Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅ.12ರಂದು ವಿಶೇಷ ‘ಸ್ವಾತಿ’ ಪೂಜೆ

ಮೈಸೂರು; ನಗರದ ಕಾಳಿದಾಸ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷಿö್ಮÃನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಅ.12ರಂದು ಸೋಮವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕ್ಕೊಳ್ಳಲಾಗಿದೆ. ಅಂದು ಬೆಳಿಗ್ಗೆ 8.30ಕ್ಕೆ ಸಂಕಲ್ಪ, 9.30ಕ್ಕೆ ಅಭಿಷೇಕ, 11ಕ್ಕೆ ಅಲಂಕಾರ, 12ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 1ಕ್ಕೆ ಶಾತ್ತುಮೊರೈ, 1 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದೆ. ಸಂಜೆ 8ಕ್ಕೆ ಪ್ರಾಕಾರೋತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ತಿಳಿಸಿದ್ದಾರೆ….

Read More

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಟಿ. ರಘುಮೂರ್ತಿ ಭೇಟಿ

ಚಾಮರಾಜನಗರ: ನಗರಕ್ಕೆ ಮೊದಲ ಬಾರಿಗೆ ಆಗಮಿಸಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರಾದ ಟಿ. ರಘುಮೂರ್ತಿ ಆಗಮಿಸಿದಾಗ ಅವರನ್ನು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಿ ಬಂಗಾರು ಅಭಿನಂದಿಸಿದರು. ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ರಾಮಚಂದ್ರ. ಸೋಮನಾಯಕ. ಸುರೇಶ್. ಮೈಸೂರ್ ಹಾಗೂ ಚಾಮರಾಜನಗರ ಜಿಲ್ಲೆಯ ಎಲ್ಲಾ ನಾಯಕ ಮುಖಂಡರು ಹಾಜರಿದ್ದರು

Read More

ಅವೈಜ್ಞಾನಿಕ ಕಾಮಗಾರಿಯಿಂದ ಅಪಘಾತದಲ್ಲಿ ನೊಂದವರಿಗೆ ಪರಿಹಾರ ವಿತರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ನಂಜನಗೂಡು; ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿರುವ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಅವೈಜ್ಞಾನಿಕ ಕಾಮಗಾರಿಯಿಂದ ಅಪಘಾತದಲ್ಲಿ ನೊಂದವರಿಗೆ ಪರಿಹಾರ ವಿತರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದರು.   ತಾಲೂಕಿನ ಹೊಸಹಳ್ಳಿ ಬಳಿ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಮೇಲ್ ಸೇತುವೆ ಬಳಿ ಜಮಾವಣೆಗೊಂಡ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು.    ಕರ್ನಾಟಕ…

Read More

ನಗರದ ವರ್ತುಲ ರಸ್ತೆಯ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಕಾರ್ಯಾಚರಣೆ

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಪ್ರವಾಸಿಗರ ಸ್ನೇಹಿ ನಗರವನ್ನಾಗಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ಹಾಗೂ ಸುತ್ತಮುತ್ತಲಿನ ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ನಗರದ ವರ್ತುಲ ರಸ್ತೆಯಾದ್ಯಂತ ಬೃಹತ್ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು.ಜಿಲ್ಲಾ ಉಸ್ತುವಾರಿ ಸಚಿವರು ದಸರಾ ಮಹೋತ್ಸವದ ಪೂರ್ವಸಿದ್ಧತೆಗಳ ಪರಿಶೀಲನೆ ಸಂದರ್ಭದಲ್ಲಿ ನೀಡಿದ ನಿರ್ದೇಶನಗಳನ್ವಯ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಸವಿತಾ ಎಂ.ಕೆ. ಅವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ 6.30 ಗಂಟೆಯಿAದ…

Read More

ವೃದ್ಧೆ ಒಬ್ಬರ ಎರಡು ಎಕರೆ ಜಮೀನನ್ನು ಅಕ್ರಮವಾಗಿ ಖಾತೆ ಮಾಡಿಸಿಕೊಂಡು ಬಡ ಕುಟುಂಬಕ್ಕೆ ಅನ್ಯಾಯ

ನ್ಯಾಯಕ್ಕಾಗಿ ತಾಲೂಕು ಮಾಜಿ ಸೈನಿಕರ ಸಂಘ ಆಗ್ರಹ ಪಿರಿಯಾಪಟ್ಟಣ: 84 ವರ್ಷದ ಕೇರಳ ಮೂಲದ ಕುಟುಂಬ ಅನ್ಯಾಯ ಎಸಗುತ್ತಿದ್ದು ಕೂಡಲೇ ತಾಲೂಕು ಆಡಳಿತ ಈ ಬಗ್ಗೆ ಕ್ರಮ ಕೈಗೊಂಡು ಅನ್ಯಾಯ ಕೊಳಗಾದ ಕುಟುಂಬಕ್ಕೆ ನ್ಯಾಯ ಕೊಡಿಸಿ ಕೊಡಬೇಕೆಂದು ತಾಲೂಕು ಮಾಜಿ ಸೈನಿಕರ ಸಂಘದ ಮಾಜಿ ಅಧ್ಯಕ್ಷ ಜೆ ಸಿ ವಿಕ್ರಮ್ ರಾಜ್ ತಿಳಿಸಿದರು.  ತಾಲೂಕು ಪತ್ರಕರ್ತರ ಸಂಘದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾತನಾಡಿದ ಅವರು ಪಿರಿಯಾಪಟ್ಟಣ ತಾಲೂಕಿನ ಅಳಲೂರು ಗ್ರಾಮದ ಸರ್ವೆ ನಂಬರ್ 49ರ ಸರ್ಕಾರಿ ದರಕಾಸು…

