Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶಾಸಕರ ವಿರುದ್ಧ ಆಧಾರರಹಿತ ಆರೋಪ ಸರಿಯಲ್ಲ ; ಅಜರುದ್ದೀನ್ 

ಎಚ್. ಡಿ. ಕೋಟೆ : ಶಾಸಕ ಅನಿಲ್ ಚಿಕ್ಕಮಾದು ಕಾರ್ಯವೈಖರಿ ಪ್ರಶ್ನಿಸುವ ನೈತಿಕತೆ ಮೈಸೂರು ಬಿಜೆಪಿ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ ಅವರಿಗೆ ಇಲ್ಲ. ಶಾಸಕರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಸುಖಾಸುಮ್ಮನೆ ಆರೋಪ ಮಾಡಿದರೆ ಹೋರಾಟ ಮಾಡಬೇಕಾಗುತ್ತೆ ಎಂದು ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಅಜರುದ್ದೀನ್ ಎಚ್ಚರಿಕೆ ನೀಡಿದ್ದಾರೆ. 

ಪಟ್ಟಣದ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶಾಸಕ ಅನಿಲ್ ಚಿಕ್ಕಮಾದು ಅವರು ಕೇವಲ ಗುದ್ದಲಿ ಪೂಜೆಗಷ್ಟೇ ಸೀಮಿತರಾಗಿದ್ದಾರೆ. ಹಾರ, ಗುದ್ದಲಿಯನ್ನು ಕಾರಿನಲ್ಲೇ ಹಾಕಿಕೊಂಡು ಹೋಗಿ ಪೂಜೆ ಮಾಡುತ್ತಾ ಬರುತ್ತಿದ್ದಾರೆ. ಅವರು ಕ್ಷೇತ್ರಕ್ಕೆ ಏನು ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಕುಂಬ್ರಳ್ಳಿ ಸುಬ್ಬಣ್ಣ ಆರೋಪ ಮಾಡಿರುವುದು ಸರಿಯಲ್ಲ. ಶಾಸಕರು ಕ್ಷೇತ್ರಕ್ಕೆ ಸಾಕಷ್ಟು ಅನುದಾನ ತಂದು ರಸ್ತೆ ದುರಸ್ತಿ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಜೇಷ್ಠತೆ ಆಧಾರದ ಮೇಲೆ ರಸ್ತೆ ಅಗಲೀಕರಣ ಸೇರಿದಂತೆ ಅನೇಕ ಕೆಲಸ ಮಾಡಿಸುತ್ತಿದ್ದಾರೆ. ಇದನ್ನ ಸಹಿಸಲಾರದ ಕುಂಬ್ರಳ್ಳಿ ಸುಬ್ಬಣ್ಣನವರು, ಶಾಸಕರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ  ಶ್ವೇತಪತ್ರ  ಹೊರಡಿಸಿ ಎಂದು ಹೇಳಿದ್ದಾರೆ. ನಮ್ಮ ಕ್ಷೇತ್ರದಲ್ಲದ ಇವರಿಗೆ ನಾವ್ಯಾಕೆ ಶ್ವೇತ ಪತ್ರ ಕೊಡಬೇಕು. ಕ್ಷೇತ್ರದ ಜನ ಕೇಳಿದರೆ ಖಂಡಿತ ಶಾಸಕರು ತಮ್ಮ ಅವಧಿಯಲ್ಲಿ ಏನೆಲ್ಲಾ ಕೆಲಸಕಾರ್ಯಗಳು ಆಗಿವೆ ಎಂಬುದರ ಬಗ್ಗೆ ಶ್ವೇತ ಪತ್ರ ಹೊರಡಿಸುತ್ತಾರೆ ಎಂದು ಅಜರುದ್ದೀನ್ ಹೇಳಿದರು.

ಸಾಮಾಜಿಕ ಜಾಲತಾಣದ ಅಧ್ಯಕ್ಷ ನೆನಪು ರವಿ ಮಾತನಾಡಿ, ಶಾಸಕರನ್ನು ಪ್ರಶ್ನಿಸುವ ಕುಂಬ್ರಳ್ಳಿ ಸುಬ್ಬಣ್ಣ, ಅವರ ಪತ್ನಿ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದಾಗ ಅವರು ಕೂಡ ಗುದ್ದಲಿ, ಹಾರ ಕಾರಿನಲ್ಲಿ ಹಾಕಿಕೊಂಡು ಹೋಗಿ ಗುದ್ದಲಿ ಪೂಜೆ ಮಾಡಿ ಬಂದಿದ್ದಾರಾ ಎಂದು ಪ್ರಶ್ನಿಸಿದರು. ತಾಲೂಕು ಬಿಜೆಪಿ ಮೂರು ಬಣವಾಗಿದ್ದು ಹೇಳ ಹೆಸರಿಲ್ಲದಂತಾಗಿದೆ. ಮೊದಲು ಬಿಜೆಪಿಯನ್ನು ಸರಿಪಡಿಸಿ, ಆಮೇಲೆ ಶಾಸಕರ ಬಗ್ಗೆ ಮಾತನಾಡಿ ಎಂದು ವಾಗ್ದಾಳಿ ನಡೆಸಿದರು. 

ಈ ವೇಳೆ ತಾಲೂಕು ಕಾಂಗ್ರೆಸ್  ಸಾಮಾಜಿಕ ಜಾಲತಾಣದ ಅಧ್ಯಕ್ಷ ನೆನಪು ರವಿ, ಯೂತ್ ಕಾಂಗ್ರೆಸ್ ಟೌನ್ ಅಧ್ಯಕ್ಷ ಮಹಮ್ಮದ್ ಅಬ್ರರ್ ಹಾಜರಿದ್ದರು.