Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪೌರಕಾರ್ಮಿಕರ ಆರೋಗ್ಯದ ರಕ್ಷಣೆ ನಮ್ಮ ಹೊಣೆ; ನಗರ ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ


ಮೈಸೂರು; ನಗರದ ಸ್ವಚ್ಛತೆಗೆ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರ ಆರೋಗ್ಯದ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮೈಸೂರು ನಗರ ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಹೇಳಿದರು.
ಬುಧವಾರ ಮೈಸೂರಿನ ಜೆಎಸ್‌ಎಸ್‌ಆಸ್ಪತ್ರೆಯಲ್ಲಿ ಪೌರಕಾರ್ಮಿಕರಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೌರಕಾರ್ಮಿಕರು ಪ್ರತಿದಿನ ಕಠಿಣ ಪರಿಸ್ಥಿತಿಯಲ್ಲಿ ಕೆಲಸ ಮಾಡುವ್ಯದರಿಂದ, ಅವರ ಆರೋಗ್ಯದ ಕಡೆಗೆ ಗಮನ ಹರಿಸುವುದು ಅತ್ಯಗತ್ಯ.ಆರೋಗ್ಯ ತಪಾಸಣಾ ಶಿಬಿರ ಬಹಳ ಮುಖ್ಯವಾಗಿದ್ದು, ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಹೊಂದಿರಬೇಕು ಎಂದರು.
ಕೆಲವರಿಗೆ ಬಿಪಿ, ಸಕ್ಕರೆ ಕಾಯಿಲೆಇರುವುದುಗೊತ್ತಿರುವುದಿಲ್ಲ, ಇಂತಹ ಆರೋಗ್ಯ ತಪಾಸಣಾ ಶಿಬಿರಗಳಿಂದ ಆರೋಗ್ಯ ಬಗ್ಗೆ ಮಾಹಿತಿ ದೊರೆಯುತ್ತದೆ ಎಂದರು.
ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಪ್ರೊ.ಎಸ್.ಪಿ.ಮಂಜುನಾಥ್ ಮಾತನಾಡಿ, ಬಿಪಿ, ಸಕ್ಕರೆ ಕಾಯಿಲೆ, ಹೃದಯತೊಂದರೆ ಇದ್ದರೆ, ಇಂತಹ ಶಿಬಿರಗಳಿಂದ ಅವರಿಗೆ ಮಾಹಿತಿ ದೊರೆತು, ಆರೊಗ್ಯದ ಬಗ್ಗೆ ಕಾಳಜಿವಹಿಸಲು ಸಹಾಯವಾಗುತ್ತದೆ ಎಂದರು.
ಜೆಎಸ್‌ಎಸ್ ಮಹಾವಿದ್ಯಾಪೀಠದಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರುಮಠ ಮಾತನಾಡಿ, ನಾವು ಆರೋಗ್ಯವಾಗಿದ್ದರೆ ನಗರ ಆರೋಗ್ಯವಾಗಿರುತ್ತದೆ. ನಗರ ಸುಂದರವಾಗಿರುತ್ತದೆ ಸ್ವಚ್ಛತೆಇರುತ್ತದೆ . ಇದರಿಂದ ಜನರು ಸಹ ಆರೋಗ್ಯವಾಗಿರುತ್ತಾರೆ. ಆದ್ದರಿಂದ ಪೌರಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದರು. ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಮೈಸೂರು ನಗರ ಸ್ವಚ್ಛನಗರವಾಗಲಿ ಅದಕ್ಕೆ ನಿಮ್ಮೆಲ್ಲರ ಸಹಕಾರ ಮುಖ್ಯಎಂದರು.
ಶಿಬಿರದಲ್ಲಿ ಸುಮಾರು ೧೨೦ ಪೌರಕಾರ್ಮಿಕರಿಗೆಕಿಡ್ನಿ, ಲಿವರ್, ಥೈರಾಯ್ಡ್ ಪರೀಕ್ಷೆಗಳನ್ನು ಒಳಗೊಂಡAತೆ ಅನೇಕ ರಕ್ತಪರೀಕ್ಷೆಗಳನ್ನು ಮಾಡಲಾಯಿತು. ಜೊತೆಗೆ ಕಣ್ಣು ಪರೀಕ್ಷೆ, ಸ್ತಿçÃರೋಗ ಮತ್ತು ಸಾಮಾನ್ಯ ವೈದ್ಯಕೀಯ ವಿಭಾಗದ ತಪಾಸಣೆಗಳನ್ನು ಮಾಡಲಾಗಿದ್ದು ಅಗತ್ಯವಿರುವವರಿಗೆ ಉಚಿತ ಔಷಧಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜೆಎಸ್‌ಎಸ್‌ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಪಿ.ಮಧು, ಉಪವೈದ್ಯಕೀಯಅಧೀಕ್ಷಕ ಡಾ. ಎಂ.ಸಿ.ಪ್ರಸಾದ್, ಮಹಾನಗರ ಪಾಲಿಕೆ ಮತ್ತು ಜೆಎಸ್‌ಎಸ್‌ಆಸ್ಪತ್ರೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.