Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ತಾಲ್ಲೂಕು ಪದವೀಧರ ಶಿಕ್ಷಕರ ಸಂಘಕ್ಕೆ  ಪದಾಧಿಕಾರಿಗಳ ಆಯ್ಕೆ

ಮೈಸೂರು : ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ಜಿ.ಪಿ.ಟಿ.)ದ ಮೈಸೂರು ತಾಲೂಕು ಘಟಕಕ್ಕೆ ನಡೆದ ಚುನಾವಣೆಯಲ್ಲಿ ಮೆಲ್ಲಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕ ಹೆಚ್.ಎಸ್. ಸುನಿಲ್ ಕುಮಾರ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನ ಜಾರ್ಯದರ್ಶಿಯಾಗಿ ಹಿನಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂ. ಮಾದೇಶ್, ಖಜಾಂಚಿಯಾಗಿ ನಗರ್ತಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ. ಅಶ್ವಿನಿ ಹಾಗೂ ತಾಲ್ಲೂಕಿನ ವಿವಿಧ ಶಾಲೆಗಳ ಶಿಕ್ಷಕರಾದ ಅಪ್ಸರ್ ಪಾಷ, ಎಚ್.ಎಸ್. ಮಧುರಾಣಿ, ನಾಗಶ್ರೀ, ಆಶಾ ತೇಜಸ್ವಿನಿ, ಆರ್. ಶಿವಲಿಂಗಯ್ಯ ಎಸ್‌.ಪಿ. ನವೀನ್, ಎಸ್.ಸಿ. ಮಂಜುನಾಥ್, ಬಿ.ಎಂ. ಕೀರ್ತಿಕುಮಾರ್ ಎಚ್.ಎಸ್. ಆನಂದ ಅವರು ಕೂಡ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಹಾರೋಹಳ್ಳಿ-ಮೆಲ್ಲಹಳ್ಳಿಯ ಪ್ರೌಢಶಾಲಾ ಶಿಕ್ಷಕ ಗುರುರಾಜ್ ಅವರು ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು.

 ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸಮಾರಂಭದಲ್ಲಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳನ್ನು ಕರ್ನಾಟಕ ರಾಜ್ಯ ಪದವಿ ಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ನಿಂಗೇಗೌಡ ಸನ್ಮಾನಿಸಿ ಅಭಿನಂದಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮೈಸೂರು ಉತ್ತರ ವಲಯದ ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಅಭಿಲಾಷ್ ನಾಯಕ, ಗ್ರಾಮಾಂತರ ವಲಯ ಸಂಘದ ಸದಸ್ಯರಾದ ಮಹೇಶ್ ಶೆಟ್ಟಿ, ಕೆ. ರಂಗಸ್ವಾಮಿ, ಮಹದೇವಸ್ವಾಮಿ, ಭವ್ಯ, ಹಾರೋಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸಂತೋಷ್ ಬಿ. ಶೆಟ್ಟಿ, ಅರವಿಂದ ಬಾಬು ಉಪಸ್ಥಿತರಿದ್ದರು.