Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ದಸರಾ ಕನ್ನಡ ಪುಸ್ತಕ ಮಾರಾಟ ಮೇಳಕ್ಕೆ ಚಾಲನೆ: ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಿ :ಶಿವರಾಜ್ ಎಸ್ ತಂಗಡಗಿ

ಮೈಸೂರು: ಇತ್ತೀಚೆಗೆ ಮಕ್ಕಳು ಪುಸ್ತಕ ಓದುವುದನ್ನು ಬಿಟ್ಟು ಮೊಬೈಲ್, ವಾಟ್ಸ್‌ಆ್ಯಪ್ ಹಾಗೂ ಫೇಸ್‌ಬುಕ್‌ಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಇದರಿಂದ ಅವರ ಜೀವನ ಮೊಬೈಲ್‌ಮಯವಾಗುತ್ತಿದೆ. ಪೋಷಕರು ಮಕ್ಕಳಿಗೆ ಕೇವಲ ಮಳಿಗೆಗಳನ್ನು ತೋರಿಸುವುದಷ್ಟೇ ಅಲ್ಲದೆ, ಅವರಲ್ಲಿ ಪುಸ್ತಕ ಓದುವ ಹವ್ಯಾಸ ಹಾಗೂ ಸಾಹಿತ್ಯದ ಬಗ್ಗೆ ಅಭಿರುಚಿಯನ್ನು ಬೆಳೆಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ಎಸ್ ತಂಗಡಗಿ ಅವರು ಹೇಳಿದರು.

ಇಂದು ನಗರದ ಭಾರತ್ ಸ್ಕೌಟ್ಸ್ & ಗೈಡ್ಸ್ ಮೈದಾನಲ್ಲಿ ಕನ್ನಡ ಪುಸ್ತಕ ಮಾರಾಟ ಮೇಳದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಕೇವಲ ಮಳಿಗೆಯನ್ನು ತೋರಿಸುವುದಲ್ಲದೆ, ಅವರಲ್ಲಿ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿ ಅದಕ್ಕೆ ತಕ್ಕ ಅಭಿರುಚಿಯನ್ನು ಮೂಡಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ ಎಂದರು.

ಈ ಬಾರಿ ಪುಸ್ತಕ ಮೇಳಕ್ಕೆ ಸುಮಾರು 140 ಅರ್ಜಿಗಳು ಬಂದಿದ್ದು, 95 ಮಳಿಗೆಗಳ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿವರ್ಷ 9 ದಿನಗಳ ಕಾಲ ನಡೆಯುತ್ತಿದ್ದ ಈ ಮೇಳವನ್ನು ಈ ಬಾರಿ ಸಾರ್ವಜನಿಕರ ಅನುಕೂಲಕ್ಕಾಗಿ 11 ದಿನಗಳ ಕಾಲ ಅಕ್ಟೋಬರ್ 11 ರಿಂದ 21 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದರು.

ದಸರಾ ಪ್ರಕಾಶಕರು ಮತ್ತು ಮಳಿಗೆಯವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಪ್ರತಿದಿನ ಬಿಸಿ ಊಟ ಮತ್ತು ಉಪಹಾರವನ್ನು ಉಚಿತವಾಗಿ ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ರೂಪಿಸಿರುವ ‘ಮನೆಗೊಂದು ಗ್ರಂಥಾಲಯ’ ಎಂಬ ವಿಶಿಷ್ಟ ಯೋಜನೆಯನ್ನು ಮಾಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗಳಾದ ಮಂಜುಶ್ರೀ, ಎನ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ. ಎಂ. ಗಾಯತ್ರಿ,
ಕುವೆಂಪು ಕನ್ನಡ ಸಂಸ್ಥೆಯ ನಿರ್ದೇಶಕರಾದ ಪ್ರೊ. ಎಂ ನಂಜಯ್ಯ ಹೊಂಗನೂರು,ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ.ಮಾನಸ ಹಾಗೂ ಮತ್ತಿತರರು ಉಪಸ್ಥಿತರಿದ್ದರು