Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅವೈಜ್ಞಾನಿಕ ಕಾಮಗಾರಿಯಿಂದ ಅಪಘಾತದಲ್ಲಿ ನೊಂದವರಿಗೆ ಪರಿಹಾರ ವಿತರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ನಂಜನಗೂಡು; ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿರುವ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಅವೈಜ್ಞಾನಿಕ ಕಾಮಗಾರಿಯಿಂದ ಅಪಘಾತದಲ್ಲಿ ನೊಂದವರಿಗೆ ಪರಿಹಾರ ವಿತರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದರು. 

 ತಾಲೂಕಿನ ಹೊಸಹಳ್ಳಿ ಬಳಿ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಮೇಲ್ ಸೇತುವೆ ಬಳಿ ಜಮಾವಣೆಗೊಂಡ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು. 

  ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಧ್ಯಕ್ಷ ಟಿ.ಆರ್.ವಿದ್ಯಾಸಾಗರ್ ಮಾತನಾಡಿ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರ ಬದಲಿ ರಸ್ತೆಗೆ ಡಾಬರೀಕರಣ ಮಾಡಬೇಕು ಎಂಬ ನಿಯಮವಿದ್ದರೂ ಸಹ ಬದಲಿ ರಸ್ತೆಯನ್ನು ನಿರ್ಮಿಸದೆ ಧೂಳು, ರಸ್ತೆ ಕಾಮಗಾರಿ ನಡೆಯುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿದೆ, ಹಳ್ಳಕೊಳ್ಳಗಳಿಂದ ಕೂಡಿದ ರಸ್ತೆಯಿಂದ ಸುಮಾರು 15 ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದೆ, ಇದಕ್ಕೆ ಗುತ್ತಿಗೆದಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೇ ಹೊಣೆಗಾರರಾಗಿದ್ದಾರೆ. ಜೊತೆಗೆ ರಸ್ತೆಗೆ ನೀರು ಹಾಕಲು ಅಕ್ಕಪಕ್ಕದ ಜಮೀನಿನ ನೇರನೇ ದುರ್ಬಳಕೆ ಮಾಡಿಕೊಂಡಿದ್ದಾರೆ, ಅಲ್ಲದೆ ರಸ್ತೆ ಮೇಲ್ ಸೇತುವೆಗೆ ನಾಲೆಯ ಮಣ್ಣನ್ನು ಕದ್ದು ದುರ್ಬಳಕೆ ಮಾಡಿಕೊಂಡಿದ್ದಾರೆ, ಆದ್ದರಿಂದ ಬೇಜವಾರಿ ಗುತ್ತಿಗೆದಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ರಸ್ತೆಯ ಅಪಘಾತವಾಗಿ ಮರಣ ಹೊಂದಿರುವವರ ವ್ಯಕ್ತಿಗಳ ಕುಟುಂಬಕ್ಕೆ, 1 ಕೋಟಿ, ಅಂಗವಿಕಲತೆ ಆಗಿರುವ ವ್ಯಕ್ತಿಗಳ ಕುಟುಂಬಕ್ಕೆ 50 ಲಕ್ಷ ಪರಿಹಾರ ಕೊಡಿಸಿ ಕೊಡಬೇಕು, ಕೂಡಲೇ ಬದಲಿ ರಸ್ತೆಗೆ ಡಾಬರೀಕರಣ ಮಾಡಬೇಕು ಎಂದು ಆಗ್ರಹಿಸಿದರು. 

 ರೈತ ಸಂಘದ ಜಿಲ್ಲಾಧ್ಯಕ್ಷ ಸತೀಶ್ ರಾವ್ ಮಾತನಾಡಿ ನಾಡ ಹಬ್ಬ ದಸರಾಕ್ಕೆ ಹೊರ ರಾಜ್ಯದಿಂದ ಬರುವ ಪ್ರವಾಸಿಗರು ಈ ರಸ್ತೆಯಲ್ಲಿ ಆಗಮಿಸುವ ಕಾರಣ ಬದಲಿ ರಸ್ತೆಗೆ ಡಾಂಬರೀಕರಣ ತಕ್ಷಣದಲ್ಲಿ ಆಗಬೇಕು, ಇಲ್ಲವಾದಲ್ಲಿ ಸ್ಥಳೀಯರು ಮತ್ತು ಗ್ರಾಮಸ್ಥರ ಜೊತೆಗೂಡಿ ರಸ್ತೆಯನ್ನೇ ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. 

  ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ಮಹದೇವ ನಾಯಕ, ಕಾರ್ಯದರ್ಶಿ ದೇವರಾಜು, ಶಿವಣ್ಣ, ವರದರಾಜು, ಸಿದ್ದಪ್ಪಾಜಿ, ತಿಮ್ಮನಾಯಕ, ಶ್ವೇತಾ, ಶಂಕರನಾಯಕ, ಸಿದ್ದು, ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.