ವಿ, ಸಹ ಕಾರ್ಯಕ್ರಮಾಧಿಕಾರಿಗಳಾದ ಕುಬೇರ್, ಬಸವರಾಜು ಉಪನ್ಯಾಸಕರಾದ ಹರ್ಷಿತ, ಶಿವಕುಮಾರ್, ವಸಂತ್, ಸುನಿಲ್, ಪ್ರತಾಪ್, ಅಕ್ಷತಾ ಹಿರಿಯ ಸ್ವಯಂಸೇವಕರು ಹಾಗೂ ಸ್ವಯಂಸೇವಕರು ಹಾಜರಿದ್ದರು.