
ಮೈಸೂರು: ಈ ಬಾರಿ ಅದ್ಧೂರಿಯಾಗಿ ಜರುಗಲಿರುವ ನಾಡ ಹಬ್ಬ ಮೈಸೂರು ದಸರಾ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಆರು ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದರು.
ಶುಕ್ರವಾರ ನಗರದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ನಾಡ ಹಬ್ಬ ಮೈಸೂರು ದಸರಾ ಬಂದೋ ಬಸ್ತ್ ಕೆಲಸಕ್ಕಾಗಿ 5,161 ಸಿವಿಲ್ ಹಾಗೂ ಸಂಚಾರಿ ಪೊಲೀಸರು, 33 ಕೆಎಸ್ಆರ್ಪಿ ತುಕಡಿ, 25 ಡಿಎಆರ್ ತುಕಡಿ, 1500 ಹೋಮ್ ಗಾರ್ಡ್ಗಳು ಸೇರಿದಂತೆ ಆರು ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಸಾರ್ವಜನಿಕರ ಮೇಲೆ 35,794 ಸಿಸಿ ಕ್ಯಾಮರಾ ಕಣ್ಗಾವಲು ಎಂದು ಮಾಹಿತಿ ನೀಡಿದರು.ದಸರಾದ 11 ದಿನ ಒಟ್ಟು 18 ಪೊಲೀಸ್ ಸಹಾಯ ಕೇಂದ್ರಗಳ ಸ್ಥಾಪನೆ ಮಾಡಲಾಗಿದ್ದು, ತುರ್ತು ಸಂದರ್ಭಗಳಲ್ಲಿ 112 ಸಹಾಯವಾಣಿ ಬಳಕೆ ಮಾಡಿಕೊಳ್ಳಬಹುದಾಗಿದೆ. ಇನ್ನು ಅರಮನೆ ಸುತ್ತಮುತ್ತ ಪ್ರಮುಖ ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಇರಲಿದ್ದು ಎಂದು ತಿಳಿಸಿದರು. ಶಿಥಿಲಗೊಂಡ ಕಟ್ಟಡ, ಮರಗಳ ಮೇಲೆ ಕುಳಿತು ಜಂಬೂಸವಾರಿ ವೀಕ್ಷಣೆಗೆ ನಿಷೇಧ; ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಕಣ್ತುಂಬಿಕೊಳ್ಳಲು ಜನರು ಕಾಯುತ್ತಿದ್ದಾರೆ. ಆದರೆ ಶಿಥಿಲಗೊಂಡಿರುವ ಕಟ್ಟಡ ಮತ್ತು ಮರಗಳ ಮೇಲೆ ಕುಳಿತು ಜಂಬೂಸವಾರಿ ವೀಕ್ಷಣೆಗೆ ನಿಷೇಧಿಸಲಾಗಿದೆ. ಈಗಾಗಲೇ 92 ಹಳೆಯ ಕಟ್ಟಡಗಳನ್ನು ಗುರುತು ಮಾಡಲಾಗಿದೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.