Read More

ಪಿ. ಪ್ರಶಾಂತ್ ಗೌಡ ಪರವಾಗಿ ಪಿರಿಯಾಪಟ್ಟಣದಲ್ಲಿ ಮತಯಾಚನೆ 

ಪಿರಿಯಾಪಟ್ಟಣ : ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನದ ಅಭ್ಯರ್ಥಿ ನಗರ ಪಾಲಿಕೆ ಮಾಜಿ ಸದಸ್ಯ ಪಿ ಪ್ರಶಾಂತ್ ಗೌಡ ರವರ ಪರವಾಗಿ ಪಿರಿಯಾಪಟ್ಟಣದ ಬಸಲಾಪುರ, ಹುಣಸೆಕುಪ್ಪೆ, ಕೆಲ್ಲೂರು ಸೇರಿದಂತೆ ಗ್ರಾಮಗಳಲ್ಲಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಿರಿಯಾಪಟ್ಟಣ ತಾಲೋಕು ಒಕ್ಕಲಿಗರ ಸಂಘದ ಅಧ್ಯಕ್ಷ ಆನಂದ್ ಬಸಲಾಪುರ, ಉಪಾಧ್ಯಕ್ಷ ಹುಣಸೆಕುಪ್ಪೆ ಚಂದ್ರೆಗೌಡ, ಕಾರ್ಯದರ್ಶಿ ಮೋಹನ್, ಮನು, ಮುತ್ತುರಾಜು, ಲವೇಂದ್ರ  ಸೇರಿದಂತೆ ಇತರರು ಇದ್ದರು

Read More

ಆಚಾರ್ಯ ಮಧ್ವರ ತತ್ವಜ್ಞಾನ ಲೋಕದ ಎಲ್ಲ ವಿಚಾರಗಳನ್ನು ಒಳಗೊಂಡಿದೆ; ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ

ಮೈಸೂರು : ಮಾಧ್ವ ತತ್ವಜ್ಞಾನವು ಜೀವನದ ಹಲವು ಸಮಸ್ಯೆ ಮತ್ತು ಸವಾಲುಗಳಿಗೆ ಸಮರ್ಥವಾದಪರಿಹಾರಗಳನ್ನು ಸೂಚಿಸಿದ್ದು, ಇದು ಬಹು ಮಾಧ್ಯಮಗಳ ಮೂಲಕ ಹೆಚ್ಚಿನ ಜನರನ್ನು ತಲುಪಬೇಕಿದೆ ಎಂದು ಜಗದ್ಗುರು ಶ್ರೀಮನ್ ಮಧ್ವಾಚಾರ್ಯರ ಮೂಲ ಮಹಾಸಂಸ್ಥಾನ ಸೋಸಲೆ ವ್ಯಾಸರಾಜ ಮಠದ ಪೀಠಾಧಿಪತಿ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು.ನಗರದ ಕೃಷ್ಣಮೂರ್ತಿಪುರಂನ ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಶ್ರೀ ವ್ಯಾಸತೀರ್ಥ ಸಂಶೋಧನಾ ಪ್ರತಿಷ್ಠಾನ ಹಮ್ಮಿಕೊಂಡಿದ್ದ ` ಶ್ರೀ ವಾದಿರಾಜ ತೀರ್ಥ ವಿರಚಿತ ಪಂಜೀಕರಣ’ ಆಟದ ವಿಶೇಷ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅನುಗ್ರಹ ಸಂದೇಶ…

