
ಮೈಸೂರು; ಕೆಲ ಸಂಘಟನೆಗಳು ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆ ಮಾಡುವುದಕ್ಕೆ ತಮ್ಮ ಸ್ಪಷ್ಟ ವಿರೋಧವಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಬುಧವಾರ ನಗರದ ಪತ್ರಕರ್ತರ ಭವನದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿAದ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ಕೇವಲ ಆರಾಧನೆಯಾಗಿ, ಯಾರ ಭಾವನೆಗೂ ಧಕ್ಕೆ ಆಗದ ರೀತಿಯಲ್ಲಿ ಆಚರಿಸಿದರೆ, ನಮ್ಮ ವಿರೋಧವಿಲ್ಲ. ಆದರೆ ಇದರ ಹಿಂದೆ ಸೈದ್ಧಾಂತಿಕ ಹೋರಾಟವಿದ್ದರೆ ಅದನ್ನು ಮಾಡಬಾರದು'' ಎಂದು ಹೇಳಿದರು. ದಸರಾ ಸಂದರ್ಭದಲ್ಲಿ ಕಂಬಳ ಆಯೋಜಿಸಿರುವುದು ಸರಿಯಲ್ಲ, ಕಂಬಳಕ್ಕೆ ಕರಾವಳಿ ಭಾಗದಲ್ಲಿ ಅದರದ್ದೇ ಆದ ಮಹತ್ವವಿದೆ. ಆದರೆ ದಸರಾ ಸಂದರ್ಭದಲ್ಲಿ ಕಂಬಳ ಆಯೋಜನೆಗೆ ಆರಂಭದಿAದಲೂ ನಮ್ಮ ವಿರೋಧವಿದೆ. ಜನಸಾಮಾನ್ಯರೂ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಬೇರೆ ಸಂದರ್ಭದಲ್ಲಿ ಕಂಬಳ ಆಯೋಜಿಸಬಹುದಿತ್ತು” ಎಂದು ಹೇಳಿದರು.
ಮೈಸೂರು-ಕೊಡಗು ಭಾಗದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಯೋಜನೆಗಳನ್ನು ಉತ್ತಮವಾಗಿ ಬಳಸಿಕೊಳ್ಳಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ `ವಿಕಸಿತ ಭಾರತ’ ಪರಿಕಲ್ಪನೆಯಡಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದರು.
ತಮ್ಮ ಸಂಸದೀಯ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿ, “ನಾಳೆಯೇ ಚುನಾವಣೆ ನಡೆದರೂ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊAಡು ಸ್ಪರ್ಧಿಸಲು ಸಿದ್ಧ” ಎಂದು ಹೇಳಿದರು.
ನೂತನ ಪತ್ರಕರ್ತರ ಭವನಕ್ಕೆ ೨೫ ಲಕ್ಷ ರೂ; ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಕರ್ತರ ಭವನ ನಿರ್ಮಾಣಕ್ಕೆ ಸಂಸದರ ಅನುದಾನದಿಂದ ೨೫ ಲಕ್ಷ ನೀಡುವುದಾಗಿ ಯದುವೀರ್ ಘೋಷಿಸಿದರು. ಪ್ರತಿ ವರ್ಷದಂತೆ ಈ ವರ್ಷವೂ ಅರಮನೆಯ ಖಾಸಗಿ ದಸರಾ ಕಾರ್ಯಕ್ರಮಗಳು ಆರಂಭವಾಗಲಿವೆ ಎಂದು ತಿಳಿಸಿದರು. ಈ ವೇಳೆ ಸಂಘದ ಅಧ್ಯಕ್ಷ ಕೆ.ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಪುರ ನಾರಾಯಣ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.