Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶಿಕ್ಷಣ ಮತ್ತು ಧಾರ್ಮಿಕ ಕ್ಷೇತ್ರಕ್ಕೆ ರಾಜೇಂದ್ರ ಶ್ರೀಗಳ ಕೊಡುಗೆ ಅನನ್ಯ: ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಪಿರಿಯಾಪಟ್ಟಣ: ಶಿಕ್ಷಣ, ದಾಸೋಹ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಕೊಡುಗೆ ಅಪಾರ ಮತ್ತು ಅವರು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದರು ಎಂದು ಸುತ್ತೂರು ವೀರಸಿಂಹಾಸನ ಮಹಾ ಸಂಸ್ಥಾನದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸ್ಮರಿಸಿದರು.

ತಾಲೂಕಿನ ಬೆಟ್ಟದಪುರ ಶ್ರೀ ಸಲೀಲಾಖ್ಯ ಮಠ ಮತ್ತು ಶ್ರೀ ಕನ್ನಡ ಮಠದ ಆವರಣದಲ್ಲಿ ಮೈಸೂರಿನ -ಚಾಮರಾಜನಗರ ಜಿಲ್ಲಾ ವೀರಶೈವ ಲಿಂಗಾಯತ ಮಠಾಧಿಪತಿಗಳ ಗೋಷ್ಠಿ ವತಿಯಿಂದ ಆಯೋಜಿಸಿದ್ದ ಪರಮಪೂಜ್ಯ ಜಗದ್ಗುರು ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ 111ನೇ ಜಯಂತಿ ಹಾಗೂ ದೀಕ್ಷಾ ಸಂಸ್ಕಾರ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜದ ಎಲ್ಲ ವರ್ಗಗಳ ಜನರ ಬದುಕಿನ ಸುಧಾರಣೆಗೆ ಸ್ವಾಮೀಜಿಯ ಕಾರ್ಯವು ಪೂರಕವಾಗಿದ್ದವು. ಬಡ ಹಾಗೂ ಗ್ರಾಮೀಣ ಭಾಗದ ಮಕ್ಕಳಿಗೂ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ವಿದ್ಯಾಸಂಸ್ಥೆಗಳ ಸ್ಥಾಪನೆ ಮಾಡಿದರು ಎಂದು ಶ್ಲಾಘಿಸಿದರು, ಅಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕ್ಷೇತ್ರದ ಶಾಸಕರಾದ ಕೆ.ವೆಂಕಟೇಶ್ ರವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಒತ್ತು ಹಾಗೂ ಶಿಕ್ಷಣದ ಪ್ರಗತಿಗೆ ಕೈಗೊಂಡ ದಿಟ್ಟ ನಿರ್ಧಾರದಿಂದ ಇಂದು ನಡೆಯುತ್ತಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಮರಾಜನಗರ ಜಿಲ್ಲೆಯ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿರುವುದಕ್ಕೆ ಕಾರಣವಾಗಿದೆ ಎಂದು ವೆಂಕಟೇಶ್ ರವರನ್ನು ಶ್ಲಾಘಿಸಿದರು.

ಶಾಸಕ ಕೆ.ವೆಂಕಟೇಶ್ ಮಾತನಾಡಿ ಸುತ್ತೂರು ಕ್ಷೇತ್ರದಿಂದ ನಾನು ಕೂಡ ಅನೇಕ ಸಹಾಯ ಮತ್ತು ಸಹಕಾರವನ್ನು ಪಡೆದಿದ್ದೇನೆ ಆದ್ದರಿಂದ ದತ್ತಿ ನಿಧಿಯಾಗಿ ಐದು ಲಕ್ಷ ರೂಗಳನ್ನು ಶ್ರೀ ಕ್ಷೇತ್ರಕ್ಕೆ ನೀಡುತ್ತೇನೆ ಕ್ಷೇತ್ರದ ಅಭಿವೃದ್ಧಿಗೆ ಸದಾ ನಿಮ್ಮೊಂದಿಗೆ ಇರುತ್ತೇನೆ ಅಂದು ರಾಜೇಂದ್ರ ಶ್ರೀಗಳು ಸುತ್ತೂರು ಕ್ಷೇತ್ರದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ ಸಾಮಾಜಿಕ ಸೇವೆ ಮಾಡಿದ್ದಾರೆ. ಅನೇಕ ಗಣ್ಯರು ಇಂದು ಶ್ರೀ ಕ್ಷೇತ್ರದ ಮೂಲಕ ಸಾಧನೆಯ ಹಂತ ತಲುಪಿದ್ದಾರೆ ಈ ಹಿನ್ನಲೆಯಲ್ಲಿ ಪ್ರತಿವರ್ಷವೂ ರಾಜೇಂದ್ರ ಸ್ವಾಮಿಗಳವರ ಸವಿ ನೆನಪಿಗಾಗಿ ಸಾಮಾಜಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