Read More

ವಿಷ್ಣುವರ್ಧನ್ ಜನ್ಮದಿನದ ಪ್ರಯುಕ್ತ ಸಾಧಕರಿಗೆ ವಿಷ್ಣುವರ್ಧನ್ ಪ್ರಶಸ್ತಿ ಪ್ರದಾನ

ಮೈಸೂರು: ಪಾತಿ ಫೌಂಡೇಶನ್ ವತಿಯಿಂದ ಚಿತ್ರ ನಟ ಸಾಹಸಸಿಂಹ ಡಾ, ವಿಷ್ಣುವರ್ಧನ್ ರವರ 76ನೇ ಜನ್ಮದಿನ ಅಂಗವಾಗಿ ಕುವೆಂಪು ನಗರದ ರಮಣಶ್ರೀ ಜ್ಞಾನ ಕೇಂದ್ರದ ಆವರಣದಲ್ಲಿ ವಿಷ್ಣುವರ್ಧನ್ ಅಭಿನಯಿಸಿರುವ ಚಿತ್ರಗಳ ಸಂಗೀತ ಸಂಜೆ ಹಾಗೂ ವಿವಿಧ ಕ್ಷೇತ್ರದ ಸಾಧನೆಗೈದ ಸಾಧಕರಿಗೆ ವಿಷ್ಣುವರ್ಧನ್ ಪ್ರಶಸ್ತಿ ನೀಡಿ ಗೌರವಿಸಲಾಯಿತುವಿಜಯಲಕ್ಷಿ÷್ಮ ಅಯ್ಯಂಗಾರ್ (ಸಾಮಾಜಿಕ ಕ್ಷೇತ್ರ), ಅಲೋಕ್ ಆರ್ ಜೈನ್ (ಕ್ರೀಡಾ ಕ್ಷೇತ್ರ), ಮಧುಸೂದನ್ (ಧಾರ್ಮಿಕ ಕ್ಷೇತ್ರ), ಕುಮಾರ ಆರಾಧ್ಯ (ಸಹಕಾರಿ ಕ್ಷೇತ್ರ), ಕುಮಾರ್ (ಸಾಮಾಜಿಕ ಕ್ಷೇತ್ರ), ಗಗನ್ ಗೌಡ (ಸಂಘಟನಾ ಕ್ಷೇತ್ರ),…

Read More

ಮೈಸೂರು ದಸರಾ ಉದ್ಘಾಟಿಸಲಿರುವ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಸ್ವಾಮಿಗಳು ಮೈಸೂರಿಗೆ ಆಗಮನ

ಮೈಸೂರು: ಐತಿಹಾಸಿಕ, ಜಗತ್ಪçಸಿದ್ಧ ಮೈಸೂರು ದಸರೆಯನ್ನು ಈ ಬಾರಿ ಕೊಪ್ಪಳದ ಸಂಸ್ಥಾನ ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಅಕ್ಟೋಬರ್ 11 ರಂದು ನಾಡದೇವಿ ಶ್ರೀ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಲಿದ್ದಾರೆ. ಇದಕ್ಕಾಗಿ ಶ್ರೀಗಳು ಶನಿವಾರ ಮೈಸ್ರರಿಗೆ ಆಗಮಿಸಿ ಸುತ್ತೂರು ಶ್ರೀಕ್ಷೇತ್ರಕ್ಕೆ ಭೇಟಿ ನೀಡಿದರು. ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ.ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳ ಪರಿಚಯ; ಕೊಪ್ಪಳ ಗವಿಮಠದ ಪೀಠಾಧಿಪತಿಯಾಗಿ ಲಕ್ಷಾಂತರ ಭಕ್ತರ ಹೃದಯದಲ್ಲಿ ಸ್ಥಾನ ಪಡೆದಿರುವ ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳು ಕಲಬುರಗಿ ಜಿಲ್ಲೆಯ ಹಾಗರಗುಂಡಗಿ…

Read More

ಅಂಬಾ ವಿಲಾಸ ಅರಮನೆಯಲ್ಲಿ ರಾಜಮನೆತನದವರ ಖಾಸಗಿ ದರ್ಬಾರ್ ಆರಂಭಕ್ಕೆ ಸಿದ್ಧತೆ

ಮೈಸೂರು: ವಿಶ್ವ ಪ್ರಸಿದ್ಧ ಮೈಸೂರಿನ ಅಂಬಾ ವಿಲಾಸ ಅರಮನೆಯಲ್ಲಿ ಅ.11 ರಿಂದ ರಾಜ ವಂಶಸ್ಥರು ನವರಾತ್ರಿ ಆಚರಣೆ, ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಆ ಮೂಲಕ ಖಾಸಗಿಯಾಗಿ ದಸರಾ ಆಚರಣೆ ಮಾಡಲಿದ್ದಾರೆ.ಚಾಮುಂಡಿಬೆಟ್ಟದ ಸಂಪ್ರದಾಯದAತೆ ರಾಜ ಮನೆತನದವರು ಧಾರ್ಮಿಕ ಕೈಂಕರ್ಯಗಳನ್ನು ನಡೆಸಲಿದ್ದಾರೆ.ಅಂಬಾವಿಲಾಸ ಅರಮನೆಯ ದರ್ಬಾರ್ ಹಾಲ್‌ನಲ್ಲಿ ಅಕ್ಟೋಬರ್ 5ರಂದು ಜೋಡಣೆಯಾದ ರತ್ನಖಚಿತ ಸಿಂಹಾಸನಕ್ಕೆ ಅಕ್ಟೋಬರ್ 11ರ ಬೆಳಗ್ಗೆ 6 ಗಂಟೆಯಿAದ 7:12 ನಿಮಿಷದ ನಡುವೆ ಸಿಂಹ ಜೋಡಣೆ ಮಾಡಲಾಗುತ್ತದೆ. ನಂತರ ರತ್ನಖಚಿತ ಪೀಠವು ಸಿಂಹಾಸನ ಸಿದ್ಧವಾಗುತ್ತದೆ. ಬಳಿಕ ರಾಜವಂಶಸ್ಥರಾದ ಸಂಸದ…

Read More