
ಚಾಮುಂಡೇಶ್ವರಿಗೆ ಅಗ್ರ ಪೂಜೆಯನ್ನು ನೆರವೇರಿಸಲಿರುವ ಕೊಪ್ಪಳದ ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳಿಂದ ದಸರಾಗೆ ಚಾಲನೆ
*ಫಲಪುಷ್ಪ ಮೇಳ, ವಸ್ತ ಪ್ರದರ್ಶನ, ಪುಸ್ತಕ ಮೇಳ, ಆಹಾರ ಮೇಳ, ವಿದ್ಯುತ್ ದೀಪಾಲಂಕಾರ, ಕ್ರೀಡಾಕೂಟ ಉದ್ಘಾಟನೆ
ಮೈಸೂರು: ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಾದ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಭಾನುವಾರ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಗುತ್ತದೆ. ಇದಕ್ಕಾಗಿ ಅರಮನೆ ನಗರಿ ಮೈಸೂರಿನಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಅ.11 ರಂದು ಝಗಮಗಿಸುವ ರಂಗು, ರಂಗಿನ ಹೊಸ ಲೋಕವೊಂದು ತೆರೆದುಕೊಳ್ಳಲಿದೆ.
ಚಾಮುಂಡಿಬೆಟ್ಟದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಿರ್ಮಿಸಲಾಗಿರುವ ವೇದಿಕೆಯ ಪಕ್ಕದಲ್ಲಿ ಬಗೆ, ಬಗೆಯ ಪುಷ್ಪಗಳಿಂದ ಅಲಂಕೃತರಾಗಿ, ರಥದಲ್ಲಿ ವಿರಾಜಮಾನರಾಗಿರುವ ಬೆಟ್ಟದ ತಾಯಿ ಚಾಮುಂಡೇಶ್ವರಿಗೆ ಬೆಳಗ್ಗೆ 11.50ರಿಂದ ಮಧ್ಯಾಹ್ನ 12.13ರವರೆಗೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ಕೊಪ್ಪಳದ ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಅಗ್ರಪ್ರಜೆಯನ್ನು ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಈ ಬಾರಿ ನಾಡ ಹಬ್ಬ ದಸರಾವನ್ನು ವಿದ್ಯುಕ್ತವಾಗಿ ಉದ್ಘಾಟಿಸಲಿದ್ದಾರೆ. ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಡಿಸಿಎಂ ಡಾ.ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮತ್ತಿತರರ ಗಣ್ಯರು ಸಾಥ್ ನೀಡಲಿದ್ದಾರೆ.
ವಿವಿಧ ಮಠಾಧೀಶರುಗಳು ಭಾಗಿ; ಈ ಬಾರಿಯ ದಸರಾ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿವಿಧ ಮಠಾಧೀಶರುಗಳನ್ನು ಆಹ್ವಾನಿಸಿದ್ದಾರೆ. ಹಾಗಾಗಿ ಮಠಾಧೀಶರುಗಳ ಸಮ್ಮುಖದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ.
ದಸರಾ ಉದ್ಘಾಟನೆಯ ಹಿನ್ನಲೆಯಲ್ಲಿ ಮಧ್ಯಾಹ್ನದ ತನಕ ಚಾಮುಂಡಿಬೆಟ್ಟಕ್ಕೆ ಭಕ್ತರು ಹಾಗೂ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ದಸರಾ ಕಾರ್ಯಕ್ರಮಗಳಿಗೆ ಚಾಲನೆ
ಅ. 11ರ ಬೆಳಗ್ಗೆ 11:30ಕ್ಕೆ ಕುಪ್ಪಣ್ಣ ಪಾರ್ಕ್ನಲ್ಲಿ ಆಯೋಜಿಸಲಾಗಿರುವ ದಸರಾ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಾಗುತ್ತದೆ. ಅಗ್ರಹಾರದ ನೃತ್ಯಶಾಲೆಯಲ್ಲಿ ಪುಸ್ತಕ ಮೇಳ ಹಾಗೂ ವಸ್ತು ಪ್ರದರ್ಶನ ಉದ್ಘಾಟನೆಯಾಗಲಿದೆ. ಮಧ್ಯಾಹ್ನ 12:30ಕ್ಕೆ ಪುಷ್ಪ ಮೇಳ ಮತ್ತು ಸಸ್ಯ ತೋಟ ಉದ್ಘಾಟನೆಯಾಗಲಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳಕ್ಕೆ ಚಾಲನೆ ನೀಡಲಾಗುತ್ತದೆ.
ಸಂಜೆ 4 ಗಂಟೆಗೆ ದೇವರಾಜ ಅರಸು ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿರುವ ಮಟ್ಟಿ ಮಣ್ಣಿನಲ್ಲಿ ದಸರಾ ಕುಸ್ತಿ ಪಂದ್ಯಾವಳಿ ಆರಂಭವಾಗಲಿದೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಕನ್ನಡ ಪುಸ್ತಕ ಮಾರಾಟ ಮೇಳ ಪ್ರಾರಂಭಗೊಳ್ಳಲಿದೆ.