 ಸಣ್ಣ ಕೈಗಾರಿಕೆ ಸಚಿವ ವಿಜಯಾನಂದ ಎಸ್. ಕಾಶಪ್ಪನವರ್ ಮಾತನಾಡಿ ಸುತ್ತೂರು ಕ್ಷೇತ್ರದ ಆದೇಶವನ್ನು ಪ್ರತಿ ಮಠವೂ ಕೂಡ ಪಾಲಿಸುತ್ತದೆ ಇವರ ಸಾರ್ವಜನಿಕ ಸೇವೆಗೆ ನಾನು ಸದಾ ಜೊತೆಗಿರುತ್ತೇನೆ ದತ್ತಿನಿದಿಗೆ ಎರಡು ಲಕ್ಷಗಳನ್ನು ನೀಡುತ್ತೇನೆ ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.

 ಗುಂಡ್ಲುಪೇಟೆ ಶಾಸಕ ಹೆಚ್.ಎಂ.ಗಣೇಶ್ ಪ್ರಸಾದ್ ಮಾತನಾಡಿ ಸುತ್ತೂರು ಕ್ಷೇತ್ರದ ಶ್ರೀಗಳ ಸಾಮಾಜಿಕ ಚಿಂತನೆಗಳು ಧಾರ್ಮಿಕ ಕ್ಷೇತ್ರಕ್ಕೆ ಮಾದರಿಯಾಗಿದೆ ಇವರಲ್ಲಿನ ಸಹಾಯ ಮನೋಭಾವವು ಪ್ರಸಿದ್ಧಿಯನ್ನು ಹೊಂದಿದ್ದು, ಸಾಕಷ್ಟು ಜನಸಾಮಾನ್ಯರಿಗೆ ಇವರ ನೆರವು ಇನ್ನು ಅನಿವಾರ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಾಟಾಳ್ ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಗಾವಡಗೆರೆ ಮಠದ ನಟರಾಜ ಸ್ವಾಮೀಜಿ,ಬೆಟ್ಟದಪುರ ಸಲೀಲಾಖ್ಯ ಮಠದ ಶ್ರೀ ಚನ್ನಬಸವ ದೇಶಿಕೇಂದ್ರ ಸ್ವಾಮೀಜಿ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಮಾಜಿ ಶಾಸಕ ಬಸವರಾಜು, ಕೊಡಗು ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಹೆಚ್.ಪಿ.ಶಿವಪ್ಪ,ಮೈಸೂರು ನಗರ ಘಟಕ ಪ್ರಧಾನ ಕಾರ್ಯದರ್ಶಿ ಪ್ರತಿಧ್ವನಿ ಪ್ರಸಾದ್, ಪಿರಿಯಾಪಟ್ಟಣ ತಾಲ್ಲೂಕು ವೀರಶೈವ ಸಮಾಜದ ಅಧ್ಯಕ್ಷ ಹಿಟ್ನಳ್ಳಿ ಪರಮೇಶ್, ಯುವ ಘಟಕದ ಅಧ್ಯಕ್ಷ ಅಭಿ, ಮಹಿಳಾ ಘಟಕದ ಅಧ್ಯಕ್ಷೆ ಶಿಲ್ಪಾ, ಬೆಟ್ಟದಪುರ ವೀರಶೈವ ಸಮಾಜದ ಅಧ್ಯಕ್ಷ ಶಿವದೇವಪ್ಪ, ಅರಕಲಗೂಡು ತಾಲ್ಲೂಕು ವೀರಶೈವ ಸಮಾಜದ ಅಧ್ಯಕ್ಷ ಬೆಮ್ಮತ್ತಿ ಸುರೇಶ್, ಮುಖಂಡರಾದ ಎಂ.ಬಿ. ಶಿವಕುಮಾರ್, ಶಿವದೇವ್, ಲಾಯರ್ ಮಂಜುನಾಥ್ ಸೇರಿದಂತೆ ನಾಡಿನ ವಿವಿಧ ಮಠಾಧೀಶರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.