Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಗರದ ವರ್ತುಲ ರಸ್ತೆಯ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಕಾರ್ಯಾಚರಣೆ


ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಪ್ರವಾಸಿಗರ ಸ್ನೇಹಿ ನಗರವನ್ನಾಗಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ಹಾಗೂ ಸುತ್ತಮುತ್ತಲಿನ ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ನಗರದ ವರ್ತುಲ ರಸ್ತೆಯಾದ್ಯಂತ ಬೃಹತ್ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವರು ದಸರಾ ಮಹೋತ್ಸವದ ಪೂರ್ವಸಿದ್ಧತೆಗಳ ಪರಿಶೀಲನೆ ಸಂದರ್ಭದಲ್ಲಿ ನೀಡಿದ ನಿರ್ದೇಶನಗಳನ್ವಯ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಸವಿತಾ ಎಂ.ಕೆ. ಅವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ 6.30 ಗಂಟೆಯಿAದ ವರ್ತುಲ ರಸ್ತೆಯ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಕಾರ್ಯಾಚರಣೆ ಕೈಗೊಳ್ಳಲಾಯಿತು.
ಈ ಅಭಿಯಾನದಲ್ಲಿ ಸಿಂಧು ಅಧೀಕ್ಷಕ ಅಭಿಯಂತರರು, ನರಸಿಂಹ ಮೂರ್ತಿ, ಆಯುಕ್ತರು, ಹೂಟಗಳ್ಳಿ ನಗರ ಸಭೆ, ಮೃತ್ಯಂಜಯ ಕಾರ್ಯಪಾಲಕ ಅಭಿಯಂತರರು ಮೈಸೂರು ಮಹಾನಗರ ಪಾಲಿಕೆಯ ಎಲ್ಲಾ ವಲಯ ಆಯುಕ್ತರು, ಅಭಿವೃದ್ಧಿ ಅಧಿಕಾರಿಗಳು,ಸುತ್ತಮುತ್ತಲಿನ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿ, ವರ್ತುಲ ರಸ್ತೆಯ ಬದಿಗಳಲ್ಲಿ ಸಂಗ್ರಹವಾಗಿದ್ದ ಕಸ, ಪ್ಲಾಸ್ಟಿಕ್ ತ್ಯಾಜ್ಯ, ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯ ಹಾಗೂ ಇತರೆ ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸುವ ಕಾರ್ಯವನ್ನು ಕೈಗೊಂಡರು.
ಸ್ವಚ್ಛತಾ ಕಾರ್ಯಾಚರಣೆಯ ಸಂದರ್ಭದಲ್ಲಿ ಆಯುಕ್ತರಾದ ಸವಿತಾ ಎಂ.ಕೆ. ಅವರು ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಸ್ವಚ್ಛತಾ ಕಾರ್ಯಗಳ ಪರಿಶೀಲನೆ ನಡೆಸಿದರು. ವರ್ತುಲ ರಸ್ತೆಯ ಬದಿಗಳಲ್ಲಿ ಅನಧಿಕೃತವಾಗಿ ತ್ಯಾಜ್ಯ ಸುರಿಯುವುದನ್ನು ತಡೆಗಟ್ಟಲು, ಸ್ವಚ್ಛತೆಯನ್ನು ನಿರಂತರವಾಗಿ ಕಾಪಾಡಿಕೊಳ್ಳಲು ಹಾಗೂ ಸಂಬAಧಪಟ್ಟ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೂಪ ಬಿ.ಆರ್., ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ಅಧೀಕ್ಷಕ ಅಭಿಯಂತರ ಸಿಂಧು, ಹೂಟಗಳ್ಳಿ ನಗರಸಭೆಯ ಆಯುಕ್ತ ನರಸಿಂಹಮೂರ್ತಿ, ಮೈಸೂರು ಮಹಾನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರಾದ (ಪರಿಸರ) ಮೃತ್ಯುಂಜಯ ಕೆ.ಎಸ್., ವಲಯ 5ರ ಸಹಾಯಕ ಆಯುಕ್ತ ಮಂಜುನಾಥ ರೆಡ್ಡಿ, ವಲಯ-8ರ ಸಹಾಯಕ ಆಯುಕ್ತ ಸೋಮಶೇಖರ್, ಸುತ್ತಮುತ್ತಲಿನ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು, ಮೇಲ್ವಿಚಾರಕರು ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು.