
ಮೈಸೂರು: ದೇಶದ ಸ್ವಾತಂತ್ರ ಸಂಗ್ರಾಮಕ್ಕೆ ಹೊಸ ದಿಕ್ಸೂಚಿ ನೀಡಿದ ಗಾಂಧೀಜಿಯವರ ತತ್ವಗಳು ಸಾರ್ವಕಾಲಿಕ ಮಾರ್ಗದರ್ಶಿಯಾಗಿವೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಗಾಂಧಿ ಜಯಂತಿ ಪ್ರಯುಕ್ತ ಶುಕ್ರವಾರ ಮೈಸೂರಿನ ಗಾಂಧಿ ವೃತ್ತಕ್ಕೆ ಭೇಟಿ ನೀಡಿದ ಅವರು , ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ಭಕ್ತಿಪೂರ್ವಕ ಗೌರವ ನಮನ ಸಲ್ಲಿಸಿದರು.
ಬಳಿಕ ಮಾತನಾಡಿ ಅಹಿಂಸೆ, ಶಾಂತಿ, ಸತ್ಯ ಹಾಗೂ ಸಾಮಾಜಿಕ ಸಮಾನತೆಯ ಸಿದ್ಧಾಂತಗಳ ಮೂಲಕ ದೇಶದ ಸ್ವಾತಂತ್ರ÷್ಯ ಸಂಗ್ರಾಮಕ್ಕೆ ಹೊಸ ದಿಕ್ಸೂಚಿ ನೀಡಿದ ಗಾಂಧೀಜಿಯವರ ತತ್ವಗಳು ಸಾರ್ವಕಾಲಿಕ ಮಾರ್ಗದರ್ಶಿ ಎಂದು ತಿಳಿಸಿದರು.
ದೇಶ ಕಟ್ಟುವಲ್ಲಿ ಮತ್ತು ಪ್ರತಿಯೊಬ್ಬ ನಾಗರಿಕನಲ್ಲೂ ನೈತಿಕ ಮೌಲ್ಯಗಳನ್ನು ಬೆಳೆಸುವಲ್ಲಿ ಗಾಂಧೀಜಿಯವರ ವಿಚಾರಧಾರೆಗಳು ಇಂದಿಗೂ ಅತ್ಯಂತ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಗೌಡ, ಟಿ.ಎಸ್. ಶ್ರೀವತ್ಸ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಹಿರಿಯ ಮುಖಂಡರು, ಜಿಲ್ಲಾಡಳಿತದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದು, ಮಹಾತ್ಮ ಗಾಂಧೀಜಿಗೆ ಗೌರವ ಸಲ್ಲಿಸಿದರು.