ಮಂಗಳೂರು ಗಣೇಶ್ ಬೀಡಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ ಮಾಜಿ ನೌಕರನ ಬಂಧನ
ಮೈಸೂರು: ಮೈಸೂರಿನ ಹುಣಸೂರು ರಸ್ತೆಯ ದೇವರಾಜ ಮೊಹಲ್ಲಾದಲ್ಲಿರುವ ಮಂಗಳೂರು ಗಣೇಶ್ ಬೀಡಿ ವರ್ಕ್್ಸ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ ಮಾಜಿ ನೌಕರನೊಬ್ಬನನ್ನು ನಗರದ ದೇವರಾಜ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಚಾಮರಾಜನಗರದ ಭ್ರಮರಾಂಬ ಬಡಾವಣೆಯಲ್ಲಿರುವ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಪೈ (೫೦) ಬಂಧಿತ ಆರೋಪಿ.
ಈತ ಸೆ.೧೭ರಂದು ಕಚೇರಿಯ ಲ್ಯಾಂಡ್ಲೈನ್ಗೆ ಕರೆ ಮಾಡಿ, ಹಿಂಭಾಗದಲ್ಲಿ ಬಾಂಬ್ ಇರಿಸಿರುವುದಾಗಿ ಮೂರು ಬಾರಿ ಬೆದರಿಕೆ ಹಾಕಿದ್ದ. ಪೊಲೀಸರು ಬಾಂಬ್ ನಿಷ್ಕಿçಯ ದಳ ಹಾಗೂ ಶ್ವಾನದಳದೊಂದಿಗೆ ಶೋಧ ನಡೆಸಿದರೂ ಯಾವುದೇ ಸ್ಫೋಟಕ ಪತ್ತೆಯಾಗಿರಲಿಲ್ಲ. ತನಿಖೆಯಲ್ಲಿ ಆರೋಪಿ ಈ ಹಿಂದೆ ಇದೇ ಸಂಸ್ಥೆಯಲ್ಲಿ ಕೆಲಸ ಮಾಡಿದ್ದ ಹಳೆಯ ನೌಕರ ಎಂಬುದು ತಿಳಿದುಬಂದಿತು. ಕಾರ್ಯಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಂಡಿದ್ದಾರೆ.
--°C
Mysore, IN
Loading...