
ಮೈಸೂರು; ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಹಾಗೂ ಬಜಾಜ್ ಆಟೋ ಫೌಂಡೇಶನ್ನಿAದ ನಿರುದ್ಯೋಗಿ ಯುವಜನರಿಗಾಗಿ ಉಚಿತ ೩-ತಿಂಗಳ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಆರಂಭಿಸಲಾಗಿದೆ ಎಂದು ಜೆಎಸ್ಎಸ್ ಮಹಾವಿದ್ಯಾಪೀಠದ ತಾಂತ್ರಿಕ ಶಿಕ್ಷಣ ವಿಭಾಗದ ಉಪ ನಿರ್ದೇಶಕ ಬಿ. ಇಳಂಗೋವನ್ ತಿಳಿಸಿದರು.
ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ , ಪುಣೆಯ ಬಜಾಜ್ ಆಟೋ ಫೌಂಡೇಶನ್ ಸಹಯೋಗದೊಂದಿಗೆ ಮೈಸೂರಿನ ಜೆಎಸ್ಎಸ್ ತಾಂತ್ರಿಕ ಸಂಸ್ಥೆಗಳ ಆವರಣದಲ್ಲಿ ಸರ್ವಿಸ್ ಟೆಕ್ನಿಷಿಯನ್ ಎಕ್ಸಲೆನ್ಸ್ ಪ್ರೋಗ್ರಾಂ ಕೌಶಲ್ಯ ತರಬೇತಿ ಕೇಂದ್ರವನ್ನು ಆರಂಭಿಸಿದೆ.
ಈ ತರಬೇತಿ ಕಾರ್ಯಕ್ರಮವು ಬಜಾಜ್ ಆಟೋ ಫೌಂಡೇಶನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಉಪಕ್ರಮದಡಿ ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುತ್ತಿದೆ. ಮೂರು ತಿಂಗಳ ಅವಧಿಯ ಈ ಕಾರ್ಯಕ್ರಮದಲ್ಲಿ ಪ್ರಾಯೋಗಿಕ ಕೌಶಲ್ಯ ತರಬೇತಿ ಹಾಗೂ ಉದ್ಯೋಗದ ಸ್ಥಳದಲ್ಲಿನ ತರಬೇತಿ ಒಳಗೊಂಡಿದ್ದು, ನಿರುದ್ಯೋಗಿ ಯುವಕ-ಯುವತಿಯರಿಗೆ ದ್ವಿಚಕ್ರ ವಾಹನಗಳ ದುರಸ್ತಿ ಮತ್ತು ನಿರ್ವಹಣೆಯಲ್ಲಿ ಉದ್ಯಮಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಒದಗಿಸುವ ಉದ್ದೇಶ ಹೊಂದಿದೆ ಎಂದು ಹೇಳಿದರು. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಅಭ್ಯರ್ಥಿಗಳಿಗೆ ಮೀಸಲಾದ ಉದ್ಯೋಗ ನಿಯೋಜನೆ ನೆರವು ಒದಗಿಸಲಾಗುವುದು. ಸೇವಾ ಕೇಂದ್ರಗಳು, ಅಧಿಕೃತ ಡೀಲರ್ಶಿಪ್ಗಳು, ಶೋ ರೂಮ್ಗಳು ಹಾಗೂ ವಾಹನ ಉದ್ಯಮಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯಲು ತರಬೇತಿದಾರರಿಗೆ ಅಗತ್ಯ ಮಾರ್ಗದರ್ಶನ ಮತ್ತು ನೆರವು ನೀಡಲಾಗುವುದು, ಹೆಚ್ಚಿನ ಮಾಹಿತಿಗೆ ಮೊಬೈಲ್ ನಂ ೯೯೦೧೬೨೮೬೩೯ನ್ನು ಸಂಪರ್ಕಿಸುವAತೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಸಹ ಕುಲಸಚಿವ ಡಾ. ಮಹೇಶನ್, ಕೌಶಲ್ಯ ಅಭಿವೃದ್ಧಿ ಅಧಿಕಾರಿ ಡಾ. ಮಂಜುನಾಥ ಬಿ. ಉಪಸ್ಥಿತರಿದ್ದರು.