ಸಂಜೆ 4:30ಕ್ಕೆ ಲಲಿತಕಲೆ ಮತ್ತು ಕರಕುಶಲ ಶಿಬಿರ, ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗುತ್ತದೆ. ಸಂಜೆ 5 ಗಂಟೆಗೆ ದಸರಾ ಸಾಂಸ್ಕöÈತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರÀಂಭ ಅರಮನೆಯ ಆವರಣದಲ್ಲಿ ಹಾಕಲಾಗಿರುವ ವೇದಿಕೆಯಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಆಯ್ಕೆಯಾದ ರುಕ್ಮಿಣಿ ವಿಜಯಕುಮಾರ್ ಅವರಿಗೆ ಪ್ರದಾನ ಮಾಡಲಿದ್ದಾರೆ.
ಸಂಜೆ 6:30ಕ್ಕೆ ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ವಿದ್ಯುತ್ ದೀಪಾಲಂಕಾರ ಹಸಿರು ಚಪ್ಪರದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಸ್ವಿಚ್ ಆನ್ ಮಾಡುವ ಮೂಲಕ ದಸರಾ ದೀಪಾಲಂಕಾರಕ್ಕೆ ಚಾಲನೆ ನೀಡಲಿದ್ದು, ಅರಮನೆ ನಗರಿ ಮೈಸೂರು ಹೊಸ ಬಗೆಯ ವಿದ್ಯುತ್ ದೀಪಾಲಂಕರಾರದಲ್ಲಿ ಇಂದ್ರನ ಅರಮನೆ ದೇವಲೋಕವನ್ನೂ ನಾಚಿಸುವಂತೆ ಜಗಮಗಿಸಲಿದೆ.
ರಾತ್ರಿ 7 ಗಂಟೆಗೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ವಸ್ತು ಪ್ರದರ್ಶನಕ್ಕೆ ಚಾಲನೆ ಸಿಗಲಿದೆ. ಮೈಸೂರು ಅರಮನೆ ವೇದಿಕೆಯಲ್ಲಿ ನೃತ್ಯರೂಪಕ: ದೇವಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತದೆ. ಕಾವಾ ಆವರಣದಲ್ಲಿ ಲಲಿತಕಲೆ ಮತ್ತು ಕರಕುಶಲ ಶಿಬಿರಕ್ಕೆ ಚಾಲನೆ ಸಿಗಲಿದೆ. ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ನಡೆಯಲಿದೆ. ಹೀಗೆ ಮೊದಲ ದಿನದಿಂದಲೇ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆಮಾಡಲಿದೆ.
ಖಾಸಗಿ ದರ್ಬಾರ್ ಸಂಭ್ರಮ; ಮತ್ತೊಂದೆಡೆ ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭವಾಗಲಿದೆ, ಸಿಂಹಾಸನಕ್ಕೆ ಸಿಂಹ ಜೋಡಣೆ, ಕಂಕಣಧಾರಣೆ ಹಾಗೂ ಸಿಂಹಾಸನಾರೋಹಣ ಸೇರಿದಂತೆ ಹಲವು ಸಾಂಪ್ರದಾಯಿಕ ಆಚರಣೆಗಳು ನಡೆಯಲಿವೆ. ನವರಾತ್ರಿಯ ವಿವಿಧ ದಿನಗಳಲ್ಲಿ ಸರಸ್ವತಿ ಪೂಜೆ, ಕಾಳರಾತ್ರಿ ಪೂಜೆ, ದುರ್ಗಾಷ್ಟಮಿ ಪೂಜೆ ಹಾಗೂ ಮಹಾನವಮಿ ಆಚರಣೆಗಳು ನಡೆಯಲಿವೆ.
ಬಿಗಿ ಪೊಲೀಸ್ ಬಂದೋ ಬಸ್ತ್; ನಾಡ ಹಬ್ಬ ದಸರಾ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಚಾಮುಂಡಿಬೆಟ್ಟ ಹಾಗೂ ಮೈಸೂರಿನಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದ್ದು, ಎಲ್ಲೆಡೆ ಪೊಲೀಸರ ಹದ್ದಿನ ಕಣ್ಣಿನ ಕಾವಲು ಹಾಕಲಾಗಿದೆ. ಬಾಂಬ್ ಪತ್ತೆ ಹಾಗೂ ನಿಷ್ಕಿçÃಯ ದಳ, ಕ್ಷೀಪ್ರ ಕಾರ್ಯಚರಣೆ ಪಡೆ, ಗುಪ್ತದಳ, ಚಾಮುಂಡಿಪಡೆ, ಮೀಸಲು ಸಶಸ್ತç ಪಡೆ, ಅಶ್ವದಳ ಮುಂತಾದ ಪೊಲೀಸ್ ತುಕುಡಿಗಳನ್ನು ಮೈಸೂರು ನಗರದಲ್ಲಿ ಕಾವಲಿಗೆ ನಿಯೋಜಿಸಲಾಗಿದೆ.